ಬಾಗಲಕೋಟೆ, ಡಿಸೆಂಬರ್ 13: ಬೀಳಗಿ (Bilagi) ತಾಲ್ಲೂಕಿನ ಸುನಗ ಗ್ರಾಮದಲ್ಲಿರುವ ವಿದ್ಯಾರ್ಥಿನಿಯರ (Students) ಅಂಬೇಡ್ಕರ್ ವಸತಿ ನಿಲಯದ ವಾರ್ಡನ್ ಸಂಕನಗೌಡ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಹಾಸ್ಟೇಲ್ನ 3-4 ವಿದ್ಯಾರ್ಥಿನಿಯರ ಎದೆ, ನಡು ಹಾಗೂ ಹಿಂಭಾಗ ಮುಟ್ಟಿ ವಾರ್ಡನ್ ಸಂಕನಗೌಡ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯರು ಹಾಗೂ ಪೋಷಕರು ಆರೋಪಿಸಿದ್ದಾರೆ.
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಪ್ರಶ್ನಿಸಿದರೇ, ನೋಟಿಸ್ ನೀಡಿದ್ದೇವೆ ಎಂದು ಹೇಳಿ ಕೈ ತೊಳೆದುಕೊಂಡಿದ್ದಾರೆ. ಆದರೆ ಹಾಸ್ಟೆಲ್ ವಾರ್ಡನ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ಸದ್ಯ ವಾರ್ಡನ್ ಹಾಸ್ಟೆಲ್ಗೆ ಬಾರದೆ ರಜೆಯಲ್ಲಿದ್ದಾನೆ.
ಚಿತ್ರದುರ್ಗ: ಜಿಲ್ಲಾ ಕಾರಾಗೃಹದ ಜೈಲರ್ ಶ್ರೀಮಂತ ಗೌಡ ಪಾಟೀಲ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲರ್ಗೆ ಶೋಕಾಸ್ ನೋಟಿಸ್ ನೀಡಿದೆ. ನ್ಯಾಮತಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದರಲ್ಲಿ ಹೊನ್ನಾಳಿ ತಾಲೂಕಿನ ಚಿಲೂರು ಗ್ರಾಮದ ಚಂದ್ರಪ್ಪ ಎಂಬ ಆರೋಪಿಯ ಬಂಧನವಾಗಿದೆ. ಆರೋಪಿಯನ್ನು ದಾವಣಗೆರೆ ಜೈಲಿಂದ ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ನೀಡಿದ ಆರೋಪ: ಶಿವಮೊಗ್ಗದ ಇಬ್ಬರು ಶಿಕ್ಷಕರು ಅಮಾನತು
ಚಿತ್ರದುರ್ಗ ಜೈಲಿನ ಜೈಲರ್ ಶ್ರೀಮಂತ ಗೌಡ ಪಾಟೀಲ್ ತನಗೆ (ಆರೋಪಿ ಚಂದ್ರಪ್ಪ) ಜಾತಿ ಆಧರಿತ ಹಿಂಸೆ ನೀಡಿದ್ದು ಮತ್ತು ಥಳಿತಿಳಿಸಿದ್ದಾರೆ ಎಂದು ವಕೀಲರ ಮೂಲಕ ಕೋರ್ಟ್ಗೆ ಲಿಖಿತ ದೂರು ನೀಡಿದ್ದಾರೆ. ಅಲ್ಲದೆ ಚಿತ್ರದುರ್ಗ ಜೈಲಿನಿಂದ ದಾವಣಗೆರೆ ಜೈಲಿಗೆ ಶಿಫ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.
ಆರೋಪಿ ಚಂದ್ರಪ್ಪ ನೀಡಿರುವ ದೂರು ಆಧರಿಸಿ ನ್ಯಾಯಾಲಯ ನೋಟಿಸ್ ನೀಡಿದೆ. ನೋಟಿಸ್ ತಲುಪಿದ ಒಂದು ವಾರದೊಳಗೆ ಜೈಲರ್ ಶ್ರೀಮಂತ ಗೌಡ ಪಾಟೀಲ್ ಖುದ್ದಾಗಿ ಹಾಜರಾಗಿ ಉತ್ತರಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ