ಪ್ರತ್ಯೇಕ ಘಟನೆ: ನೇಣು ಹಾಕಿಕೊಂಡು ವಿದ್ಯಾರ್ಥಿ ಸಾವು, ಕೆಲಸದಿಂದ ತೆಗೆದಿದ್ದಕ್ಕೆ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಪುನರ್ವಸತಿ ಕೇಂದ್ರದಲ್ಲಿ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಏಕಾಏಕಿ ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದು ಗ್ರಾಮ ಪಂಚಾಯತ್ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ, ಅಕ್ಟೋಬರ್ 31: ಪುನರ್ವಸತಿ ಕೇಂದ್ರದಲ್ಲಿ 9ನೇ ತರಗತಿ ವಿದ್ಯಾರ್ಥಿ (Student) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (death) ಶರಣಾಗಿರುವಂತಹ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ನಡೆದಿದೆ. ಆಕಾಶ್ ಹೆದ್ದಾರಿ(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಜಮಖಂಡಿಯ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಓದುತ್ತಿದ್ದ. ಸದ್ಯ ಜಮಖಂಡಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆತ್ಮಹತ್ಯೆಗೆ ನಿಖರ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಏಕಾಏಕಿ ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನ
ಏಕಾಏಕಿ ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದು ಗ್ರಾಮ ಪಂಚಾಯತ್ ಗುತ್ತಿಗೆ ನೌಕರ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಜೇವರ್ಗಿ ತಾಲೂಕಿನ ರಂಜುಣಗಿಯಲ್ಲಿ ನಡೆದಿದೆ. ಪರಮಾನಂದ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗುತ್ತಿಗೆ ನೌಕರ. ಸದ್ಯ ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪರಮಾನಂದಗೆ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ: ದೇವನಹಳ್ಳಿ: ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಯತ್ನ; ಇಬ್ಬರ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ
ಪರಮಾನಂದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ರಂಜುಣಗಿ ಗ್ರಾ.ಪಂ. ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ. ಕೆಲವರ ಮಾತು ಕೇಳಿ ಪಿಡಿಒ ರುದ್ರಯ್ಯ ಕೆಲಸದಿಂದ ತೆಗೆದಿದ್ದಾರೆ. ಯಾವುದೇ ನೋಟಿಸ್ ನೀಡದೆ ಕೆಲಸದಿಂದ ತೆಗೆದಿರುವ ಆರೋಪ ಕೂಡ ಕೇಳಿಬಂದಿದೆ.
ಪೊಲೀಸರಿಂದ ಹಲ್ಲೆ ಆರೋಪ: ಯುವಕ ಆತ್ಮಹತ್ಯೆಗೆ ಯತ್ನ
ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಬಳಿಯ ಚಿಕ್ಕಬೆನ್ನೂರಿನಲ್ಲಿ ನಡೆದಿದೆ. ಕಿರಣ್(24) ಆತ್ಮಹತ್ಯೆಗೆ ಯತ್ನಸಿದ ಯುವಕ. ಪೊಲೀಸರಿಂದ ಹಲ್ಲೆ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಬಾಲಕಿ ಹತ್ಯೆ ಕೇಸ್: ಆರೋಪಿಗೂ 2ನೇ ಮದುವೆ, ತನಿಖೆ ವೇಳೆ ಇನ್ಸ್ಟಾಗ್ರಾಮ್ ರೋಮಿಯೋ ಅನ್ನೋದು ಬಯಲು
ಕಳ್ಳತನ ಪ್ರಕರಣವೊಂದರ ವಿಚಾರಣೆಗೆ ಕಿರಣ್ನನ್ನು ಅ.27ರಂದು ಠಾಣೆಗೆ ಕೆರೆದೊಯ್ದು ಪೊಲೀಸರಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಪೊಲೀಸರ ಹಿಂಸೆಯಿಂದ ಬೇಸತ್ತು ಕಿರಣ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಸಂತೆಬೆನ್ನೂರು ಪೊಲೀಸರ ವಿರುದ್ಧ ಕುಟುಂಬದವರು ಆಕ್ರೋಶ ವ್ಯಕ್ಯಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




