AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಫಲಿತಾಂಶ: 6ಕ್ಕೆ 6 ವಿಷಯದಲ್ಲಿ ಫೇಲ್‌ ಆಗಿದ್ರೂ ಕೇಕ್‌ ತಿನ್ನಿಸಿ ಆತ್ಮಸ್ಥೈರ್ಯ ತುಂಬಿದ ಪೋಷಕರು!

ಮಕ್ಕಳು ಪಾಸ್​ ಆದ್ರೆ ಸಾಕು ಪೋಷಕರು ಖುಷಿಪಡುತ್ತಾರೆ. ಅದರಲ್ಲೂ ರ್ಯಾಂಕ್​ ಬಂದರಂತೂ ಪೋಷಕರಿಗೆ ಆಗುವ ಖುಷಿ ಅಷ್ಟಿಷ್ಟಲ್ಲ. ಇನ್ನು ಮಗ ಅಥವಾ ಮಗಳು ಫೇಲ್ ಆದರೆ ಸಾಕು ಪೋಷಕರು ಬಾಯಿಗೆ ಬಂದಂಗೆ ಬೈಯುವುದು ಉಂಟು. ಆದ್ರೆ, ಇಲ್ಲೋರ್ವ ತಂದೆ, ತನ್ನ ಮಗ 2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಆರಕ್ಕೆ ಆರು ವಿಷಯಗಳಲ್ಲಿ ಫೇಲ್ ಆಗಿದ್ದರೂ ಸಹ ಸಂತೋಷದಿಂದ ಕೇಕ್ ಕಟ್ ಮಾಡಿಸಿ ತಿನ್ನಿಸಿದ್ದಾನೆ.

SSLC ಫಲಿತಾಂಶ: 6ಕ್ಕೆ  6 ವಿಷಯದಲ್ಲಿ ಫೇಲ್‌ ಆಗಿದ್ರೂ ಕೇಕ್‌ ತಿನ್ನಿಸಿ ಆತ್ಮಸ್ಥೈರ್ಯ ತುಂಬಿದ ಪೋಷಕರು!
Abhishek
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ರಮೇಶ್ ಬಿ. ಜವಳಗೇರಾ

Updated on:May 02, 2025 | 9:27 PM

ಬಾಗಲಕೋಟೆ, (ಮೇ 02): 2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ (SSLC Result) ಹೊರಬಿದ್ದಿದೆ. ಇಂದು (ಮೇ 02) ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu bangarappa) ಅವರು ಸುದ್ದಿಗೋಷ್ಠಿ ನಡೆಸಿ 10ನೇ ತರಗತಿ ರಿಸಲ್ಟ್​ ಪ್ರಕಟಿಸಿದ್ದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಪ್ರಥಮ ಸ್ಥಾನ ಬಂದಿದ್ದರೆ, ಕಲಬುರಗಿ (Kalaburagi) ಕೊನೆ ಸ್ಥಾನದಲ್ಲಿದೆ. ಇನ್ನು ಫಸ್ಟ್ ರ್ಯಾಂಕ್ ಬಂದವರು ಕುಣಿದು ಕುಪ್ಪಳಿಸಿದ್ದು, ಕುಟುಂಬಸ್ಥರು ಸ್ನೇಹಿತರಿಗೆ ಸಿಹಿ ತಿನ್ನಿಸಿ ಫುಲ್ ಎಂಜಾಯ್ ಮಾಡಿದ್ದಾರೆ. ಆದ್ರೆ, ಬಾಗಲಕೋಟೆಯ ನವನಗರದ ವಿದ್ಯಾರ್ಥಿಯೋರ್ವ ಆರಕ್ಕೆ ಆರು ವಿಷಯದಲ್ಲೂ ಫೇಲ್ ಆಗಿದ್ದರೂ ಸಹ ಪೋಷಕರು ಬೈಯದೇ ಕೇಕ್​ ತನ್ನಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಪರೀಕ್ಷೆಯಲ್ಲಿ ಫೇಲ್‌ ಆದರೂ ಆತ್ಮಸ್ಥೈರ್ಯ ಕುಗ್ಗಬಾರದು ಎಂಬ ಕಾರಣಕ್ಕೆ ತಂದೆ, ತಾಯಿ ಸಹೋದರ, ಸಹೋದರಿ, ಅಜ್ಜಿ ಹಾಗೂ ಕುಟುಂಬವರು ಕೇಕ್‌ ತಿನ್ನಿಸಿದ್ದಾರೆ.

ಫೇಲ್​ ಆದರೂ ಕೇಕ್​ ತಿನ್ನಿಸಿ ಆತ್ಮಸ್ಥೈರ್ಯ ತುಂಬಿದ ಪೋಷಕರು

ಬಾಗಲಕೋಟೆಯ ಬಸವೇಶ್ವರ ಹೈಸ್ಕೂಲ್‌ನಲ್ಲಿ ಆಂಗ್ಲ ಮಾಧ್ಯಮದ ಅಭಿಷೇಕ್‌ ಯಲ್ಲಪ್ಪ ಚೊಳಚಗುಡ್ಡ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 200 ಅಂಕ ಪಡೆದು ಫೇಲ್‌ ಆಗಿದ್ದಾನೆ. ಈ ಮೂಲಕ 6ಕ್ಕೆ ಆರು ವಿಷಯದಲ್ಲೂ ಅನುರ್ತೀಣನಾಗಿದ್ದಾನೆ. ಆದರೂ ಪೋಷಕರು ಒಂದಿಷ್ಟು ಆತನಿಗೆ ಬೈಯದೇ ಕೇಕ್​ ತಿನ್ನಿಸಿ ಯಾವುದೇ ಕಾರಣಕ್ಕೂ ನೊಂದು ಕೊಳ್ಳುವುದು ಬೇಡ ಎಂದು ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ
Image
SSLC Result 2025: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ
Image
SSLC ಫಲಿತಾಂಶ: 22 ವಿದ್ಯಾರ್ಥಿಗಳಿಗೆ ಔಟ್​ ಆಫ್ ಔಟ್​
Image
Karnataka SSLC Result 2025: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Image
ಕರ್ನಾಟಕ ಎಸ್‌ಎಸ್‌ಎಲ್‌ಸಿ ಶೇ. 62.14 ಫಲಿತಾಂಶ

ಇದನ್ನೂ ಓದಿ: ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್ ಮಿಥುನ್

ಬಾಗಲಕೋಟೆ ನವನಗರದಲ್ಲಿರುವ ನಿವಾಸದಲ್ಲಿ ಅಭಿಷೇಕ್‌ ಬೇಸರದಲ್ಲಿದ್ದ. ಬೇಸರದಲ್ಲಿದ್ದ ಅಭಿಷೇಕ್‌ಗೆ ಆತ್ಮಸ್ಥೈರ್ಯ ತುಂಬಲು ಅಚ್ಚರಿ ಎಂಬಂತೆ ಪೋಷಕರು ಕೇಕ್‌ ತಿನ್ನಿಸಿ ಸಿಹಿ ಮುತ್ತು ನೀಡಿ ಸಮಾಧಾನ ಮಾಡಿದ್ದಾರೆ. ಪರೀಕ್ಷೆ ಒಂದೇ ಜೀವನವಲ್ಲ. ಮರಳಿ ಪ್ರಯತ್ನ ಮಾಡು ಎಂದು ಹೆಗಲ ಮೇಲೆ ಕೈ ಇಟ್ಟು ತಂದೆ ಧೈರ್ಯ ಹೇಳಿದ್ದಾರೆ.

ಅಭಿಷೇಕ್​ಗೆ ನೆನಪಿನ ಶಕ್ತಿ ಇಲ್ಲ

Abhishek (1)

ಇನ್ನು ಅಭಿಷೇಕ್‌ 15 ತಿಂಗಳ ಮಗುವಾಗಿದ್ದಾಗ ಎರಡು ಪಾದ ಸುಟ್ಟು ಹೋಗಿದ್ದರಿಂದ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಇದರಿಂದಾಗಿ ಉತ್ತರ ನೆನಪಿಟ್ಟುಕೊಂಡು ಬರೆಯಲು ಅಭಿಷೇಕ್‌ಗೆ ಸಾಧ್ಯವಾಗಿಲ್ಲ. ಹೀಗಾಗಿ ಅಭಿಷೇಕ್​ ಫೇಲ್​ ಆಗಲು ಇದು ಪ್ರಮುಖ ಕಾರಣವಾಗಿದೆ.

ಇದನ್ನೂ ಓದಿ: SSLC Result: ಇದಪ್ಪ ಛಲ ಅಂದ್ರೆ..63ನೇ ವಯಸ್ಸಿನಲ್ಲಿ SSLC ಪರೀಕ್ಷೆ ಬರೆದು ಪಾಸಾದ ಶಿವಮೊಗ್ಗದ ಮಹಿಳೆ

ಇನ್ನು ತಂದೆ ತಾಯಿ ಕೇಕ್​ ತಿನ್ನಿಸಿದ ಬಗ್ಗೆ ಪ್ರತಿಕ್ರಿಯಿಸಿರುವ ಅಭಿಷೇಕ್, ಫೇಲ್ ಆಗಿದ್ದರಿಂದ ಬಹಳ ಬೇಸರವಾಗಿತ್ತು. ತಂದೆ, ತಾಯಿ ಎಲ್ಲರೂ ಈಗ ಧೈರ್ಯ ತುಂಬಿದ್ದಾರೆ. ಫೇಲ್ ಆದರೂ ಧೈರ್ಯ ತುಂಬಿ ಕೇಕ್ ತಿನ್ನಿಸಿ ಸಂಭ್ರಮಿಸಿದ್ದಾರೆ. ನಾನು ಪರೀಕ್ಷೆಯಲ್ಲಿ ಫೇಲ್‌ ಆಗಿರಬಹುದು, ಜೀವನದಲ್ಲಿ ಫೇಲ್ ಆಗಲ್ಲ. ಮತ್ತೆ ಪ್ರಯತ್ನ ಮಾಡಿ ಪಾಸ್ ಆಗುತ್ತೇನೆ. ಪರೀಕ್ಷೆಯಲ್ಲಿ ಫೇಲ್ ಆದರೂ ಜೀವನದಲ್ಲಿ ಸಾಧಿಸಿ ತೋರಿಸುತ್ತೇನೆ ಎಂದಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:16 pm, Fri, 2 May 25

Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!