ಬಾಗಲಕೋಟೆ: ದೇವಸ್ಥಾನಕ್ಕೆ ಬರುವ ಹೆಣ್ಣು ಮಕ್ಕಳಿಗೆ ಕರಪತ್ರ ಹಂಚಿ ಲವ್ ಜಿಹಾದ್ ಜಾಗೃತಿ ಮೂಡಿಸಿದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು

ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಹಿಂದೂ ಜಾಗರಣಾ ವೇದಿಕೆಗಳ ಕಾರ್ಯಕರ್ತರು ದೇವಸ್ಥಾನಕ್ಕೆ ಬರುವ ಹೆಣ್ಣು ಮಕ್ಕಳಿಗೆ ಕರಪತ್ರ ಹಂಚಿ ಲವ್​ ಜಿಹಾದ್ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಬಾಗಲಕೋಟೆ: ದೇವಸ್ಥಾನಕ್ಕೆ ಬರುವ ಹೆಣ್ಣು ಮಕ್ಕಳಿಗೆ ಕರಪತ್ರ ಹಂಚಿ ಲವ್ ಜಿಹಾದ್ ಜಾಗೃತಿ ಮೂಡಿಸಿದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು
ಹೆಣ್ಣು ಮಕ್ಕಳಿಗೆ ಕರಪತ್ರ ಹಂಚಿ ಲವ್ ಜಿಹಾದ್ ಜಾಗೃತಿ
Follow us
ಆಯೇಷಾ ಬಾನು
|

Updated on:Mar 22, 2023 | 1:01 PM

ಬಾಗಲಕೋಟೆ: ಇಂದು (ಮಾರ್ಚ್ 22) ಹಿಂದೂಗಳ ಹೊಸ ವರ್ಷ ಯುಗಾದಿ(Ugadi) ಹಬ್ಬ ಹಿನ್ನೆಲೆ ಸುಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜನ ಸಾಗರವೇ ಹರಿದು ಬಂದಿದೆ. ಇದರ ನಡುವೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಹಿಂದೂ ಜಾಗರಣಾ ವೇದಿಕೆಗಳ ಕಾರ್ಯಕರ್ತರು ದೇವಸ್ಥಾನದಲ್ಲಿ ಲವ್​ ಜಿಹಾದ್(Love Jihad)​ ಬಗ್ಗೆ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದು ಕರಪತ್ರ ಹಂಚಿದ್ದಾರೆ. ಹೆಣ್ಣು ಮಕ್ಕಳು ಹಾಗೂ ನಾಗರಿಕರಿಗೆ ಕರಪತ್ರ ವಿತರಿಸಿ ಜಾಗೃತಿ ಮೂಡಿಸಿದ್ದಾರೆ.

ಯುಗಾದಿ ಪಾಡ್ಯ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಜಟೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲು ದೇವಸ್ಥಾನಕ್ಕೆ ಬರುತ್ತಿದ್ದು ಈ ವೇಳೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಹಿಂದೂ ಜಾಗರಣಾ ವೇದಿಕೆಗಳ ಕಾರ್ಯಕರ್ತರು ಪ್ರಮುಖವಾಗಿ ಹೆಣ್ಣು ಮಕ್ಕಳಿಗೆ ಹಾಗೂ ನಾಗರಿಕರಿಗೆ ಕರ ಪತ್ರ ಹಂಚಿ ಲವ್ ಜಿಹಾದ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

Bagalkot Love Jihad

ಹೆಣ್ಣು ಮಕ್ಕಳಿಗೆ ಕರಪತ್ರ ಹಂಚಿ ಲವ್ ಜಿಹಾದ್ ಜಾಗೃತಿ

ಇದನ್ನೂ ಓದಿ: Love jihad: ನರ್ಸಿಂಗ್​ ಓದಿಕೊಂಡು ಕೆಲಸ ಮಾಡ್ತಾ ಮನೆಗೆ ಆಧಾರವಾಗಿದ್ದಳು! ಯಾವ ಮಾಯೆಯಲ್ಲಿ ಲವ್ ಜಿಹಾದ್ ಗೆ ಬಲಿಯಾದಳು ಈ ಯುವತಿ?

ಒಂದು ಹಿಂದು ಹುಡುಗಿ ಹೋದ್ರೆ, ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ನಿಮಗೆ ರಕ್ಷಣೆ ನಮ್ಮದು ಎಂದ ಮುತಾಲಿಕ್

ಬಾಗಲಕೋಟೆ(ಫೆ.19): ಛತ್ರಪತಿ ಶಿವಾಜಿ ಮಹಾರಾಜ್​ ಕೀ ಜೈ ಎನ್ನುತ್ತೀರಿ. ಆದರೆ ಮನೆಯಲ್ಲಿ ಒಂದು ಬಡಿಗೆ ಇಲ್ಲ, ಚಾಕು ಸಹ ಇಲ್ಲ. ಎಲ್ಲ ಹಿಂದೂಗಳು ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್(Pramod Muthalik) ಕರೆ ಕೊಟ್ಟಿದ್ದಾರೆ. ಅಲ್ಲದೇ ಒಂದು ಹಿಂದೂ(Hindu) ಹುಡುಗಿ ಹೋದರೆ ಹತ್ತು ಮುಸ್ಲಿಂ(Muslim) ಹುಡುಗಿಯರನ್ನು ಹಾರಿಸಿಕೊಂಡು ಹೋಗಿ ಎಂದು ಹೇಳಿದ್ದಾರೆ.

ಫೆ.29 ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ , . ನಟ್, ಸ್ಕ್ರೂ ಡ್ರೈವರ್, ಕಂಪಾಸು, ಸ್ಪಾನರು, ಸುಡುಗಾಡು, ಸಂತಿ ಪೂಜಾ ಮಾಡುತ್ತೀರಿ. ಶಸ್ತ್ರ ಅಂದರೆ ತಲವಾರ್, ಕತ್ತಿ, ಕುರುಪಿ, ಕೊಡಲಿ, ಚಾಕು. ಇವನ್ನೆಲ್ಲ ಇಟ್ರೆ ಪೊಲೀಸ್​ ಬಿಡ್ತಾರೇನ್ರೀ ಅಂತೀರಿ. ಪೊಲೀಸರು ಅರೆಸ್ಟ್ ಮಾಡೋದಾದರೆ ದುರ್ಗಾಮಾತೆ ಕೈಯಲ್ಲಿ ಹತ್ತು ಶಸ್ತ್ರಗಳಿವೆ, ಮೊದಲು ದುರ್ಗೆಯನ್ನು ಅರೆಸ್ಟ್ ಮಾಡಲಿ. ಹನುಮನ ಕೈಯಲ್ಲಿ ಗದೆ ಇದೆ, ಮೊದಲು ಹನಮಂತನ ಅರೆಸ್ಟ್ ಮಾಡಲಿ, ಈಶ್ವರನ ಕೈಯಲ್ಲಿ ತ್ರಿಶೂಲ ಇದೆ, ಈಶ್ವರನನ್ನು ಅರೆಸ್ಟ್ ಮಾಡಲಿ ಎಂದು ಹೇಳಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:55 pm, Wed, 22 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ