ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಕೇಸ್‌: ಸಚಿವೆ ಹೆಬ್ಬಾಳ್ಕರ್ ಪಿಎ ಸೇರಿ ಮೂವರಿಗೆ ಜಾಮೀನು

ಬೆಳಗಾವಿಯ ತಹಶೀಲ್ದಾರ್ ರುದ್ರೇಶ್ ಆತ್ಮಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಬೆಳಗಾವಿ 10ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಿಎ ಸೋಮು, ಬಸವರಾಜ ನಾಗರಾಳ ಮತ್ತು ಅಶೋಕ್ ಕಬ್ಬಲಿಗೇರ್ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ನೀಡಲಾಗಿದೆ. ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಕೇಸ್‌: ಸಚಿವೆ ಹೆಬ್ಬಾಳ್ಕರ್ ಪಿಎ ಸೇರಿ ಮೂವರಿಗೆ ಜಾಮೀನು
ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಕೇಸ್‌: ಸಚಿವೆ ಹೆಬ್ಬಾಳ್ಕರ್ ಪಿಎ ಸೇರಿ ಮೂವರಿಗೆ ಜಾಮೀನು
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on: Nov 14, 2024 | 6:59 PM

ಬೆಳಗಾವಿ, ನವೆಂಬರ್​ 14: ತಹಶೀಲ್ದಾರ್ ಕಚೇರಿಯಲ್ಲೇ ಎಸ್‌ಡಿಎ (SDA) ರುದ್ರೇಶ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಎ1 ಬಸವರಾಜ ನಾಗರಾಳ, ಎ2 ಅಶೋಕ್ ಕಬ್ಬಲಿಗೇರ್​ ಮತ್ತು ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಎ3 ಸೋಮುಗೆ ಬೆಳಗಾವಿ 10ನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿದೆ.

ಮೂವರು ಆರೋಪಿಗಳಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

ನವೆಂಬರ್ 12ರಂದು ಆರೋಪಿಗಳ ಪರ ವಕೀಲರಿಂದ ಪ್ರತ್ಯೇಕವಾದ ಮಂಡಿಸಿದ್ದರು. ಇದಕ್ಕೆ ಖಡೇಬಜಾರ್ ಠಾಣೆ ಪೊಲೀಸರು ತಕರಾರು ಅರ್ಜಿ ಸಲ್ಲಿಸಿದ್ದರು. ಕಳೆದ 10 ದಿನಗಳಿಂದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದೀಗ ಮೂವರು ಆರೋಪಿಗಳಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ: SDA ರುದ್ರಣ್ಣ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್​: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಕಾರಣ ಎಂದು ಮೆಸೇಜ್

ತನ್ನ ಸಾವಿಗೆ ಕಾರಣ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು, ತಹಶಿಲ್ದಾರ್​ ಬಸವರಾಜ ನಾಗರಾಳ, ಸಹೊದ್ಯೋಗಿ ಅಶೋಕ ಕಬ್ಬಲಿಗೇರ್ ಮೂರು ಜನರ ಕಾರಣವೆಂದು ತಹಶಿಲ್ದಾರ ಆಲ್ ಸ್ಟಾಪ್ ಎಂಬ ಹೆಸರಿನ ವಾಟ್ಸಪ್ ಗ್ರೂಪ್​ನಲ್ಲಿ ಮೆಸೇಜ್ ಹಾಕಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನ ಅಂದರೆ ನವೆಂಬರ್​ 4ರಂದು ಸಂಜೆ ತನ್ನ ವರ್ಗಾವಣೆ ಆದೇಶ ನೋಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅದೇ ಗ್ರೂಪ್​ನಲ್ಲೇ ಮೆಸೇಜ್ ಹಾಕಿ ನ.5ರಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ನೇಣು ಬಿಗಿದುಕೊಂಡು ತಹಶಿಲ್ದಾರ್​ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಸಂದರ್ಭದಲ್ಲಿ ಮೆಸೇಜ್ ನೋಡಿಯೂ ಸಿಬ್ಬಂದಿಗಳು ಯಾಕೆ ಪೊಲೀಸರಿಗೆ ಮಾಹಿತಿ ನೀಡಿಲ್ಲ ಅಂತಾ ಖಡೇಬಜಾರ್ ಪೊಲೀಸರು ವಿಚಾರಣೆ ನಡೆಸಿದ್ದರು. ವಾಟ್ಸಪ್ ಗ್ರೂಪ್​ನಲ್ಲಿ 106 ಸಿಬ್ಬಂದಿ ಇದ್ದು ಯಾರು ಕೂಡ ಆತ್ಮಹತ್ಯೆ ತಡೆಯುವ ಪ್ರಯತ್ನ ಮಾಡಿರಲಿಲ್ಲ. ಈ ಕಾರಣಕ್ಕೆ ಇತ್ತೀಗೆಚೆ ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ವಿಚಾರಣೆ ಮಾಡಿದ್ದರು.

ಇದನ್ನೂ ಓದಿ: ನಿಷ್ಪಕ್ಷಪಾತ ತನಿಖೆ ನಡೆದು ಅಗಲಿದ ಎಸ್​ಡಿಎ ಕುಟುಂಬಕ್ಕೆ ನ್ಯಾಯ ಸಿಗಬೇಕು: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ಇತ್ತ ಡಿಸಿ ಕಚೇರಿ ಸಿಬ್ಬಂದಿಗಳನ್ನ ಕರೆದು ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ರುದ್ರೇಶ್ ಕುರಿತಾದ ಮಾಹಿತಿ ಹಾಗೂ ಕಚೇರಿಯಲ್ಲಿನ ಕಿರುಕುಳ, ವ್ಯವಸ್ಥೆ ಬಗ್ಗೆ ವಿಚಾರಣೆ ನಡೆಸಿ ಮಾಹಿತಿ ಪಡೆದು ದಾಖಲಿಸಿಕೊಂಡಿದ್ದರು. ಬಹಳಷ್ಟು ಜನ ಸಿಬ್ಬಂದಿ ತಹಶಿಲ್ದಾರ್​​ ಕಿರುಕುಳ ನೀಡುತ್ತಿದ್ದ ಬಗ್ಗೆ ಪೊಲೀಸರ ಮುಂದೆ ಹೇಳಿದ್ದು, ಅಷ್ಟೇ ಅಲ್ಲದೇ ಕೆಲ ಸಿಬ್ಬಂದಿಗಳ ಭ್ರಷ್ಟಾಚಾರದ ಕರಿತು ಕೂಡ ಮಾಹಿತಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ