Bagalkot: ಕೆಎಸ್​ಆರ್​ಟಿಸಿ ಬಸ್ -ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ನಂಬರ್ ಪ್ಲೇಟ್ ಇಲ್ಲದ ಬೈಕ್ ಮೇಲಿದ್ದ ಇಬ್ಬರೂ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

Bagalkot: ಕೆಎಸ್​ಆರ್​ಟಿಸಿ ಬಸ್ -ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ
ಕೆಎಸ್​ಆರ್​ಟಿಸಿ-ಬೈಕ್ ಡಿಕ್ಕಿಯಾಗಿ ಇಬ್ಬರು ದುರ್ಮರಣ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 20, 2023 | 2:58 PM

ಬಾಗಲಕೋಟ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಕೆಎಸ್ ಆರ್ ಟಿಸಿ ಬಸ್  (KSRTC Bus) ಹಾಗೂ ಬೈಕ್ (Bike) ಮುಖಾಮುಖಿ ಡಿಕ್ಕಿಯಾಗಿ (Accident) ಬೈಕ್ ಮೇಲಿದ್ದ ಇಬ್ಬರೂ ಸ್ಥಳದಲ್ಲೇ ಕೊನೆಯಿಸಿರೆಳೆದಿದ್ದಾರೆ. ಬಾಗಲಕೋಟೆ (Bagalkot) ಜಿಲ್ಲೆ ಮುಧೋಳ (Mudhol) ತಾಲೂಕಿನ ಚಿಚಖಂಡಿ ಘಟಪ್ರಭಾ ಸೇತುವೆ ಮೇಲೆ ಈ ದುರಂತ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಜ್ಜುಗುಜ್ಜು ಅಗಿದೆ.

ಬೈಕ್ ಮೇಲಿದ್ದ ಇಬ್ಬರೂ ರಕ್ತಸ್ರಾವದಿಂದ ಸಾವು 

ನಂಬರ್ ಪ್ಲೇಟ್ ಇಲ್ಲದ ಬೈಕ್ ಮೇಲಿದ್ದ ಇಬ್ಬರೂ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಕ್ ಲೋಕಾಪುರದಿಂದ ಮುಧೋಳ ಮಾರ್ಗ ಹೊರಟಿತ್ತು. ಇನ್ನು ಬಸ್ ಮುಧೋಳದಿಂದ ಲೋಕಾಪುರ ಕಡೆ ಬರುತ್ತಿತ್ತು.

ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಬೈಕ್‌‌ ಸವಾರ ಸ್ಥಳದಲ್ಲೇ ಸಾವು:

ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಬೈಕ್‌‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರ್ಗಿಯ ಸೇಡಂ ತಾಲೂಕಿನ ಬುರಗಪಲ್ಲಿ ನಿವಾಸಿ ಭೀಮಶಪ್ಪ (45) ಮೃತ ದುರ್ದೈವಿ. ಸ್ಥಳಕ್ಕೆ ಗುರುಮಠಕಲ್‌ ಠಾಣೆಯ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗುರುಮಠಕಲ್‌ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:42 pm, Fri, 20 January 23