ಬಾಗಲಕೋಟೆ: ನಿಧಿ ಆಸೆಗೆ ದೇವಸ್ಥಾನದ ಗರ್ಭಗುಡಿಯಲ್ಲಿನ ಲಿಂಗವನ್ನ ಒಡೆದ ಕಳ್ಳರು
ಇಳಕಲ್ (Ilkal) ತಾಲೂಕಿನ ಕೆಲೂರು ಗ್ರಾಮದಲ್ಲಿ ನಿಧಿ ಆಸೆಗೆ ದೇವಸ್ಥಾನದ ಗರ್ಭಗುಡಿಯಲ್ಲಿನ ಲಿಂಗವನ್ನ ಒಡೆದು ಕೆಳಭಾಗದ ನೆಲವನ್ನು ಅಗೆದು ಪರಾರಿಯಾಗಿದ್ದಾರೆ. ಇನ್ನು ಈ ಪಂಚಲಿಂಗೇಶ್ವರ ದೇಗುಲವನ್ನ ಚಾಲುಕ್ಯರ ಕಾಲದಲ್ಲಿ ನಿರ್ಮಿಸಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆ, ಜೂ.26: ನಿಧಿ(Treasure) ಆಸೆಗೆ ದೇವಸ್ಥಾನದ ಗರ್ಭಗುಡಿಯಲ್ಲಿನ ಲಿಂಗವನ್ನ ಒಡೆದ ಘಟನೆ ಇಳಕಲ್ (Ilkal) ತಾಲೂಕಿನ ಕೆಲೂರು ಗ್ರಾಮದಲ್ಲಿ ನಡೆದಿದೆ. ದುಷ್ಕರ್ಮಿಗಳು ಪಂಚಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿನ ಈಶ್ವರಲಿಂಗ ಮೂರ್ತಿಯನ್ನು ಒಡೆದು ಕೆಳಭಾಗದ ನೆಲವನ್ನು ಅಗೆದು ಪರಾರಿಯಾಗಿದ್ದಾರೆ. ಇನ್ನು ಈ ಪಂಚಲಿಂಗೇಶ್ವರ ದೇಗುಲವನ್ನ ಚಾಲುಕ್ಯರ ಕಾಲದಲ್ಲಿ ನಿರ್ಮಿಸಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಇಂತಹುದೇ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಿಂದ 3 ಕೀ.ಮೀ ದೂರದಲ್ಲಿರುವ ಕದಾಂಪೂರ ಗ್ರಾಮದ ರಸ್ತೆಗೆ ಹೊಂದಿಕೊಂಡಿರುವ ಜಮೀನೊಂದರಲ್ಲಿ ನಡೆದಿತ್ತು. ಐತಿಹಾಸಿಕ ದೇವಸ್ಥಾನವೊಂದರಲ್ಲಿ ನಿಧಿ ಆಸೆಗಾಗಿ ಕಳ್ಳರು ಮೂರ್ತಿಯಿರುವ ಸ್ಥಳ ಅಗೆದಿದ್ದರು. ಐತಿಹಾಸಿಕ ಸೋಮೇಶ್ವರ ದೇವಾಲಯದ ಒಳಗೆ ಈಶ್ವರಲಿಂಗ ಮೂರ್ತಿಯ ಮುಂದೆ ಇದ್ದ ಬಸವಣ್ಣನ ಮೂರ್ತಿಯನ್ನು ಕಿತ್ತು ಹಾಕಿ, ಅದರ ಕೆಳಗೆ ಸುಮಾರು ಹತ್ತು ಅಡಿ ಆಳಕ್ಕೆ ಅಗೆಯಲಾಗಿತ್ತು.
ಅರ್ಚಕರು ಮುಂಜಾನೆ ಪೂಜೆ ನೆರವೇರಿಸಲು ತೆರಳಿದಾಗ ಕೃತ್ಯ ಬೆಳಕಿಗೆ ಬಂದಿತ್ತು. ಕಳೆದ ಎರಡು ವರ್ಷಗಳ ಹಿಂದೆ ಇದೇ ದೇವಸ್ಥಾನದಲ್ಲಿ ಇಂತಹ ಪ್ರಕರಣ ನಡೆದಿತ್ತು. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ ಎಂದು ಅರ್ಚಕರು ತಿಳಿಸಿದ್ದರು. ಇನ್ನು ಇದೀಗ ಇಳಕಲ್ ತಾಲೂಕಿನ ಕೆಲೂರು ಗ್ರಾಮದಲ್ಲಿ ಇಂತಹ ಘಟನೆ ನಡೆದಿದ್ದು, ಪೊಲೀಸರು ತನಿಖೆ ಶುರುಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ