ಪಂಚಮಸಾಲಿ ಪೀಠಕ್ಕೆ ಜಡಿದಿದ್ದ ಬೀಗ ನಿನ್ನೆಯೇ ಓಪನ್​​: ಕಾಶಪ್ಪನವರ್, ಸ್ವಾಮೀಜಿ ಮಧ್ಯದ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್​

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠ ನಾಡಿನ ದೊಡ್ಡ ಸಮಾಜದ ಪೀಠ. ಇದೇ ಪೀಠಕ್ಕೆ ಬೀಗ ಬಿದ್ದಿದ್ದು ಹೊಸ ಚರ್ಚೆಗೆ ಗ್ರಾಸವಾಗಿತ್ತು. ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ಭೇಟಿ ಬೆನ್ನಲ್ಲೇ ಪೀಠಕ್ಕೆ ಜಡಿದಿದ್ದ ಬೀಗವನ್ನು ನಿನ್ನೆಯೇ ಓಪನ್​ ಮಾಡಲಾಗಿದೆ.

ಪಂಚಮಸಾಲಿ ಪೀಠಕ್ಕೆ ಜಡಿದಿದ್ದ ಬೀಗ ನಿನ್ನೆಯೇ ಓಪನ್​​: ಕಾಶಪ್ಪನವರ್, ಸ್ವಾಮೀಜಿ ಮಧ್ಯದ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್​
ಪಂಚಮಸಾಲಿ ಪೀಠ
Updated By: ಗಂಗಾಧರ​ ಬ. ಸಾಬೋಜಿ

Updated on: Jul 16, 2025 | 1:02 PM

ಬಾಗಲಕೋಟೆ, ಜುಲೈ 16: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ (Panchamasali Peetha) ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್‌ ನಾಯಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು ಕೂಡ ಪೀಠದ ಎದುರು ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿದ್ದು, ಪೀಠಕ್ಕೆ ಜಡಿದಿದ್ದ ಬೀಗವನ್ನು ನಿನ್ನೆಯೇ ತೆರೆಯಲಾಗಿದೆ. ಆ ಮೂಲಕ ಇಬ್ಬರ ಮಧ್ಯೆದ ಗುದ್ದಾಟ ತಾತ್ಕಾಲಿಕ ಸುಖಾಂತ್ಯ ಕಂಡಿದೆ.

ಕಳೆದ ನಾಲ್ಕು ದಿನದ ಹಿಂದೆಯೇ ಕೂಡಲ ಸಂಗಮದ ಪೀಠಕ್ಕೆ ಬೀಗ ಬಿದ್ದಿತ್ತು. ವಿವಾದ ತೀವ್ರಗೊಳ್ಳುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮುಖಂಡರು ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್​ ಅವರೊಂದಿಗೆ ಸಭೆ ಮಾಡಿ ಇದೀಗ ಪೀಠಕ್ಕೆ ಜಡಿದಿದ್ದ ಬೀಗವನ್ನು ತೆರೆದಿದ್ದಾರೆ. ಬಳಿಕ ವಿಜಯಾನಂದ ಕಾಶಪ್ಪನವರ್ ಮತ್ತು ಬಸವಜಯಮೃತ್ಯುಂಜಯ ಸ್ವಾಮೀಜಿ ಬೆಂಬಲಿಗರಿಂದ ಪೀಠದಲ್ಲಿ ಸಭೆ ಕೂಡ ಮಾಡಲಾಗಿದೆ. ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಜೊತೆಗೆ ವಿವಾದ ಹಿನ್ನಲೆ ಬಂದ ಆಗಿದ್ದ ಪೀಠದಲ್ಲಿರುವ ಕನ್ನಡ ಪ್ರಾಥಮಿಕ ಶಾಲೆ ಕೂಡ ಇದೀಗ ಆರಂಭಗೊಂಡಿದೆ.

ಪೊಲೀಸ್ ಭದ್ರತೆ

ಮಂಗಳವಾರ ಹುನಗುಂದ ಪಟ್ಟಣದಲ್ಲಿ ಪಂಚಮಸಾಲಿ ಸಮಾಜದ ಮುಖಂಡರ ಸಭೆ ಬಳಿಕ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ನಿನ್ನೆ ಸಂಜೆ ಪೀಠಕ್ಕೆ ಭೇಟಿ ನೀಡಿದ್ದರು. ಸ್ವಾಮೀಜಿ ಆಗಮಿಸಿದ್ದರಿಂದ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಸಮಾಜದ ಜನರು ಭೇಟಿಗೆ ಬರುತ್ತಿದ್ದಾರೆ. ಸದ್ಯ ಪೀಠಕ್ಕೆ ಹಾಗೂ ಸ್ವಾಮೀಜಿ ಸುರಕ್ಷತಾ ದೃಷ್ಟಿಯಿಂದ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ
ಕೂಡಲಸಂಗಮ ಪೀಠಕ್ಕೆ ಬೀಗ, ಈವರೆಗೆ ಏನೇನಾಯ್ತು? ಇಲ್ಲಿದೆ ಸಮಗ್ರ ವಿವರ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಜಯಮೃತ್ಯುಂಜಯ ಸ್ವಾಮೀಜಿಗೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ

ಇದನ್ನೂ ಓದಿ: ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ: ಕಾಶಪ್ಪನವರ್ ಸೂಚನೆ ಮೇರೆಗೆ ಕ್ರಮ! ಈವರೆಗೆ ಏನೇನಾಯ್ತು? ಇಲ್ಲಿದೆ ಸಮಗ್ರ ಮಾಹಿತಿ

ಭಾನುವಾರ ಬೀಗ ತೆಗೆಯಲು ಯತ್ನಿಸಲಾಗಿದೆ ಎಂದು ಕಾಶಪ್ಪನವರ್‌ ಬೆಂಬಲಿಗರು ಹುನಗುಂದ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಬೀಗ ಒಡೆದ ಆರೋಪದಲ್ಲಿ ಸ್ವಾಮೀಜಿ ಕಡೆಯ ಐವರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಈ ಬಗ್ಗೆ ಸ್ವಾಮೀಜಿಗಳನ್ನು ಕೇಳಿದರೆ ನನಗೇನು ಗೊತ್ತಿಲ್ಲ ಎಂದಿದ್ದಾರೆ.

ಜಯಮೃತ್ಯಂಜಯ ಶ್ರೀಗಳು ಹೇಳಿದ್ದಿಷ್ಟು

ಪಂಚಮಸಾಲಿ ಸಮಾಜದ ಮುಖಂಡರ ಸಭೆ ಬಳಿಕ ಪ್ರತಿಕ್ರಿಸಿದ್ದ ಜಯಮೃತ್ಯಂಜಯ ಶ್ರೀಗಳು, ‘ನಾನು ಸಮಾಜ ಸಂಘಟನೆ ಹಾಗೂ ಮೀಸಲಾತಿ ಹೋರಾಟಕ್ಕೆ ಸಮಾಜದ ಜನರನ್ನು ಸಿದ್ದತೆಗೊಳಿಸಲು ಜಿಲ್ಲೆ ಜಿಲ್ಲೆ ಪ್ರವಾಸ ಕೈಗೊಂಡಿದ್ದೇನೆ. ಈ ಹಿನ್ನೆಲೆ ಪೀಠದ ಕಡೆಗೆ ಹೋಗಲು ಆಗಿಲ್ಲ. ನಾನು ಹೊರಗಡೆ ಇದ್ದಾಗ ಅಲ್ಲಿ ಏನು ನಡೆದಿದೆಯೋ ನನಗೆ ಗೊತ್ತಿಲ್ಲ. ಯಾರು ಬೀಗ ಹಾಕಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಕೂಡಲಸಂಗಮದ ಪೀಠಕ್ಕೆ ಹೋದ ಮೇಲೆಯೇ ನೈಜ ಸ್ಥಿತಿ ಗೊತ್ತಾಗಲಿದೆ’ ಎಂದು ಹೇಳಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:59 pm, Wed, 16 July 25