AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಅಧಿಕಾರ ಹಂಚಿಕೆ ಚರ್ಚೆ ಬೆನ್ನಲ್ಲೇ ದಲಿತ ಮುಖ್ಯಮಂತ್ರಿ ಕೂಗು ಎಬ್ಬಿಸಿದ ಸ್ವಾಮೀಜಿ!

ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಬಗ್ಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಚರ್ಚೆ ಜೋರಾಗಿದೆ. ಇದರ ನಡುವೆ ಇದೀಗ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ದಲಿತ ಸಿಎಂ ಕೂಗು ಎಬ್ಬಿಸಿದ್ದಾರೆ. ಬಾಗಲಕೋಟೆಯ ಜಿಲ್ಲಾ ವಾಲ್ಮೀಕಿ ಜನಜಾಗೃತಿ ಸಮಾವೇಶದಲ್ಲಿ ದಲಿತ ಸಿಎಂ ಎನ್ನುವ ಧ್ವನಿ ಎತ್ತಿದ್ದಾರೆ.

ಸಿಎಂ ಅಧಿಕಾರ ಹಂಚಿಕೆ ಚರ್ಚೆ ಬೆನ್ನಲ್ಲೇ ದಲಿತ ಮುಖ್ಯಮಂತ್ರಿ ಕೂಗು ಎಬ್ಬಿಸಿದ ಸ್ವಾಮೀಜಿ!
ಪ್ರಸನ್ನಾನಂದ ಸ್ವಾಮೀಜಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Nov 05, 2023 | 6:08 PM

Share

ಬಾಗಲಕೋಟೆ, (ನವೆಂಬರ್ 05): ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಬಗ್ಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯಾ ಹಾಗೂ ಡಿಕೆ ಶಿವಕುಮಾರ್ ಬಣಗಳ ಮಧ್ಯೆ ಮಾತಿನ ಸಮರ ತಾರಕಕ್ಕೇರಿದೆ. ಸಚಿವ ಕೆಎನ್ ರಾಜಣ್ಣ ಅವರು ಮುಂದಿನ ಸಿಎಂ ಪರಮೇಶ್ವರ್ ಎನ್ನುವ ಮೂಲಕ ದಲಿಯ ಮುಖ್ಯಮಂತ್ರಿ ಎನ್ನುವ ಅರ್ಥದಲ್ಲಿ ಹೇಳಿದ್ದರು. ಇದರ ನಡುವೆ ಇದೀಗ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ದಲಿತ ಸಿಎಂ ಕೂಗು ಎಬ್ಬಿಸಿದ್ದಾರೆ.

ಬಾಗಲಕೋಟೆಯ ಕಲಾಭವನದಲ್ಲಿ ನಡೆದ ಜಿಲ್ಲಾ ವಾಲ್ಮೀಕಿ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ , .ಹಾಗೇ ರಾಜ್ಯದಲ್ಲಿ ದಲಿತ ಸಿಎಂ ಯಾಕೆ ಆಗಬಾರದು? ದಲಿತರು ಮತ ಬ್ಯಾಂಕ್ ಮಾತ್ರ ಅಗಿರಬೇಕಾ? ಸಿಎಂ ಹುದ್ದೆ ಕೆಲವೆ ಸಮುದಾಯಗಳ ಸ್ವತ್ತಾ? ಯಾರಾದ್ರೂ ಗುತ್ತಿ ಪಡೆದುಕೊಂಡಿದ್ದಾರಾ? ದಲಿತರು ಸಿಎಂ ಆಗಲಿ ಎನ್ನುವ ಔದಾರ್ಯ ಹೊಂದಿರದಿದ್ದರೆ ಹೇಗೆ? ಎಂದು ಪ್ರಶ್ನಿಸಿದರು. ಇದರೊಂದಿಗೆ ಸ್ವಾಮೀಜಿಯಿಂದ ದಲಿತ ಸಿಎಂ ಕೂಗು ಮತ್ತೆ ಕೇಳಿಬಂದಿದೆ.

ಇದನ್ನೂ ಓದಿ: ಉಪಹಾರಕೂಟ ನೆಪದಲ್ಲಿ ಸಚಿವರೊಂದಿಗೆ ಸಿಎಂ, ಡಿಸಿಎಂ ಮಹತ್ವದ ಸಭೆ: ಇಲ್ಲಿದೆ ಸಭೆಯ ಇನ್​ಸೈಡ್ ಡಿಟೇಲ್ಸ್

ಸಿದ್ದರಾಮಯ್ಯನವರ ಬಗ್ಗೆ ನಮಗೆ ಬಹಳ ಗೌರವ ಇದೆ. ಅವರು ಸಾಮಾಜಿಕ ನ್ಯಾಯದ ಹರಿಕಾರ. ಒಂದು ವೇಳೆ ರಾಜ್ಯದಲ್ಲಿ ಏನಾದ್ರು ಬೆಳವಣಿಗೆ ಆದರೆ ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ. ಸತೀಶ ಜಾರಕಿಹೊಳಿ ಅವರಿಗೆ ಎಲ್ಲ ರೀತಿಯಲ್ಲಿ ನಾಡಿನ ಸಿಎಂ ಆಗಲು ಅರ್ಹತೆಗಳಿವೆ. ಅವರ ಬೆನ್ನಿಗೆ ನಾವೆಲ್ಲಾ ನಿಲ್ಲಬೇಕಿದೆ ಎಂದು ರಾಜನಹಳ್ಳಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ. ಹೇಳಿದರು.

ಈ ಹಿಂದೆ ಹಲವು ಬಾರಿ ಕರ್ನಾಟಕದಲ್ಲಿ ದಲಿತ ಸಿಎಂ ಕೇಳಿಬಂದಿದ್ದವು. ಆಗಾಗ ಕೇಳಿ ಬರುತ್ತಲ್ಲೇ ಇದೆ. ಇದೀಗ ಸ್ವಾಮೀಜಿಯೊಬ್ಬರ ಬಾಯಿಂದಲೇ ದಲಿತ ಸಿಎಂ ಕೂಗು ಕೇಳಿಬಂದಿದ್ದು, ಇದು ಮುಂದೆ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More