ಪರಿಷತ್ ಚುನಾವಣೆ ಟಿಕೆಟ್ ಕೈತಪ್ಪಿದ ವಿಚಾರ: ಪಕ್ಷದ ನಿರ್ಣಯ ಗೌರವಿಸುವೆ, ಸ್ವಾಗತಿಸುವೆ ಎಂದ ಎಸ್​ಆರ್ ಪಾಟೀಲ್

ನನ್ನ ರಾಜಕೀಯದಲ್ಲಿ ಮನೆಯವರು ಮೂಗು ತೂರಿಸಿಲ್ಲ. ನನ್ನ ಕಾರ್ಯವ್ಯಾಪ್ತಿಯಲ್ಲಿ ಏನಾದ್ರು ಹೇಳಿದ್ರೆ ನಾನು ಕೇಳಲ್ಲ. ಅಪ್ಪನ ನಂತರ ಮಗ, ಮಗನ ನಂತರ ಮೊಮ್ಮಗ ಒಮ್ಮೊಮ್ಮೆ ರಾಜಕೀಯದಲ್ಲಿ ಅನಿವಾರ್ಯತೆಯೂ ಇರುತ್ತದೆ ಎಂದು ಎಸ್.ಆರ್ ಪಾಟೀಲ್ ಹೇಳಿದ್ದಾರೆ.

ಪರಿಷತ್ ಚುನಾವಣೆ ಟಿಕೆಟ್ ಕೈತಪ್ಪಿದ ವಿಚಾರ: ಪಕ್ಷದ ನಿರ್ಣಯ ಗೌರವಿಸುವೆ, ಸ್ವಾಗತಿಸುವೆ ಎಂದ ಎಸ್​ಆರ್ ಪಾಟೀಲ್
ಎಸ್​ಆರ್ ಪಾಟೀಲ್
Follow us
TV9 Web
| Updated By: ganapathi bhat

Updated on:Nov 30, 2021 | 5:10 PM

ಬಾಗಲಕೋಟೆ: ಪರಿಷತ್​ ಚುನಾವಣೆಯಲ್ಲಿ ಟಿಕೆಟ್​ ಕೈತಪ್ಪಿದ ವಿಚಾರವಾಗಿ ಬಾಗಲಕೋಟೆಯಲ್ಲಿ ಎಸ್.ಆರ್. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷದ ನಿರ್ಣಯವನ್ನು ಗೌರವಿಸುವೆ, ಸ್ವಾಗತಿಸುತ್ತೇನೆ. ಟಿಕೆಟ್ ಸಿಗುತ್ತೆ ಎಂದು ನೂರಕ್ಕೆ ನೂರರಷ್ಟು ವಿಶ್ವಾಸವಿತ್ತು. ಆದರೆ, ಏಕೆ ಟಿಕೆಟ್ ನಿರಾಕರಿಸಿದರೋ ನನಗೆ ಇನ್ನೂ ಅರ್ಥವಾಗುತ್ತಿಲ್ಲ. ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸವನ್ನು ಮಾಡಿದ್ದೇನೆ. ಯಾಕೆ ಈ ನಿರ್ಧಾರ ಎಂದು ಮುಂದೆ ಗೊತ್ತಾಗಲಿದೆ ಎಂದು ಎಸ್.ಆರ್. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಕುಟುಂಬ ರಾಜಕಾರಣ ಆರೋಪದ ಬಗ್ಗೆ ಎಸ್​.ಆರ್ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ದೃಷ್ಟಿಯಲ್ಲಿ ಕುಟುಂಬ ರಾಜಕಾರಣ ಒಳ್ಳೆಯದಲ್ಲ. ನನ್ನ ರಾಜಕೀಯದಲ್ಲಿ ಮನೆಯವರು ಮೂಗು ತೂರಿಸಿಲ್ಲ. ನನ್ನ ಕಾರ್ಯವ್ಯಾಪ್ತಿಯಲ್ಲಿ ಏನಾದ್ರು ಹೇಳಿದ್ರೆ ನಾನು ಕೇಳಲ್ಲ. ಅಪ್ಪನ ನಂತರ ಮಗ, ಮಗನ ನಂತರ ಮೊಮ್ಮಗ ಒಮ್ಮೊಮ್ಮೆ ರಾಜಕೀಯದಲ್ಲಿ ಅನಿವಾರ್ಯತೆಯೂ ಇರುತ್ತದೆ ಎಂದು ಎಸ್.ಆರ್ ಪಾಟೀಲ್ ಹೇಳಿದ್ದಾರೆ.

ಕರ್ನಾಟಕದಲ್ಲಿ ವಿಧಾನ ಪರಿಷತ್ ಚುನಾವಣೆ ಡಿಸೆಂಬರ್ 10 ರಂದು ನಡೆಯಲಿದೆ. ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸುವುದಕ್ಕೆ ಎಸ್.ಆರ್. ಪಾಟೀಲ್​ಗೆ ಚುನಾವಣಾ ಟಿಕೆಟ್ ನೀಡದ ವಿಚಾರವಾಗಿ ಕಾಂಗ್ರೆಸ್​ನಲ್ಲಿ ಅಸಮಾಧಾನ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಪಾಟೀಲ್‌ ಬೆಂಬಲಿಗರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಎಸ್.ಆರ್. ಪಾಟೀಲ್, 4 ಬಾರಿ ಎಂಎಲ್​ಸಿ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಂಘಟನೆಗೆ ಹಗಲಿರುಳು ಶ್ರಮಿಸಿದ್ದರು ಎಂದು ಉಲ್ಲೇಖಿಸಿ ಪತ್ರ ಬರೆದಿದ್ದರು.

ಕಾಂಗ್ರೆಸ್ ಪಕ್ಷವೂ ತನ್ನ ಮೂಲ ಸಿದ್ಧಾಂತಗಳಿಗೆ ತಿಲಾಂಜಲಿ ಇಡುತ್ತಿದೆ. ಕಾಂಗ್ರೆಸ್ ತನ್ನ ಸಿದ್ಧಾಂತಗಳಿಗೆ ತಿಲಾಂಜಲಿ ಇಡುವ ಕಾಲ ಸನಿಹವಾಗಿದೆ ಎಂದು ಚುನಾವಣಾ ಟಿಕೆಟ್‌ ನೀಡದಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು. ಸೋನಿಯಾ ಗಾಂಧಿ ಸೇರಿದಂತೆ ಮಲ್ಲಿಕಾರ್ಜುನ ಖರ್ಗೆ, ರಣದೀಪ್​​ ಸುರ್ಜೇವಾಲ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯಗೆ ಪತ್ರ ಬರೆದು ವಿಚಾರ ತಿಳಿಸಿದ್ದರು. ಕಾಂಗ್ರೆಸ್‌ ಹಿರಿಯ ನಾಯಕರಿಗೂ ಪತ್ರ ಬರೆದು ಎಸ್.ಆರ್. ಪಾಟೀಲ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪರಿಷತ್ ಚುನಾವಣೆ: ಎಸ್​ಆರ್​ ಪಾಟೀಲ್​ಗೆ ಟಿಕೆಟ್ ಸಿಗದ ಹಿನ್ನೆಲೆ; ಸೋನಿಯಾ ಗಾಂಧಿಗೆ ಪತ್ರ ಬರೆದು ಬೆಂಬಲಿಗರ ಅಸಮಾಧಾನ

ಇದನ್ನೂ ಓದಿ: ಎಸ್​ಆರ್ ಪಾಟೀಲ್​ಗೆ ತಪ್ಪಿದ ಪರಿಷತ್ ಚುನಾವಣೆ ಟಿಕೆಟ್; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

Published On - 5:09 pm, Tue, 30 November 21