AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪದಲ್ಲಿ ಥಳಿಸಿದ ಸ್ಥಳೀಯರು: ಹೃದಯಾಘಾತದಿಂದ ಯುವಕ ಸಾವು

ಸರ್ಕಾರಿ ಶಾಲೆಯ ಹೆಣ್ಣು ಮಕ್ಕಳು ಬಟ್ಟೆ ಬದಲಾಯಿಸುತ್ತಿದ್ದಾಗ ಕದ್ದು ನೋಡಿದ ಆರೋಪದಲ್ಲಿ ಯುವಕನೊಬ್ಬನನ್ನು ಸ್ಥಳೀಯರು ಥಳಿಸಿದ ಪರಿಣಾಮ ಆತ ಹೃದಯಾಘಾತದಿದ ಮೃತಪಟ್ಟ ಘಟನೆ ಜಮಖಂಡಿಯ ಸಾವಳಗಿ ಗ್ರಾಮದ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ನಡೆದಿದೆ. ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ, ಹಲ್ಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪದಲ್ಲಿ ಥಳಿಸಿದ ಸ್ಥಳೀಯರು: ಹೃದಯಾಘಾತದಿಂದ ಯುವಕ ಸಾವು
ಸುದೀಪ್ ಪಾಂಗೆImage Credit source: tv9
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Mar 13, 2026 | 11:55 AM

Share

ಬಾಗಲಕೋಟೆ, ಮಾರ್ಚ್ 13: ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ನಡೆದ ಗಲಾಟೆಯಿಂದ ಯುವಕನೊಬ್ಬ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಸಾವಳಗಿ ಗ್ರಾಮದ ಸುದೀಪ್ ಪಾಂಗೆ (19) ಎಂದು ಗುರುತಿಸಲಾಗಿದೆ. ಮಾರ್ಚ್ 11ರ ರಾತ್ರಿ ಸಾವಳಗಿ ಗ್ರಾಮ ಪಂಚಾಯಿತಿ ಕಟ್ಟಡದ ಆವರಣದಲ್ಲಿ ಇರುವ ಸಾವಳಗಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಸುದೀಪ್ ಪಾಂಗೆ ಶಾಲೆಯ ಮೇಲ್ಛಾವಣಿ ಮೇಲೆ ಕುಳಿತುಕೊಂಡು ಕೆಳಗಿದ್ದ ಕಾರ್ಯಕ್ರಮದತ್ತ ಕಲ್ಲು ಎಸೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ವಿದ್ಯಾರ್ಥಿನಿಯರು ಉಡುಪು ಬದಲಾಯಿಸುತ್ತಿದ್ದ ಸ್ಥಳದತ್ತ ಇಣುಕಿ ನೋಡಿದ್ದಾನೆ ಎಂಬ ಆರೋಪವೂ ಸ್ಥಳೀಯರಿಂದ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಕೆಲ ಯುವಕರು ಸುದೀಪ್ ಮೇಲೆ ಹಲ್ಲೆ ನಡೆಸಿದ್ದರು.

ರಾಜು ಮಾಳಿ, ವಿಜಯ್ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳಿ ಎಂಬ ಮೂವರು ಯುವಕರು ಸುದೀಪ್‌ಗೆ ಥಳಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಿಸಿಟಿವಿ ಕ್ಯಾಮರಾ ವಿಡಿಯೋ ಇಲ್ಲಿ ನೋಡಿ

ಹಲ್ಲೆಯಿಂದ ಗಾಯಗೊಂಡ ಸುದೀಪ್ ಪಾಂಗೆಯನ್ನು ತಕ್ಷಣ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮೃತನ ಸಹೋದರ ನೀಡಿದ ದೂರಿನ ಆಧಾರದ ಮೇಲೆ, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ರಾಜು ಮಾಳಿ, ವಿಜಯ್ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳಿ ವಿರುದ್ಧ ಸಾವಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪಿಜಿಗಳಲ್ಲಿಲ್ಲ ಮಧ್ಯಾಹ್ನದ ಊಟ, ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೂ ಸಂಕಷ್ಟ: ಸಿಲಿಂಡರ್​​ ಕೊರತೆ ಮತ್ತಷ್ಟು ಉಲ್ಬಣ

ಈ ಘಟನೆ ಮಂಗಳವಾರ (ಮಾರ್ಚ್ 11)ರಂದು ನಡೆದಿದ್ದು, ಪ್ರಕರಣ ಈಗ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಸಾವಳಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!