ಬಾಗಲಕೋಟೆ: ನಿಧಿ ಆಸೆಗೆ ದೇವಸ್ಥಾನದ ಗರ್ಭಗುಡಿಯಲ್ಲಿನ ಲಿಂಗವನ್ನ ಒಡೆದ ಕಳ್ಳರು

ಇಳಕಲ್ (Ilkal)​ ತಾಲೂಕಿನ ಕೆಲೂರು ಗ್ರಾಮದಲ್ಲಿ ನಿಧಿ ಆಸೆಗೆ ದೇವಸ್ಥಾನದ ಗರ್ಭಗುಡಿಯಲ್ಲಿನ ಲಿಂಗವನ್ನ ಒಡೆದು ಕೆಳಭಾಗದ ನೆಲವನ್ನು ಅಗೆದು ಪರಾರಿಯಾಗಿದ್ದಾರೆ. ಇನ್ನು ಈ ಪಂಚಲಿಂಗೇಶ್ವರ ದೇಗುಲವನ್ನ ಚಾಲುಕ್ಯರ ಕಾಲದಲ್ಲಿ ನಿರ್ಮಿಸಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆ: ನಿಧಿ ಆಸೆಗೆ ದೇವಸ್ಥಾನದ ಗರ್ಭಗುಡಿಯಲ್ಲಿನ ಲಿಂಗವನ್ನ ಒಡೆದ ಕಳ್ಳರು
ಬಾಗಲಕೋಟೆಯಲ್ಲಿ ನಿಧಿಗಾಗಿ ದೇವಸ್ಥಾನದ ಗರ್ಭಗುಡಿಯಲ್ಲಿದ್ದ ಲಿಂಗವನ್ನು ಒಡೆದ ಕಳ್ಳರು
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 26, 2024 | 4:59 PM

ಬಾಗಲಕೋಟೆ, ಜೂ.26: ನಿಧಿ(Treasure) ಆಸೆಗೆ ದೇವಸ್ಥಾನದ ಗರ್ಭಗುಡಿಯಲ್ಲಿನ ಲಿಂಗವನ್ನ ಒಡೆದ ಘಟನೆ ಇಳಕಲ್ (Ilkal)​ ತಾಲೂಕಿನ ಕೆಲೂರು ಗ್ರಾಮದಲ್ಲಿ ನಡೆದಿದೆ. ದುಷ್ಕರ್ಮಿಗಳು ಪಂಚಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿನ ಈಶ್ವರಲಿಂಗ ಮೂರ್ತಿಯನ್ನು ಒಡೆದು ಕೆಳಭಾಗದ ನೆಲವನ್ನು ಅಗೆದು ಪರಾರಿಯಾಗಿದ್ದಾರೆ. ಇನ್ನು ಈ ಪಂಚಲಿಂಗೇಶ್ವರ ದೇಗುಲವನ್ನ ಚಾಲುಕ್ಯರ ಕಾಲದಲ್ಲಿ ನಿರ್ಮಿಸಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಇಂತಹುದೇ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಿಂದ 3 ಕೀ.ಮೀ ದೂರದಲ್ಲಿರುವ ಕದಾಂಪೂರ ಗ್ರಾಮದ ರಸ್ತೆಗೆ ಹೊಂದಿಕೊಂಡಿರುವ ಜಮೀನೊಂದರಲ್ಲಿ ನಡೆದಿತ್ತು. ಐತಿಹಾಸಿಕ ದೇವಸ್ಥಾನವೊಂದರಲ್ಲಿ ನಿಧಿ ಆಸೆಗಾಗಿ ಕಳ್ಳರು ಮೂರ್ತಿಯಿರುವ ಸ್ಥಳ ಅಗೆದಿದ್ದರು. ಐತಿಹಾಸಿಕ ಸೋಮೇಶ್ವರ ದೇವಾಲಯದ ಒಳಗೆ ಈಶ್ವರಲಿಂಗ ಮೂರ್ತಿಯ ಮುಂದೆ ಇದ್ದ ಬಸವಣ್ಣನ ಮೂರ್ತಿಯನ್ನು ಕಿತ್ತು ಹಾಕಿ, ಅದರ ಕೆಳಗೆ ಸುಮಾರು ಹತ್ತು ಅಡಿ ಆಳಕ್ಕೆ ಅಗೆಯಲಾಗಿತ್ತು.

ಇದನ್ನೂ ಓದಿ:ನಿಧಿ ಆಸೆ ತೋರಿಸಿ ಮಗಳು-ಅಳಿಯನಿಂದ ತಂದೆ-ತಾಯಿಗೆ ವಂಚನೆ: ನಡುರಾತ್ರಿ ಪೂಜೆ ಮಾಡಿಸಿ, ಎಣ್ಣೆ ಶಾಸ್ತ್ರವನ್ನೂ ಮಾಡಿದ ಆರೋಪಿಗಳು!

ಅರ್ಚಕರು ಮುಂಜಾನೆ ಪೂಜೆ ನೆರವೇರಿಸಲು ತೆರಳಿದಾಗ ಕೃತ್ಯ ಬೆಳಕಿಗೆ ಬಂದಿತ್ತು. ಕಳೆದ ಎರಡು ವರ್ಷಗಳ ಹಿಂದೆ ಇದೇ ದೇವಸ್ಥಾನದಲ್ಲಿ ಇಂತಹ ಪ್ರಕರಣ ನಡೆದಿತ್ತು. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ ಎಂದು ಅರ್ಚಕರು ತಿಳಿಸಿದ್ದರು. ಇನ್ನು ಇದೀಗ ಇಳಕಲ್​ ತಾಲೂಕಿನ ಕೆಲೂರು ಗ್ರಾಮದಲ್ಲಿ ಇಂತಹ ಘಟನೆ ನಡೆದಿದ್ದು, ಪೊಲೀಸರು ತನಿಖೆ ಶುರುಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us