ಹೃದಯ ಸಂಬಂಧಿ ಚಿಕಿತ್ಸೆ ಕೊಡಿಸಲು ವಿದ್ಯಾರ್ಥಿಯನ್ನು ಬೆಂಗಳೂರಿಗೆ ಕರೆಸಿಕೊಂಡ ಗೋವಿಂದ ಕಾರಜೋಳ

| Updated By: ganapathi bhat

Updated on: Aug 15, 2021 | 11:30 PM

ಗಂಗಮ್ಮಗೆ ಹೃದಯ ಸಂಬಂಧಿ ಕಾಯಿಲೆ ಇರುವುದು ಗಮನಕ್ಕೆ ಬಂದಿತ್ತು. ಈ ವೇಳೆ ಸಚಿವ ಗೋವಿಂದ ಕಾರಜೋಳ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು.

ಹೃದಯ ಸಂಬಂಧಿ ಚಿಕಿತ್ಸೆ ಕೊಡಿಸಲು ವಿದ್ಯಾರ್ಥಿಯನ್ನು ಬೆಂಗಳೂರಿಗೆ ಕರೆಸಿಕೊಂಡ ಗೋವಿಂದ ಕಾರಜೋಳ
ವಿದ್ಯಾರ್ಥಿ ಗಂಗಮ್ಮ
Follow us on

ಬಾಗಲಕೋಟೆ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲ್ತಿದ್ದ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸಲು ಸಚಿವ ಗೋವಿಂದ ಕಾರಜೋಳ ವಿದ್ಯಾರ್ಥಿನಿ ಗಂಗಮ್ಮಳನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಮುಚಖಂಡಿ ಗ್ರಾಮದ ನಿವಾಸಿ ಗಂಗಮ್ಮ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದಿದ್ದರು. ಗಂಗಮ್ಮಳ ಸಾಧನೆಗೆ ಕರೆ ಮಾಡಿ ಸಚಿವರು ಅಭಿನಂದಿಸಿದ್ದರು. ಹೃದಯದ ಸಮಸ್ಯೆ ಹಾಗೂ ಉಸಿರಾಟದ ತೊಂದರೆ ಇದ್ದಾಗಿಯೂ ವಿದ್ಯಾರ್ಥಿ ಗಂಗಮ್ಮ ಈ ಬಾರಿ ಪರೀಕ್ಷೆ ಬರೆದು ಪೂರ್ಣ ಅಂಕಗಳನ್ನು ಪಡೆದಿದ್ದರು.

ಬಳಿಕ, ಗಂಗಮ್ಮಗೆ ಹೃದಯ ಸಂಬಂಧಿ ಕಾಯಿಲೆ ಇರುವುದು ಗಮನಕ್ಕೆ ಬಂದಿತ್ತು. ಈ ವೇಳೆ ಸಚಿವ ಗೋವಿಂದ ಕಾರಜೋಳ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಸಚಿವ ಕಾರಜೋಳ ಸೂಚನೆ ಮೇರೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಕೂಡ ಭೇಟಿ ನೀಡಿದ್ದರು. ಡಿಎಚ್​ಒ ದೇಸಾಯಿ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿದ್ದರು. ಬಳಿಕ, ಅನಂತ ದೇಸಾಯಿ ವಿದ್ಯಾರ್ಥಿ ಗಂಗಮ್ಮಳನ್ನು ಬೆಂಗಳೂರಿಗೆ ಕಳಿಸಲು ವ್ಯವಸ್ಥೆ ಮಾಡಿದ್ದರು. ಹಾಗಾಗಿ, ಇಂದು ಗಂಗಮ್ಮ ಹಾಗೂ ಪೋಷಕರು ಬೆಂಗಳೂರಿಗೆ ತೆರಳಿದ್ದಾರೆ.

ಇದನ್ನೂ ಓದಿ: ಕೊನೆ ಅರ್ಧ ಗಂಟೆ ಪರೀಕ್ಷೆ ಆಕ್ಸಿಜನ್ ಸಪೋರ್ಟ್ ಮೇಲಿದ್ದು ಬರೆದ ಈ ತಾಂಡಾ ಹುಡುಗಿ ಎಲ್ಲ 625 ಅಂಕ ಬಾಚಿಕೊಂಡಳು!

ಹೃದಯ ಕಾಯಿಲೆಯಿಂದ ಬಳಲುತ್ತಿರುವ ಎಸ್​ಎಸ್​ಎಲ್​ಸಿ ಟಾಪರ್ ಗಂಗಮ್ಮ ಮನೆಗೆ ಶಾಸಕ ವೀರಣ್ಣ ಚರಂತಿಮಠ ಭೇಟಿ

Published On - 11:28 pm, Sun, 15 August 21