ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು; ಅಭಿಮಾನಿಗಳಿಂದ ಹೆಚ್ಚಿದ ಒತ್ತಡ

| Updated By: ಆಯೇಷಾ ಬಾನು

Updated on: Jan 01, 2023 | 11:40 AM

ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಒತ್ತಡ ಹೆಚ್ಚಿದೆ. ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅಭಿಮಾನಿಗಳು ಕಾಂಗ್ರೆಸ್ ವೀಕ್ಷಕರಿಗೆ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು; ಅಭಿಮಾನಿಗಳಿಂದ ಹೆಚ್ಚಿದ ಒತ್ತಡ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us on

ಬಾಗಲಕೋಟೆ: ಬಾದಾಮಿ ಕ್ಷೇತ್ರದಿಂದಲೇ(Badami Constituency) ಸಿದ್ದರಾಮಯ್ಯ(Siddaramaiah)  ಸ್ಪರ್ಧಿಸಬೇಕೆಂದು ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರದ ಅಭಿಮಾನಿಗಳು ಅಯ್ಯಪ್ಪ ಮಾಲೆಧರಿಸಿ ಹರಕೆ ಹೊತ್ತಿದ್ದಾರೆ. ‘ಬಾದಾಮಿ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕು’ ಬಾದಾಮಿ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿ ಆಗಬೇಕೆಂದು ಶೇಖಪ್ಪ ಪವಾಡಿ, ಶ್ರೀಕಾಂತ ಪೂಜಾರಿ ಸೇರಿದಂತೆ ಹಲವರು ಹರಕೆ ಕಟ್ಟಿಕೊಂಡಿದ್ದಾರೆ. ಮಾಲಾಧಾರಿಗಳು ಜ.4ರಂದು ಸಿದ್ದರಾಮಯ್ಯ ಹೆಸರಲ್ಲಿ ಪೂಜೆ ಸಲ್ಲಿಸಲಿದ್ದಾರೆ.

ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಒತ್ತಡ ಹೆಚ್ಚಿದೆ. ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅಭಿಮಾನಿಗಳು ಕಾಂಗ್ರೆಸ್ ವೀಕ್ಷಕರಿಗೆ ಒತ್ತಾಯಿಸಿದ್ದಾರೆ. ಎಐಸಿಸಿ ಕಾರ್ಯದರ್ಶಿ ವಿಶ್ವನಾಥ್​​, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್, ಶಿವಾನಂದ ಪಾಟೀಲ್ ಅವರು ‘ಕೈ’ ಟಿಕೆಟ್ ಹಂಚಿಕೆ ಬಗ್ಗೆ ಅಭಿಪ್ರಾಯ ಸಂಗ್ರಹಕ್ಕೆ ಬಾಗಲಕೋಟೆಗೆ ಬಂದಿದ್ದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಬಾರದು. ಸಿದ್ದರಾಮಯ್ಯಗೆ ಹೊಲ, ಮನೆ ಮಾರಿ ಹೆಲಿಕಾಪ್ಟರ್ ಕೊಡಿಸುತ್ತೇವೆ. ಕ್ಷೇತ್ರದ ಕಾರ್ಯಕರ್ತರು 25 ಕೋಟಿ ರೂ. ಸಂಗ್ರಹಿಸಿ ಕೊಡುತ್ತೇವೆ. ಅವರು ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಅಭಿಮಾನಿಗಳು ಮನವಿ ಮಾಡಿದ್ದಾರೆ.

ಬಾದಾಮಿಗೆ ಸಿದ್ದರಾಮಯ್ಯ ಕಲ್ಪವೃಕ್ಷ. ಅದನ್ನು ಕಳೆದುಕೊಳ್ಳಲು ಇಷ್ಟವಿಲ್ಲ. ಮುಂದಿನ ವಾರ ಸಿದ್ದರಾಮಯ್ಯ ಅವರ ಮನವೊಲಿಸಲು ಬೆಂಗಳೂರಿಗೆ ಸಾವಿರಾರು ಮಹಿಳೆಯರು ಹೋಗುತ್ತೇವೆ ಎಂದು ಸಿದ್ದರಾಮಯ್ಯ ಅವರ ಮಹಿಳಾ ಅಭಿಮಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪರ-ವಿರೋಧದ ಪ್ರತಿಭಟನೆ ಮಧ್ಯೆಯೇ ಟಿಕೆಟ್ ಹಂಚಿಕೆಗೆ ಅಭಿಪ್ರಾಯ ಸಂಗ್ರಹ: ಸಿದ್ದರಾಮಯ್ಯ ಹೆಸರು ಪ್ರಸ್ತಾಪ

ಪರ-ವಿರೋಧದ ಪ್ರತಿಭಟನೆ ಮಧ್ಯೆಯೇ ಟಿಕೆಟ್ ಹಂಚಿಕೆಗೆ ಅಭಿಪ್ರಾಯ ಸಂಗ್ರಹ

ಕೋಲಾರ: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress)​ ತನ್ನ​ ಅಭ್ಯರ್ಥಿಗಳ ಆಯ್ಕೆಗೆ ರಾಜ್ಯಾದ್ಯಂತ ಅಭಿಪ್ರಾಯ ಸಂಗ್ರಹ ಮಾಡುತ್ತಿದೆ. ಅದರಂತೆ ಕುತೂಹಲ ಕೆರಳಿಸಿರುವ ಕೋಲಾರ ಜಿಲ್ಲೆಯ (Kolar Distrcit) ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ​ಆಯ್ಕೆಗೆ ಅಭಿಪ್ರಾಯ ಸಂಗ್ರಹ ನಡೆಯಿತು. ಈ ವೇಳೆ ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ(siddaramaiah) ಅವರೊಂದಿಗೆ ಬೇರೆಯವರ ಹೆಸರುಗಳು ಪ್ರಸ್ತಾಪವಾಗಿದೆ.

ಹೌದು….ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ. ಆದ್ರೆ, ಟಿಕೆಟ್​ಗಾಗಿ ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಕ್ಷೇತ್ರದ ಹೆಸರ ಉಲ್ಲೇಖಿಸಿಲ್ಲ. ಆದರೂ ಸಹ ಇಂದು (ಡಿಸೆಂಬರ್ 30) ಕೋಲಾರದಲ್ಲಿ ನಡೆದ ಕಾಂಗ್ರೆಸ್​ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಸಿದ್ದರಾಮಯ್ಯನವರ ಹೆಸರು ಸಹ ಪ್ರಸ್ತಾಪವಾಗಿದೆ. ಈ ಬಗ್ಗೆ ಸ್ವತಃ ವೀರಪ್ಪ ಮೋಯ್ಲಿ ಅವರು ಸ್ಕ್ರೀನಿಂಗ್ ಕಮಿಟಿ ಅಭಿಪ್ರಾಯ ಸಂಗ್ರಹಿಸಿದ ನಂತರ ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:36 am, Sun, 1 January 23