ಬೈಕ್​ಗಳ ನಡುವೆ ಮುಖಾಮುಖಿ: ಮೂವರು ಸ್ಥಳದಲ್ಲೇ ದುರ್ಮರಣ

ಬಾಗಲಕೋಟೆ: ರಬಕವಿ ಬನಹಟ್ಟಿ ತಾಲೂಕಿನ ಮಹಲಿಂಗಪುರ-ರನ್ನಬೆಳಗಲಿಯ ಮಾರ್ಗ ಮಧ್ಯೆ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಗೋವಿಂದ ಕುಂಬಾಳಿ(22), ಮೆಹಬೂಬಸಾಬ್ ಜಕಾಚರೆ(50), ಮಹ್ಮದ್ ಇಲಿಯಾಸ್ ಅತ್ತಾರ(36) ಮೃತ ದುರ್ದೈವಿಗಳು. ಎರಡು ಬೈಕ್​ಗಳು ಡಿಕ್ಕಿಯಾಗಿ ಸವಾರರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಸವಾರರ ಮೇಲೆ ಅಪರಿಚಿತ ವಾಹನ ಹರಿದು ಹೋದ ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಮೃತರನ್ನು ರನ್ನಬೆಳಗಲಿ ಹಾಗು ಬನಹಟ್ಟಿ ಮೂಲದವರೆಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ […]

ಬೈಕ್​ಗಳ ನಡುವೆ ಮುಖಾಮುಖಿ: ಮೂವರು ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​

Updated on: Jan 17, 2020 | 12:54 PM

ಬಾಗಲಕೋಟೆ: ರಬಕವಿ ಬನಹಟ್ಟಿ ತಾಲೂಕಿನ ಮಹಲಿಂಗಪುರ-ರನ್ನಬೆಳಗಲಿಯ ಮಾರ್ಗ ಮಧ್ಯೆ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಗೋವಿಂದ ಕುಂಬಾಳಿ(22), ಮೆಹಬೂಬಸಾಬ್ ಜಕಾಚರೆ(50), ಮಹ್ಮದ್ ಇಲಿಯಾಸ್ ಅತ್ತಾರ(36) ಮೃತ ದುರ್ದೈವಿಗಳು.

ಎರಡು ಬೈಕ್​ಗಳು ಡಿಕ್ಕಿಯಾಗಿ ಸವಾರರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಸವಾರರ ಮೇಲೆ ಅಪರಿಚಿತ ವಾಹನ ಹರಿದು ಹೋದ ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಮೃತರನ್ನು ರನ್ನಬೆಳಗಲಿ ಹಾಗು ಬನಹಟ್ಟಿ ಮೂಲದವರೆಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಮಹಲಿಂಗಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 12:25 pm, Fri, 17 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us