Bakrid 2024: ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ

ಮುಸ್ಲಿಮರ ಪ್ರಮುಖ ಹಬ್ಬವಾದ ಬಕ್ರೀದ್​​ ಹಬ್ಬ ನಾಡಿನೆಲ್ಲೆಡೆ ಸೋಮವಾರ ಆಚರಿಸಲಾಗುತ್ತಿದೆ. ಈ ಹಿನ್ನಲೆ ಬೆಂಗಳೂರಿನಲ್ಲಿ ಸಂಚಾರ ಪೊಲೀಸ್​ ಇಲಾಖೆ ಕೆಲ ಮಾರ್ಗಗಳಲ್ಲಿ ಸಂಚಾರವನ್ನು ನಿಷೇಧಿಸಿದ್ದಾರೆ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬೆಂಗಳೂರಿನ ಬಿಜಿ ರಸ್ತೆಯಲ್ಲಿ ಸಾಮಾನ್ಯವಾಗಿ ಬಕ್ರೀದ್ ಹಬ್ಬದಂದು ಧಾರ್ಮಿಕ ಪ್ರಾರ್ಥನೆಗಳನ್ನು ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಾರೆ. ಹೀಗಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ.

Bakrid 2024: ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ
ಬಕ್ರೀದ್ ಹಬ್ಬದಂದು ಬೆಂಗಳೂರಿನಲ್ಲಿ ಕೆಲವೆಡೆ ಸಂಚಾರ ನಿರ್ಬಂಧ: ಬದಲಿ ಮಾರ್ಗಗಳು ಹೀಗಿವೆ
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 16, 2024 | 5:01 PM

ಬೆಂಗಳೂರು, ಜೂನ್​ 16: ಮುಸ್ಲಿಂ ಸಮುದಾಯ ಬಕ್ರೀದ್ ಹಬ್ಬದ (Bakrid) ಪ್ರಯುಕ್ತ ಸೋಮವಾರದಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಬನ್ನೇರುಘಟ್ಟ ರಸ್ತೆಯ ಗುರಪ್ಪನಪಾಳ್ಯ ಮತ್ತು ಸುತ್ತಮುತ್ತ ಸಾರ್ವಜನಿಕರ ವಾಹನ ಸಂಚಾರವನ್ನು (traffic advisory) ಸಂಚಾರ ಪೊಲೀಸರು ನಿಷೇಧಿಸಿದ್ದಾರೆ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕರ ವಾಹನ ಸಂಚಾರಕ್ಕೆ ಬ್ರೇಕ್​ ಬೀಳಲಿದೆ.

ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ನಿರ್ಬಂಧ

ಸಾಗರ್ ಆಸ್ಪತ್ರೆ ಜಂಕ್ಷನ್‌ನಿಂದ ಗುರಪ್ಪನಪಾಳ್ಯ, ರೆಡ್ಡಿ ಆಸ್ಪತ್ರೆ ಜಂಕ್ಷನ್ 39ನೇ ಕ್ರಾಸ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌, ಜಿಡಿ ಮಾರ ಜಂಕ್ಷನ್​ನಿಂದ ಗುರಪ್ಪನಪಾಳ್ಯ ಜಂಕ್ಷನ್​ವರೆಗೆ ವಾಹನಗಳನ್ನು ನಿಷೇಧಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

ಡೈರಿ ವೃತ್ತದಿಂದ ಬನ್ನೇರುಘಟ್ಟ ರಸ್ತೆ ಕಡೆಗೆ ಬರುವ ವಾಹನಗಳು ಸ್ವಾಗತ್ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಬೇಕು. ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಚಲಿಸಬಹುದು. ಈಸ್ಟ್ ಎಂಡ್ ಜಂಕ್ಷನ್‌ನಲ್ಲಿ ಬಲತಿರುವು ಪಡೆದು 28ನೇ ಮೇನ್​ ಜಂಕ್ಷನ್​ನಲ್ಲಿ ಎಡಕ್ಕೆ ತಿರುವು ಪಡೆದು 8ನೇ ಮುಖ್ಯ ರಸ್ತೆಯಲ್ಲಿ ಚಲಿಸಿ ಡೆಲ್ಮಿಯಾ ಜಂಕ್ಷನ್ ಕಡೆಗೆ ಎಡಕ್ಕೆ ತಿರುವು ಪಡೆದುಕೊಂಡು ಜಿಡಿ. ಮರ ಜಂಕ್ಷನ್​ ಕಡೆಗೆ ಚಲಿಸಿ ನಂತರ ಬಲಕ್ಕೆ ಬನ್ನೇರುಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು ಮುಂದೆ ಸಾಗಬಹುದಾಗಿದೆ.

ಇದನ್ನೂ ಓದಿ: Eid-ul-Adha 2024: ತ್ಯಾಗ ಬಲಿದಾನದ ಪ್ರತೀಕವೇ ಈ ‘ಬಕ್ರೀದ್ ‘ ಏನಿದರ ವಿಶೇಷತೆ?

ಮೈಸೂರು ರಸ್ತೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು ಕಿಮ್ಕೋ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ವಿಜಯನಗರ ಜಂಕ್ಷನ್​​ ಕಡೆಗೆ ಸಾಗಬಹುದಾಗಿದೆ.

ಇದನ್ನೂ ಓದಿ: ಬಕ್ರೀದ್ ಹಬ್ಬವಿರುವ ಜೂನ್ 17, ಸೋಮವಾರದಂದು ಷೇರು ಮಾರುಕಟ್ಟೆಗೆ ರಜೆಯಾ? ಇಲ್ಲಿದೆ ಮಾರುಕಟ್ಟೆ ರಜಾದಿನಗಳ ಪಟ್ಟಿ

ಟೌನ್ ಹಾಲ್​ನಿಂದ ಮೈಸೂರು ರಸ್ತೆಗೆ ಬರುವ ವಾಹನಗಳು ಬಿಜಿಎಸ್ ಮೇಲ್ಸೇತುವೆಯ ಕೆಳಗೆ ಸರ್ವಿಸ್ ರಸ್ತೆಯನ್ನು ತೆಗೆದುಕೊಂಡು ಪಶುವೈದ್ಯಕೀಯ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಗೂಡ್ಸ್ ಶೆಡ್ ರಸ್ತೆಯನ್ನು ತಲುಪಬಹುದು ಅಥವಾ ಸಿರಸಿ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಜೆಜೆ ನಗರ-ಟ್ಯಾಂಕ್​ಬಂಡ ರಸ್ತೆ-ಹುಣಸೇಮರ ಮಾರ್ಗವನ್ನು ತೆಗೆದುಕೊಳ್ಳಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.