AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟನ್ ಕಬ್ಬಿಗೆ 3,500 ಬೆಲೆ ಬೇಕೇ ಬೇಕು’ ಮುಧೋಳ ರೈತರ ಪಟ್ಟು; ಮುಂದುವರಿದ ಹೋರಾಟ

ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರು 3,500 ರೂ. ಬೆಂಬಲ ಬೆಲೆಗೆ ಆಗ್ರಹಿಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ಆದೇಶವನ್ನು ಕಾರ್ಖಾನೆ ಮಾಲೀಕರು ಒಪ್ಪಿದರೂ ರೈತರು ಮಾತ್ರ ಒಪ್ಪಲಿಲ್ಲ. ಹೋರಾಟ ತೀವ್ರಗೊಳಿಸಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ಜಿಲ್ಲಾಧಿಕಾರಿಗಳೊಂದಿಗಿನ ಸಂಧಾನ ಸಭೆಯೂ ವಿಫಲವಗಿದೆ.

‘ಟನ್ ಕಬ್ಬಿಗೆ 3,500 ಬೆಲೆ ಬೇಕೇ ಬೇಕು’ ಮುಧೋಳ ರೈತರ ಪಟ್ಟು; ಮುಂದುವರಿದ ಹೋರಾಟ
‘ಟನ್ ಕಬ್ಬಿಗೆ 3,500 ಬೆಲೆ ಬೇಕೇ ಬೇಕು’ ಮುಧೋಳ ರೈತರ ಪಟ್ಟು
ಭಾವನಾ ಹೆಗಡೆ
|

Updated on:Nov 10, 2025 | 9:17 AM

Share

ಬಾಗಲಕೋಟೆ,ನವೆಂಬರ್ 10: ಬಾಗಲಕೋಟೆ (Bagalakote) ಜಿಲ್ಲೆಯ ಮುಧೋಳದಲ್ಲಿ 3,300 ರೂ. ಬೆಂಬಲ ಬೆಲೆಗೆ ಒಪ್ಪದ ಕಬ್ಬು ಬೆಳೆಗಾರರು, ಒಂದು ಟನ್‌ ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನಿಗದಿಪಡಿಸುವಂತೆ ಹಾಗೂ ಹಿಂದಿನ ಬಾಕಿ ಹಣ ಪಾವತಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಈ ಕುರಿತು ಜಿಲ್ಲಾಧಿಕಾರಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ ಚರ್ಚಿಸಿದ್ದು, ಸಭೆಯಲ್ಲಿ ಸುಮಾರು ಹದಿಮೂರು ಕಾರ್ಖಾನೆಗಳ ಮಾಲೀಕರು ಭಾಗವಹಿಸಿದ್ದರು. ಇದೀಗ ಮುಧೋಳ ರೈತರು ಹೋರಾಟ ತೀವ್ರಗೊಳಿಸಿದ್ದು, ಟನ್ ಕಬ್ಬಿಗೆ 3,500 ಬೆಲೆ ಬೇಕೇ ಬೇಕು ಎಂದು ಪಟ್ಟು ಹಿಡಿದು ಕೂತಿದ್ದಾರೆ.

ರೈತರೊಂದಿಗಿನ ಸಂಧಾನ ಸಬೆ ವಿಫಲ

ನಿರಂತರ‌ ಹೋರಾಟದ ಫಲವಾಗಿ ಕಬ್ಬು ಬೆಳೆಗೆ ಸಿಎಂ ಬೆಲೆ ಘೋಷಣೆ ಮಾಡಿದ್ದಾರೆ. ರಾಜ್ಯಾದ್ಯಂತ ರೈತರು‌ ಸಂಭ್ರಮಿಸಿದರೂ ಬಾಗಲಕೋಟೆಯ ರೈತರು ಮಾತ್ರ ಸಿಎಂ ಅದೇಶವನ್ನು ಒಪ್ಪುತ್ತಿಲ್ಲ. ರೈತರ ಮನವೊಲಿಸಲು ನಡೆದ ಸಂಧಾನ ಸಭೆಯೂ ವಿಫಲವಾಗಿದ್ದು, ಹೋರಾಟ ತೀವ್ರಗೊಂಡಿದೆ. ಕಬ್ಬು ಬೆಳೆಗಾರರ ಹೋರಾಟದಿಂದ ಎಚ್ಚೆತ್ತ ಜಿಲ್ಲಾಧಿಕಾರಿ, ಬಾಗಲಕೋಟೆ ಡಿಸಿ ಕಚೇರಿಯಲ್ಲಿ ಕಾರ್ಖಾನೆ‌ ಮಾಲೀಕರ‌ ಜೊತೆ ಸಭೆ ನಡೆಸಿದರು. ಸರ್ಕಾರದ ಆದೇಶವನ್ನು ಕಾರ್ಖಾನೆ ಮಾಲೀಕರು ಒಪ್ಪಿದರೂ ರೈತರು ಮಾತ್ರ ಒಪ್ಪಲಿಲ್ಲ.

ರೈತರ ಹೋರಾಟದ ಕಿಚ್ಚು ಹೆಚ್ಚಾದಾಗ ಕೂಡಲೇ ಮುಧೋಳ ಐಬಿಯಲ್ಲಿ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ರೈತರೊಂದಿಗೆ ಮತ್ತು ಮಾಜಿ ಸಚಿವ ಎಸ್.ಆರ್. ಪಾಟೀಲ್ ಒಡೆತನದ ಬೀಳಗಿ ಶುಗರ್ಸ್, ನಿರಾಣಿ ಶುಗರ್ಸ್, ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಸೇರಿದಂತೆ ಹದಿಮೂರು ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿದರು. ಸಿಎಂ ಘೋಷಿಸಿದ ಬೆಲೆ ಒಪ್ಪಿಕೊಳ್ಳಿ ಎಂದು ರೈತರ ಮನವೊಲಿಸಲು ಪ್ರಯತ್ನಿಸಿದರು. ಆದರೆ ರೈತರು, ಟನ್ ಕಬ್ಬಿಗೆ 3,500 ರೂಪಾಯಿ ಬೇಕೆ ಬೇಕು ಹಾಗೂ ಹೆಚ್ಚುವರಿ 500 ರೂ. ನೀಡಬೇಕೆಂದು ಪಟ್ಟು ಹಿಡಿದಿದ್ದರಿಂದ ಸಂಧಾನ ಸಭೆ ವಿಫಲವಾಗಿದ್ದು, ಸಿಡಿದೆದ್ದ ರೈತರು ಮಧ್ಯರಾತ್ರಿಯವರೆಗೂ ರಸ್ತೆಯಲ್ಲಿಯೇ ಧರಣಿ ಮಾಡಿದ್ದಾರೆ. ಅದರೊದಿಗೆ ಮುಧೋಳದಲ್ಲಿ ಹೆದ್ದಾರಿ ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಸಂಧಾನ ಸಭೆ ವಿಫಲವಾದ ಬಳಿಕ ಸಚಿವ ತಿಮ್ಮಾಪುರ ಹೇಳಿದ್ದೇನು?

ರೈತರ ಪ್ರಮುಖ ಬೇಡಿಕೆಗಳಲ್ಲಿ ಕಬ್ಬಿಗೆ ಟನ್‌ಗೆ 3500 ರೂ. ಬೆಲೆ ನಿಗದಿಪಡಿಸುವುದು ಮತ್ತು ಕಳೆದ ಮೂರು ವರ್ಷಗಳಿಂದ ಬಾಕಿ ಉಳಿದಿರುವ 500 ರೂ. ಎರಡನೇ ಕಂತನ್ನು ತಕ್ಷಣವೇ ಪಾವತಿಸುವುದು ಸೇರಿವೆ. ಬೆಳಗಾವಿ ಮತ್ತು ಬಾಗಲಕೋಟೆ ಸೇರಿದಂತೆ ರಾಜ್ಯಾದ್ಯಂತ ಯಾವುದೇ ಕಾರ್ಖಾನೆಗಳು ಈ ಎರಡನೇ ಕಂತನ್ನು ಪಾವತಿಸಿಲ್ಲ ಎಂದು ರೈತರು ಆರೋಪಿಸಿದ್ದಾರೆ. 11.25% ರಿಕವರಿ ಪ್ರಕಾರ ಪ್ರಸ್ತುತ ನೀಡುತ್ತಿರುವ 330 ರೂ. ದರವನ್ನು ರೈತರು ಒಪ್ಪುತ್ತಿಲ್ಲ ಎಂದು ತಿಮ್ಮಾಪುರ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ  Sugarcane Farmers Protest: 3,300 ರೂ ಬೆಂಬಲ ಬೆಲೆಗೆ ಒಪ್ಪದ ರೈತರ ಹೋರಾಟ

ಹಾವೇರಿಯಲ್ಲಿಯೂ ರೈತರ ಪ್ರತಿಭಟನೆ

ಹಾವೇರಿ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು ಹೆಚ್ಚಾಗಿದೆ. ಸರ್ಕಾರ ಆದೇಶ ಮಾಡಿದರೂ ಬೆಲೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ರೈತರು ಪ್ರತಿಭಟನೆ ನಡೆಸಿದ್ದಾರೆ. ಎಚ್ಚೆತ್ತ ಡಿಸಿ, ಕಾರ್ಖಾನೆ ಮಾಲೀಕರು, ರೈತರ ಜೊತೆ ಸಭೆ ನಡೆಸಿದ್ದು, ಒಮ್ಮತಕ್ಕೆ ಬಾರದ ಹಿನ್ನೆಲೆಯಲ್ಲಿ ಸಭೆ ಧಿಕ್ಕರಿಸಿದ ರೈತರು ಡಿಸಿ ಕಚೇರಿ ಬಳಿಯೇ ಪ್ರತಿಭಟನೆ ನಡೆಸಿದ್ದಾರೆ. ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಮೆಕ್ಕೆಜೋಳ ಬೆಳೆಗಾರರ ಆಕ್ರೋಶ

ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನೀರು ಪಾಲಾಗಿತ್ತು. ಆದಾಗ್ಯೂ ರೈತರು ಮೆಕ್ಕೆಜೋಳ ಬೆಳೆಯನ್ನು ರಕ್ಷಿಸಿಕೊಂಡಿದ್ದರು.ಆದರೀಗ ಮೆಕ್ಕೆಜೋಳದ ದರ ಕುಸಿತ ಕಂಡಿದೆ. ದಲ್ಲಾಳಿಗಳು ಬಾಯಿಗೆ ಬಂದ ದರಕ್ಕೆ ಕೇಳುತ್ತಿದ್ದಾರೆ ಮುಂದೇನು ಮಾಡಬೇಕೆಂದು ತಿಳಿಯದ ರೈತರು ಕಂಗಾಲಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:39 am, Mon, 10 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ