AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bakrid 2021: ಬಕ್ರೀದ್ ನಿಮಿತ್ತ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ; ಮಸೀದಿಗಳಲ್ಲಿ 50 ಜನರಿಗಷ್ಟೇ ಪ್ರಾರ್ಥನೆಗೆ ಅನುಮತಿ

ಈಗಾಗಲೇ ಜುಲೈ 21ರಂದು ಬಕ್ರೀದ್ ಹಬ್ಬ ಆಚರಿಸುವ ಕುರಿತು ಅಧಿಕೃತ ಘೋಷಣೆ ಮಾಡಲಾಗಿದ್ದು, ಮಸೀದಿಗಳಲ್ಲಿ 50 ಜನರೊಂದಿಗೆ ಮಾತ್ರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 

Bakrid 2021: ಬಕ್ರೀದ್ ನಿಮಿತ್ತ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ; ಮಸೀದಿಗಳಲ್ಲಿ 50 ಜನರಿಗಷ್ಟೇ ಪ್ರಾರ್ಥನೆಗೆ ಅನುಮತಿ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on:Jul 16, 2021 | 7:54 PM

Share

ಬೆಂಗಳೂರು: ಜುಲೈ 21 ರಂದು ಬಕ್ರೀದ್ ಹಬ್ಬ (Bakrid 2021) ಆಚರಿಸಲ್ಪಡುವ ಹಿನ್ನೆಲೆಯಲ್ಲಿ ಈದ್ಗಾ ಮೈದಾನಗಳಲ್ಲಿ (Eidgah) ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆದರೆ ಮಸೀದಿಗಳಲ್ಲಿ (Mosques) ಷರತ್ತುಗಳೊಂದಿಗೆ ಸಾಮೂಹಿಕ ಪ್ರಾರ್ಥನೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಕೊವಿಡ್ ಸೋಂಕು ಸದ್ಯ ಕಡಿಮೆಯಾಗಿದ್ದು, ಮತ್ತೊಮ್ಮೆ ಕೊವಿಡ್ ಸೋಂಕು ಹೆಚ್ಚಳವಾಗುವ ಭೀತಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.  ಈಗಾಗಲೇ ಜುಲೈ 21ರಂದು ಬಕ್ರೀದ್ ಹಬ್ಬ ಆಚರಿಸುವ ಕುರಿತು ಅಧಿಕೃತ ಘೋಷಣೆ ಮಾಡಲಾಗಿದ್ದು, ಮಸೀದಿಗಳಲ್ಲಿ 50 ಜನರೊಂದಿಗೆ ಮಾತ್ರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ವಕ್ಫ್ ಅಲ್ಪಸಂಖ್ಯಾತರ ಕಲ್ಯಾಣ  ಮತ್ತು ಹಜ್ ಇಲಾಖೆಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮಾರ್ಗಸೂಚಿ ಪ್ರಕಟಿಸಿದ್ದಾರೆ.

ಇಂದು ಕರ್ನಾಟಕದಲ್ಲಿ 1,977 ಜನರಿಗೆ ಕೊವಿಡ್ ದೃಢ, 3,188 ಜನರು ಗುಣಮುಖ ರಾಜ್ಯದಲ್ಲಿ ಇಂದು ಒಂದೇ ದಿನ 1,977 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 48 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 462 ಜನರಿಗೆ ಸೋಂಕು ಖಚಿತಪಟ್ಟಿದ್ದು, 10 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,78,564ಕ್ಕೆ ಏರಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ 28,10,121 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,037 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 32,383 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಇಂದು ಒಂದೇ ದಿನ 3,188 ಜನರು ಕೊವಿಡ್​ನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇಂದಿನ ಕೊವಿಡ್ ಪಾಸಿಟಿವಿಟಿ ಪ್ರಮಾಣ ಶೇಕಡಾ 1.42ರಷ್ಟಿದೆ. (Karnataka Covid Update 1977 new cases and 48 deaths today)

ರಾಜ್ಯದಲ್ಲಿಂದು ಹೊಸದಾಗಿ 1,977 ಜನರಿಗೆ ಕೊರೊನಾ ದೃಢಪಟ್ಟಿದ್ದು, ಬಾಗಲಕೋಟೆ 4, ಬಳ್ಳಾರಿ 5, ಬೆಳಗಾವಿ 94, ಬೆಂಗಳೂರು ಗ್ರಾಮಾಂತರ 56, ಬೆಂಗಳೂರು ನಗರ 462, ಬೀದರ್ 2, ಚಾಮರಾಜನಗರ 31, ಚಿಕ್ಕಬಳ್ಳಾಪುರ 27, ಚಿಕ್ಕಮಗಳೂರು 109, ಚಿತ್ರದುರ್ಗ 27, ದಕ್ಷಿಣ ಕನ್ನಡ 224, ದಾವಣಗೆರೆ 23, ಧಾರವಾಡ 12, ಗದಗ 2, ಹಾಸನ 15, ಹಾವೇರಿ 2, ಕಲಬುರಗಿ 8, ಕೊಡಗು 73, ಕೋಲಾರ 36, ಕೊಪ್ಪಳ 3, ಮಂಡ್ಯ 51, ಮೈಸೂರು 197, ಉಡುಪಿ 11, ರಾಯಚೂರು 4, ರಾಮನಗರ 16, ಶಿವಮೊಗ್ಗ 71, ತುಮಕೂರು 86, ಉತ್ತರ ಕನ್ನಡ 71, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಇಂದು 2 ಕೊರೊನಾ ಪ್ರಕರಣ ಪತ್ತೆಯಾಗಿದ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 48 ಜನರ ಸಾವನ್ನಪ್ಪಿದ್ದು, ಬೆಂಗಳೂರು 10, ದಕ್ಷಿಣ ಕನ್ನಡ 7, ಮೈಸೂರು 5, ಬೆಳಗಾವಿ 4, ಚಿಕ್ಕಬಳ್ಳಾಪುರ, ಶಿವಮೊಗ್ಗ ಜಿಲ್ಲೆ 3, ಬೆಂಗಳೂರು ಗ್ರಾಮಾಂತರ, ಧಾರವಾಡ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ತಲಾ ಇಬ್ಬರು, ಚಾಮರಾಜನಗರ, ಹಾಸನ, ಕೊಪ್ಪಳ, ರಾಯಚೂರು, ರಾಮನಗರ, ತುಮಕೂರು, ಉಡುಪಿ, ಚಿಕ್ಕಮಗಳೂರು, ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: 

ಪ್ರಧಾನಿ ನರೇಂದ್ರ ಮೋದಿ-ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

ಜನಸಂಖ್ಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಇದು ಸೂಕ್ತ ಸಮಯ: ಸಿ ಟಿ ರವಿ ಅಭಿಪ್ರಾಯ

(Bakrid 2021 Only 50 people are allowed to pray in mosques no mass prayers in Eidgah)

Published On - 7:39 pm, Fri, 16 July 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ