ಬಾಗಲಕೋಟೆ: ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವು

ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಮುಧೋಳ ತಾಲೂಕಿನ ಕುಳಲಿ ಬಳಿ ನಡೆದಿದೆ.

ಬಾಗಲಕೋಟೆ: ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವು
ಟ್ರ್ಯಾಕ್ಟರ್ ಪಲ್ಟಿ
Follow us
| Updated By: ವಿವೇಕ ಬಿರಾದಾರ

Updated on:Jan 06, 2023 | 5:10 PM

ಬಾಗಲಕೋಟೆ: ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಮುಧೋಳ (Mudhol) ತಾಲೂಕಿನ ಕುಳಲಿ ಬಳಿ ನಡೆದಿದೆ. ಯುವಕರಾದ ಸದಾಶಿವ ಬೆಳಗಲಿ(18), ಗೋವಿಂದ(20), ಹನುಮಂತ(22) ಮೃತ ದುರ್ದೈವಿಗಳು. ಅಪಘಾತದಲ್ಲಿ ಸದಾಶಿವ ಬೆಳಗಲಿ(18) ಎಂಬುವರು ಗಂಭೀರ ಗಾಯಗೊಂಡಿದ್ದರು. ಈ ಹಿನ್ನೆಲೆ ಸದಾಶಿವ ಬೆಳಗಲಿಯವರನ್ನು ಬಾಗಲಕೋಟೆ (Bagalakote) ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕರಿಯಾಗದೆ, ಸದಾಶಿವ ಸಾವನ್ನಪ್ಪಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಪಲ್ಟಿ; 26 ವಿದ್ಯಾರ್ಥಿನಿಯರಿಗೆ ಗಾಯ

ಉತ್ತರ ಕನ್ನಡ: ಪ್ರವಾಸಕ್ಕೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಪಲ್ಟಿಯಾಗಿ 26 ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಕೊಳಗಿಯಲ್ಲಿ ನಡೆದಿದೆ. ಘಟನೆಯಲ್ಲಿ 26 ವಿದ್ಯಾರ್ಥಿನಿಯರಿಗೆ ಗಾಯಗಳಾಗಿದ್ದು,  8 ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಶಿರಸಿ ಪಂಡಿತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

90 ವಿದ್ಯಾರ್ಥಿನಿಯರು 2 ಟ್ರ್ಯಾಕ್ಟರ್​​ನಲ್ಲಿ ಮಳಗಿಯಿಂದ  ಕೊಳಗಿ ಪ್ರವಾಸಕ್ಕೆ ಬಂರುತ್ತಿದ್ದರು. ಈ ವೇಳೆ  ಅತಿ ವೇಗದ ಚಾಲನೆಯಿಂದ  ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಳ್ಳಕೆರೆ ಪಟ್ಟಣ ಬಳಿಯ ಹೊಂಡದಲ್ಲಿ ಅಪರಿಚಿತ ಶವಪತ್ತೆ

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಪಟ್ಟಣ ಬಳಿಯ ಸುಧಾಕರ್ ಸ್ಟೇಡಿಯಂ ಬಳಿಯ ಕಲ್ಲಿನ ಕ್ವಾರಿಯಲ್ಲಿನ ಹೊಂಡದಲ್ಲಿ ಸುಮಾರು 60ವರ್ಷದ ಮಹಿಳೆಯ ಶವಪತ್ತೆಯಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಶವಂತಪುರ: ಡ್ರಮ್​ನಲ್ಲಿ ಅಪರಿಚಿತ ಮಹಿಳೆ ಶವಪತ್ತೆ

ಬೆಂಗಳೂರು: ಯಶವಂತಪುರ ರೈಲ್ವೆ ಸ್ಟೇಷನ್​ನ ಡ್ರಮ್​ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ವೇಲ್​ನಿಂದ ಕುತ್ತಿಗೆ ಬಿಗಿದು ಸಾಯಿಸಲಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಮೃತ ಮಹಿಳೆಯು ಉತ್ತರ ಭಾರತದವರು ಆಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಇದೀಗ ಪೊಲೀಸರು ಎಲ್ಲಾ ಮಿಸ್ಸಿಂಗ್​ ಕಂಪ್ಲೆಂಟ್​ಗಳ ಬಗ್ಗೆ ಮಾಹಿತಿ ಪಡೆಯಲು ಮುಂದಾಗಿದ್ದಾರೆ.

ಡಿಸೆಂಬರ್​ 26 ನೇ ತಾರೀಖಿನಿಂದ ರೈಲ್ವೆ ಸ್ಟೇಷನ್​ಲ್ಲಿಯೇ ಶವ ಇದ್ದು, ಸಿಸಿಟಿವಿ ಪರಿಶೀಲನೆ ವೇಳೆ ಡಿ.26 ರಿಂದ ಅ ಡ್ರಮ್ ಅಲ್ಲಿಯೇ ಇದೆ. ಡಿ.24 ಅಥವಾ 25 ರಂದು ಕೊಲೆ ಮಾಡಿ ಡ್ರಮ್​ನಲ್ಲಿ ಶವ ಹಾಕಿಹೋಗಿರಬಹುದೆಂದು ಅಂದಾಜಿಸಲಾಗಿದೆ. ಇನ್ನು ಯಶವಂತಪುರ ರೈಲು ನಿಲ್ದಾಣದಲ್ಲಿ ನೀಲಿ ಡ್ರಮ್​ಗಳಲ್ಲಿ ಹೆಚ್ಚಾಗಿ ಮೀನು ಸಾಗಟ ಮಾಡುತ್ತಿದ್ದು, ಹಾಗಾಗಿ ರೈಲ್ವೇ ಸಿಬ್ಬಂದಿಗಳು ಡ್ರಮ್ ಬಗ್ಗೆ ತಲೆ ಕೆಡಸಿಕೊಂಡಿರಲಿಲ್ಲ.

ಆಯಾ ತಪ್ಪಿ ಗದ್ದೆಗೆ ಉರುಳಿದ ಕೆ.ಎಸ್.ಆರ್.ಟಿ.ಸಿ ಬಸ್

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್​ ಗದ್ದೆಗೆ ನುಗ್ಗಿದೆ ಅದೃಷ್ಟವಶಾತ್​ ಯಾವುದೇ ಸಾವುಗಳು ಸಂಭವಿಸಿಲ್ಲ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕಾರ್ಪಿಯೋ ಹಾಗೂ ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಹೊರವಲಯದಲ್ಲಿ ಸ್ಕಾರ್ಪಿಯೋ ವಾಹನ ಹಾಗೂ ಬೈಕ್​ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರನ ಗುರುತು ಇನ್ನು ಪತ್ತೆಯಾಗಿಲ್ಲ. ಸ್ಥಳಕ್ಕೆ ಸಿಪಿಐ ಸಿದ್ದಪ್ಪ ಸಿಮಾನಿ ಹಾಗೂ ಪೊಲೀಸ್ ಸಿಬ್ಬಂದಿಗಳ‌ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Fri, 6 January 23

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ