AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalakote News: ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವು

ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸೇರಿದಂತೆ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಹುನಗುಂದ ತಾಲೂಕಿನ ರಕ್ಕಸಗಿ ಬಳಿ ನಡೆದಿದೆ.

Bagalakote News: ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವು
ಬೈಕ್​, ಲಾರಿ
ಗಂಗಾಧರ​ ಬ. ಸಾಬೋಜಿ
|

Updated on:Jun 08, 2023 | 11:13 PM

Share

ಬಾಗಲಕೋಟೆ: ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ (collides) ಹೊಡೆದ ಪರಿಣಾಮ ವೃದ್ಧೆ ಸೇರಿದಂತೆ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಹುನಗುಂದ ತಾಲೂಕಿನ ರಕ್ಕಸಗಿ ಬಳಿ ನಡೆದಿದೆ. ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ್ ಮಾದಾರ(39), ಶಾಂತವ್ವ ಕಟ್ಟಿಮನಿ(43), ಮಾಂತವ್ವ ಮುರಡಿ(75) ಮೃತರು. ಸ್ಥಳಕ್ಕೆ ಅಮೀನ್​ಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ

ಬೆಂಗಳೂರು: ಯುವತಿ ಮೇಲೆ ಸ್ನೇಹಿತರಿಂದ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಯುವತಿ ಮೇಲೆ ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಜೂನ್ 6ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗಿರಿನಗರ ಪೊಲೀಸರು ಸದ್ಯ ಪುರುಷೋತ್ತಮ್ ಹಾಗು ಚೇತನ್ ಎನ್ನುವ ಆರೋಪಿಗಳನ್ನು ಬಂಧಿಸಿದ್ದಾರೆ. ಮೊಬೈಲ್ ಕೊಡುತ್ತೇನೆಂದು ಪುರುಷೋತ್ತಮ್ , ತನ್ನ ಪ್ರೇಯಸಿಯನ್ನು ಪುಸಲಾಯಿಸಿ ರೂಮ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ; ಬಾಲಕಿ ಗರ್ಭಿಣಿ, ಆರೋಪಿ ಪರಾರಿ

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ, ಮೂವರು ಸಾವು

ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಬಳಿ ಲಾರಿಗೆ ಡಿಕ್ಕಿಯಾಗಿ ಌಂಬುಲೆನ್ಸ್​ನಲ್ಲಿದ್ದ ಮೂವರು ಮೃತಪಟ್ಟ ಘಟನೆ ನಡೆದಿದೆ. ಌಂಬುಲೆನ್ಸ್​ನಲ್ಲಿದ್ದ ಕನಕಮಣಿ(72), ಆಕಾಶ್(17), ಚಾಲಕ ಮೃತರು. ಮತ್ತಿಬ್ಬರಿಗೆ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗುಜರಾತ್​ನಿಂದ ತಮಿಳುನಾಡಿಗೆ ತೆರಳುತ್ತಿದ್ದ ಌಂಬುಲೆನ್ಸ್, ಅಹಮದಾಬಾದ್​ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪಾಪಿ ಪತಿ

ಬೆಳಗಾವಿ: ಜಿಲ್ಲೆ ರಾಯಬಾಗ ತಾಲೂಕಿನ ಉಪ್ಪಾರವಾಡಿ ಗ್ರಾಮದಲ್ಲಿ ಹೆಂಡತಿಯನ್ನು ಕೊಲೆ ಮಾಡಿ ಬಳಿಕ ಗಂಡ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪತಿಯ ಕೃತ್ಯದಿಂದ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ಪತ್ನಿ ಉಷಾ(36)ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ ಧರೆಪ್ಪ ಕೋತ್ ಬಳಿಕ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಪತ್ನಿ ಜೊತೆ ಜಗಳವಾಡಿ ನಂತರ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಧರೆಪ್ಪ ಕೃತ್ಯದಿಂದ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:07 pm, Thu, 8 June 23