AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

ಹುನಗುಂದ ತಾಲೂಕಿನ ಅಮೀನಗಢ ಪಟ್ಟಣದ ಬಳಿ ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ (Dr.Shivakumar swamiji siddanakolla) ಕಾರಿಗೆ ಟಿಪ್ಪರ್ ವಾಹನ ಡಿಕ್ಕಿಯಾದ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಸ್ವಾಮೀಜಿ ತಲೆಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರು ಅಪಘಾತ; ಆಸ್ಪತ್ರೆಗೆ ದಾಖಲು
ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರು ಅಪಘಾತ
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:May 04, 2024 | 4:17 PM

Share

ಬಾಗಲಕೋಟೆ, ಮೇ.04: ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ(Dr.Shivakumar swamiji siddanakolla) ಕಾರಿಗೆ ಟಿಪ್ಪರ್ ವಾಹನ ಡಿಕ್ಕಿಯಾದ ಘಟನೆ ಹುನಗುಂದ ತಾಲೂಕಿನ ಅಮೀನಗಢ ಪಟ್ಟಣದ ಬಳಿ ನಡೆದಿದೆ. ಈ ವೇಳೆ ಸ್ವಾಮೀಜಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಶ್ರೀಗಳಿಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ತಲೆಗೆ ಗಂಭೀರ ಗಾಯವಾಗಿದೆ.

ಲಾರಿ, 3 ಕಾರುಗಳ ನಡುವೆ ಸರಣಿ ಅಪಘಾತ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ವೀರನಂಜೀಪುರ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ವೇಗವಾಗಿ ಬಂದ ಐ10 ಕಾರು ಗುದ್ದಿದೆ. ಬಳಿಕ ಐ10 ಕಾರಿಗೆ ವ್ಯಾಗನರ್​​ ಕಾರು ಡಿಕ್ಕಿ ಹೊಡೆದರೆ, ವ್ಯಾಗ್ಯರ್​ ಕಾರ್​ಗೆ ಶಿಪ್ಟ್​​ ಕಾರು ಗುದ್ದಿದೆ. ಈ ಸರಣಿ ಅಪಘಾತಗಳಿಂದ ಮೂರು ಕಾರ್​ಗಳು ಜಖಂವಾಗಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಅಪಘಾತದಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮಂಗಳೂರು: ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ; ಕಾರಿನಲ್ಲಿದ್ದವರು ಜಸ್ಟ್​ ಮಿಸ್​

ರಾಯಚೂರಿನಲ್ಲಿ ಕಾರ್​​ಗಳ ಮಧ್ಯೆ ಪರಸ್ಪರ ಡಿಕ್ಕಿ, ಗಾಯಾಳುಗಳ ನರಳಾಟ

ರಾಯಚೂರು: ಎರಡು ಕಾರ್​​ಗಳ ಮಧ್ಯೆ ಪರಸ್ಪರ ಡಿಕ್ಕಿಯಾಗಿದೆ. ರಾಯಚೂರಿನಿಂದ ತೆಲಂಗಾಣ ಮಾರ್ಗವಾಗಿ ಹೊರಟಿದ್ದ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಣ್ಣಾಮಲೈ ಲ್ಯಾಂಡ್​ ಆಗಬೇಕಿದ್ದ ಹೆಲಿಪ್ಯಾಡ್ ಪಕ್ಕದ ರಸ್ತೆಯಲ್ಲಿಯೇ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಎರಡು ಕಾರುಗಳು ನುಜ್ಜುಗುಜ್ಜಾಗಿದೆ. ಈ ಕುರಿತು ರಾಯಚೂರು ಗ್ರಾಮೀಣ ಠಾಣಾ ವ್ಯಾಪ್ತಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Sat, 4 May 24