AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್​​ ಚೋರಿ ಎಂದ ‘ಕೈ’ಗೆ ಬಿಜೆಪಿ ಗುದ್ದು: ಕಾಂಗ್ರೆಸ್​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ಆರೋಪ!

ಹುನಗುಂದ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಅಕ್ರಮದ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. 18 ವರ್ಷದೊಳಗಿನವರು ಮತ್ತು ಅನ್ಯ ಜಿಲ್ಲೆಯ ಮತದಾರರನ್ನು ಅಕ್ರಮವಾಗಿ ಲಿಸ್ಟ್​​ಗೆ ಸೇರಿಸಲಾಗಿದೆ ಎಂದು ದಾಖಲೆ ಸಮೇತ ದೂರು ನೀಡಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿಯೂ ಬಿಜೆಪಿ ಎಚ್ಚರಿಕೆ ನೀಡಿದೆ.

ವೋಟ್​​ ಚೋರಿ ಎಂದ 'ಕೈ'ಗೆ ಬಿಜೆಪಿ ಗುದ್ದು: ಕಾಂಗ್ರೆಸ್​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ಆರೋಪ!
ಬಿಜೆಪಿ ದೂರು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Dec 31, 2025 | 6:14 PM

Share

ಬಾಗಲಕೋಟೆ, ಡಿಸೆಂಬರ್​ 31: ಬಿಜೆಪಿ ವಿರುದ್ಧ ದೇಶಾದ್ಯಂತ ಕಾಂಗ್ರೆಸ್​​ ವೋಟ್​​ ಚೋರಿ ಅಭಿಯಾನ ನಡೆಸಿತ್ತು. ಕರ್ನಾಟಕದ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿಯೂ ಮತದಾರರ ಪಟ್ಟಿ ಅಕ್ರಮ ಆರೋಪ ಕೇಳಿಬಂದಿತ್ತು. ಈ ನಡುವೆ ಹುನಗುಂದ ಮತಕ್ಷೇತ್ರದಲ್ಲಿ ಕಾಂಗ್ರೆಸ್​​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ನಡೆದಿದೆ ಎಂದು ಬಿಜೆಪಿ ದೂರಿದೆ. ದಾಖಲೆ ಸಮೇತ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರನ್ನೂ ನೀಡಿದೆ.

ಹುನಗುಂದ ಮತಕ್ಷೇತ್ರದಲ್ಲಿ ಪ್ರತಿ ಬೂತ್​​ನಿಂದ ಅಕ್ರಮವಾಗಿ 18 ವಯೋಮಿತಿ ಒಳಗಿನ 50 ಜನರನ್ನ ಮತದಾರ ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕೆಂದು ಭಾರತೀಯ ಜನತಾ ಪಕ್ಷ ಆಗ್ರಹಿಸಿದೆ. ನವನಗರದ ಬಸ್ ನಿಲ್ದಾಣ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಮಾಜಿ ಶಾಸಕರಾದ ವೀರಣ್ಣ ಚರಂತಿಮಠ ಮತ್ತು ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಲಾಗಿದೆ. ಹುನಗುಂದ ಕಾಂಗ್ರೆಸ್​​ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲೂ ಮತದಾರರ ಪಟ್ಟಿ ಅಕ್ರಮದ ಸದ್ದು; ವೋಟರ್​​ ಲಿಸ್ಟ್​​ನಲ್ಲಿದೆ ಅಪ್ರಾಪ್ತರು, ಬೇರೆ ಊರಿನವರ ಹೆಸರು!

ಬಿಜೆಪಿ ಆರೋಪಗಳೇನು?

  • 18 ವರ್ಷ ವಯಸ್ಸಿನ ಕಡಿಮೆ ಇರುವ ವಿಧ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ
  • ಬೇರೆ ಜಿಲ್ಲೆಯ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ
  • ಹುನಗುಂದ ಮತಕ್ಷೇತ್ರದಲ್ಲಿ ಹಲವಾರು ಗ್ರಾಮ ಹಾಗೂ ನಗರಗಳಲ್ಲಿ ಅವರು ವಾಸಿಸುವ ವಾರ್ಡನ್ನು ಬಿಟ್ಟು ಪಕ್ಕದ ವಾರ್ಡಿಗೆ ಕೂಡಾ ಸೇರಿಸುವ ಬಗ್ಗೆ ಸಾರ್ವಜನಿಕ ಚರ್ಚೆ ಆಗುತ್ತಿದೆ
  • ಒಂದೇ ಮತದಾರರ ಹೆಸರು ಎರಡು ವಾರ್ಡ್​​ಗಳಲ್ಲಿ ಕಂಡುಬಂದಿದೆ

ಮತದಾರರ ಪಟ್ಟಿ ಅಕ್ರಮ ಸಂಬಂಧ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ಕ್ರಮ ಆಗಬೇಕು. ತಪ್ಪಿತಸ್ಥರನ್ನು ಅಮಾನತು ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡಬೇಕು. ಒಂದು ವೇಳೆ ನ್ಯಾಯಯುತ ತನಿಖೆ ಆಗದಿದ್ದಲ್ಲಿ ಉಗ್ರಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕರು ಎಚ್ಚರಿಸಿದ್ದಾರೆ. ಮುರಡಿ ಗ್ರಾಮ ಪಂಚಾಯತ್​​ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಅಕ್ರಮದ ಬಗ್ಗೆ ಈ ಮೊದಲು ಹುನಗುಂದ ತಾಲೂಕು ಪಂಚಾಯತ್​ ಮಾಜಿ ಸದಸ್ಯರು ಹಾಗೂ ಸ್ಥಳೀಯರು ಕೂಡ ಆರೋಪಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು
ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್​ ದೂರು: ಆರೋಪವೇನು?
ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್​ ದೂರು: ಆರೋಪವೇನು?
ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ