AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಶಾಲೆಯಿಂದ ವಾಪಸ್ ತೆರಳಲು ಬಸ್ ಇಲ್ಲದ ಹಿನ್ನೆಲೆ; ವಿದ್ಯಾರ್ಥಿಗಳ ಪ್ರತಿಭಟನೆ

ರಸ್ತೆಯಲ್ಲಿ ಬಸ್ ತಡೆದ ಪರಿಣಾಮ ಕುಳಗೇರಿ ಕ್ರಾಸ್ -ಬಾದಾಮಿ ಮಾರ್ಗದ ಸಂಚಾರ ಕೆಲಕಾಲ ಅಸ್ತವ್ಯಸ್ತವಾಗಿತ್ತು. ನಂತರ ಕೆಎಸ್​ಆರ್​ಟಿಸಿ ಸಿಬ್ಬಂದಿ ಬಸ್ ಬಿಡುವ ಭರವಸೆ ನೀಡಿ ಮನವೊಲಿಸಿದ ಕಾರಣ ಪ್ರತಿಭಟನೆ ಕೈ ಬಿಟ್ಟಿದ್ದಾರೆ.

ಬಾಗಲಕೋಟೆ: ಶಾಲೆಯಿಂದ ವಾಪಸ್ ತೆರಳಲು ಬಸ್ ಇಲ್ಲದ ಹಿನ್ನೆಲೆ; ವಿದ್ಯಾರ್ಥಿಗಳ ಪ್ರತಿಭಟನೆ
ಕೆಎಸ್​ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)
TV9 Web
| Updated By: ganapathi bhat|

Updated on: Dec 11, 2021 | 6:15 PM

Share

ಬಾಗಲಕೋಟೆ: ಶಾಲೆಯಿಂದ ವಾಪಸ್ ಗ್ರಾಮಕ್ಕೆ ತೆರಳಲು ಬಸ್ ಇಲ್ಲದ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ಕೆಎಸ್​ಆರ್​ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಬೀರನೂರು, ತಳಕವಾಡ, ಆಲೂರು.ಎಸ್.ಕೆ, ಹಾಗನೂರು, ಕರ್ಲಕೊಪ್ಪ ಗ್ರಾಮದ ವಿದ್ಯಾರ್ಥಿಗಳಿಂದ ಬಸ್ ತಡೆದು ಧರಣಿ ನಡೆಸಲಾಗಿದೆ.

ಮದ್ಯಾಹ್ನವೇ ಶಾಲೆ ಬಿಟ್ಟರೂ ಸಂಜೆ ಐದು ಗಂಟೆ ಆದರೂ ಬಸ್ ಬಾರದ ಹಿನ್ನೆಲೆ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದರು. ಇದರಿಂದ ಕುಳಗೇರಿ ಕ್ರಾಸ್ ನಲ್ಲಿ ಬಾದಾಮಿ ಮಾರ್ಗದ ಬಸ್ ತಡೆದು ಸಮರ್ಪಕ‌ ಬಸ್ ಬಿಡುವಂತೆ ಆಗ್ರಹ ಮಾಡಿದ್ದರು. ಸ್ಥಳಕ್ಕೆ ಬಂದ ಕೆಎಸ್​ಆರ್​ಟಿಸಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ರಸ್ತೆಯಲ್ಲಿ ಬಸ್ ತಡೆದ ಪರಿಣಾಮ ಕುಳಗೇರಿ ಕ್ರಾಸ್ -ಬಾದಾಮಿ ಮಾರ್ಗದ ಸಂಚಾರ ಕೆಲಕಾಲ ಅಸ್ತವ್ಯಸ್ತವಾಗಿತ್ತು. ನಂತರ ಕೆಎಸ್​ಆರ್​ಟಿಸಿ ಸಿಬ್ಬಂದಿ ಬಸ್ ಬಿಡುವ ಭರವಸೆ ನೀಡಿ ಮನವೊಲಿಸಿದ ಕಾರಣ ಪ್ರತಿಭಟನೆ ಕೈ ಬಿಟ್ಟಿದ್ದಾರೆ.

ಹಾಸನ: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಹಾಸನದ ಹೇಮಾವತಿ ಪ್ರತಿಮೆ ಬಳಿ ನಡೆದಿದೆ. ಎಐಡಿಎಸ್​ಒ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ. ಪೂರ್ವಸಿದ್ಧತೆ ಮಾಡಿಕೊಳ್ಳದೆ ಎನ್​ಇಪಿ ಜಾರಿಗೆ ಆಕ್ರೋಶ ವ್ಯಕ್ತವಾಗಿದೆ. ಹೊಸ ಪಠ್ಯಕ್ರಮಕ್ಕೆ ತಯಾರಿಯನ್ನೇ ಮಾಡದೆ ಏಕಾಏಕಿ ಹೊಸ ಪದ್ದತಿ ಹೇರಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ. ಹೊಸ ಶಿಕ್ಷಣ ಪದ್ದತಿಯಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಿದೆ ಎಂದು ಆರೋಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ತುಮಕೂರು: ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರ ಧರಣಿ ಅತಿಥಿ ಉಪನ್ಯಾಸಕರ ನೇಮಕದಲ್ಲಿ ಸರ್ಕಾರದ ನೀತಿಗೆ ಖಂಡನೆ ವ್ಯಕ್ತವಾಗಿದೆ. ತುಮಕೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರು ಧರಣಿ ಕೈಗೊಂಡಿದ್ದಾರೆ. ಪಾಠ ಪ್ರವಚನ ಬಹಿಷ್ಕರಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ಮಾಡಿದ್ದಾರೆ.

ಇದನ್ನೂ ಓದಿ: Parliament Winter Session ರೈತರ ಪ್ರತಿಭಟನೆಯ ವೇಳೆ ಪೊಲೀಸರ ಕ್ರಮದಿಂದಾಗಿ ರೈತರು ಸಾವಿಗೀಡಾಗಿಲ್ಲ: ಕೇಂದ್ರ ಸಚಿವ ತೋಮರ್

ಇದನ್ನೂ ಓದಿ: ಕಲಬುರಗಿ: ವರ್ಗಾವಣೆಗೊಂಡ ಶಿಕ್ಷಕನ ಬಿಳ್ಕೋಡುಗೆ ಕಾರ್ಯಕ್ರಮದಲ್ಲಿ ಗಳಗಳನೆ ಅತ್ತ ವಿದ್ಯಾರ್ಥಿನಿಯರು

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ