ಬಾದಾಮಿಯಲ್ಲಿ ಕಾಲಿಗೆ ಶೂ ಧರಿಸಿ ಭೂಮಿ ಪೂಜೆ ನೆರವೇರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಿಂದ ಜನರ ಸಮಸ್ಯೆ ಬಗೆಹರಿಯಲ್ಲ. ಉಸ್ತುವಾರಿ ಸಚಿವರಾಗಿದ್ದವರು ಅವರ ಕ್ಷೇತ್ರಕ್ಕೆ ಸೀಮಿತರಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳ ಮಾತನ್ನು ಯಾರೂ ಕೇಳುವುದಿಲ್ಲ.

ಬಾದಾಮಿಯಲ್ಲಿ ಕಾಲಿಗೆ ಶೂ ಧರಿಸಿ ಭೂಮಿ ಪೂಜೆ ನೆರವೇರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
ಬಾದಾಮಿಯಲ್ಲಿ ಸಿದ್ದರಾಮಯ್ಯ
Follow us
TV9 Web
| Updated By: sandhya thejappa

Updated on:Jan 25, 2022 | 12:26 PM

ಬಾಗಲಕೋಟೆ: ಇಂದು ಬಾದಾಮಿ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಾದಾಮಿ (Badami) ತಾಲೂಕಿನ ಮುತ್ತಲಗೇರಿಯಲ್ಲಿ ಸರ್ಕಾರಿ ಪ್ರೌಢ ಶಾಲಾ ಕಟ್ಟಡದ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಸಿದ್ದರಾಮಯ್ಯ ಎಡವಟ್ಟೊಂದು ಮಾಡಿದ್ದಾರೆ. ಭೂಮಿ ಪೂಜೆ ಮಾಡುವಾಗ ಕಾಲಿನಲ್ಲಿದ್ದ ಶೂ (Shoe) ತೆಗೆದಿಲ್ಲ. ಶೂ ಧರಿಸಿಯೇ ಭೂಮಿ ಪೂಜೆ ಮಾಡಿದ್ದಾರೆ. ಸಿದ್ಧರಾಮಯ್ಯ ಬೆಂಬಲಿಗರು ಕೂಡಾ ಶೂ ಧರಿಸಿಯೇ ಭೂಮಿ ಪೂಜೆ ನೆರವೇರಿಸಿದ್ದಾರೆ.

ಸಿದ್ಧರಾಮಯ್ಯನವರಿಗೆ ವಿದ್ಯಾರ್ಥಿಗಳು ಹೂವಿನ ಸುರಿಮಳೆ ಸುರಿಸಿ ಸ್ವಾಗತ ಕೋರಿದರು. ಈ ವೇಳೆ ಸಿದ್ದು ಮಕ್ಕಳತ್ತ ಹಸನ್ಮುಖದಿಂದ ಕೈ ಬೀಸಿದರು.

ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಿಂದ ಜನರ ಸಮಸ್ಯೆ ಬಗೆಹರಿಯಲ್ಲ. ಉಸ್ತುವಾರಿ ಸಚಿವರಾಗಿದ್ದವರು ಅವರ ಕ್ಷೇತ್ರಕ್ಕೆ ಸೀಮಿತರಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳ ಮಾತನ್ನು ಯಾರೂ ಕೇಳುವುದಿಲ್ಲ. ಯಾಕಂದ್ರೆ ಇವರು ಕಮಿಷನ್ ಮೇಲೆ ನಿಂತುಬಿಟ್ಟಿದ್ದಾರೆ. ಹೀಗಾಗಿ ಉಸ್ತುವಾರಿಗಳ ಮಾತನ್ನು ಯಾರೂ ಕೇಳೋದಿಲ್ಲ ಅಂತ ಹೇಳಿದರು.

ಬಾದಾಮಿಯಿಂದ ಸ್ಪರ್ಧಿಸಲು ಬೆಂಬಲಿಗರು ಒತ್ತಾಯಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗೆ ಇನ್ನೂ ಒಂದು ಕಾಲು ವರ್ಷ ಇದೆ, ನೋಡೋಣ. ನಾನು ಈಗಲೇ ಏನೂ ಹೇಳಲಾಗಲ್ಲ. 5-6 ಕಡೆ ಚುನಾವಣೆಗೆ ನಿಲ್ಲುವಂತೆ ನನ್ನನ್ನ ಕರೆಯುತ್ತಿದ್ದಾರೆ. ಅವರನ್ನೆಲ್ಲ ಕೇಳಿ ಚುನಾವಣೆ ಹತ್ತಿರ ಬಂದಾಗ ಹೇಳುತ್ತೇನೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಯಾವಾಗಲೂ ಚುನಾವಣೆ ಎದುರಿಸಲು ಸಿದ್ಧ. ಜಿಲ್ಲಾ, ತಾಲೂಕು ಪಂಚಾಯಿತಿ, ವಿಧಾನಸಭೆ ಚುನಾವಣೆಗೂ ರೆಡಿ ಇದ್ದೀವಿ. ಪಕ್ಷ, ಕಾರ್ಯಕರ್ತರು ಚುನಾವಣೆ ಎದುರಿಸಲು ತಯಾರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ರೂಮಾಲು ಕಿತ್ತೆಸೆದ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕಾತರಕಿಯಲ್ಲಿ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆ ವೇಳೆ ವ್ಯಕ್ತಿಯೊಬ್ಬರು ರೂಮಾಲು ತೊಡಿಸಲು ಬಂದರು. ಸಿಟ್ಟಿನಿಂದ ಅರ್ಧ ತೊಡಿಸಿದ್ದ ರೂಮಾಲನ್ನು ಸಿದ್ದರಾಮಯ್ಯ ಕಿತ್ತೆಸೆದಿದ್ದಾರೆ. ಬೇಡ ಅಂದ್ರೂ ರೂಮಾಲು ಸುತ್ತಲು ಬಂದಾಗ ಸಿದ್ದರಾಮಯ್ಯ ಸಿಟ್ಟಾಗಿದ್ದಾರೆ.

ಇದನ್ನೂ ಓದಿ

‘ಆರ್​ಆರ್​ಆರ್​’ ನಿರ್ಮಾಪಕನ ಖಾತೆಯಿಂದ ಪ್ರಭಾಸ್​ಗೆ ವರ್ಗಾವಣೆ ಆಯ್ತು 50 ಕೋಟಿ ರೂಪಾಯಿ?  

ತಡರಾತ್ರಿ 2ಗಂಟೆಗೆ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಮರುಕ್ಷಣವೇ ಆಕೆಯನ್ನು ಹೊಡೆದು ಕೊಂದ ಪುತ್ರ

Published On - 11:59 am, Tue, 25 January 22

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ