ಬಲ್ಲಾಳರಾಯನ ದುರ್ಗಾದಲ್ಲಿ ದುಬಾರಿ ಹಣ ವಸೂಲಿ ಆರೋಪ; ಪ್ರವಾಸಿಗರನ್ನು ನಿರ್ಬಂಧಿಸಿದ ಸ್ಥಳೀಯರು

ಬಲ್ಲಾಳರಾಯನದುರ್ಗದಲ್ಲಿ ಪ್ರವಾಸಿಗರಿಂದ ದುಬಾರಿ ಹಣ ವಸೂಲಿ ಮಾಡಿ ರಶೀದಿ ನೀಡದಂತೆ ವಂಚಿಸುತ್ತಿರುವ ಆರೋಪ ಕೇಳಿಬಂದಿದೆ. ಅಲ್ಲದೆ ಅರಣ್ಯ ಮತ್ತು ಪ್ರವಾಸೋದ್ಯಮ ಇಲಾಖೆ ವಿರುದ್ಧ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಲ್ಲಾಳರಾಯನ ದುರ್ಗಾದಲ್ಲಿ ದುಬಾರಿ ಹಣ ವಸೂಲಿ ಆರೋಪ; ಪ್ರವಾಸಿಗರನ್ನು ನಿರ್ಬಂಧಿಸಿದ ಸ್ಥಳೀಯರು
ಬಲ್ಲಾಳರಾಯನ ದುರ್ಗಾದಲ್ಲಿ ದುಬಾರಿ ಹಣ ವಸೂಲಿ ಆರೋಪ; ಪ್ರವಾಸಿಗರನ್ನು ನಿರ್ಬಂಧಿಸಿದ ಸ್ಥಳೀಯರು
Follow us
TV9 Web
| Updated By: Rakesh Nayak Manchi

Updated on:Oct 02, 2022 | 1:21 PM

ಚಿಕ್ಕಮಗಳೂರು: ದುಬಾರಿ ಹಣ ವಸೂಲಿ ಮಾಡುತ್ತಿರುವ ಹಿನ್ನೆಲೆ ಆಕ್ರೋಶಗೊಂಡಿರುವ ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಗ್ರಾಮಸ್ಥರು ಬಲ್ಲಾಳರಾಯನದುರ್ಗಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಿದ್ದಾರೆ. ಪ್ರಸಿದ್ಧ ತಾಣ ವೀಕ್ಷಿಸಲು ತಲಾ 305 ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿರುವ ಸ್ಥಳೀಯರು ಅರಣ್ಯ, ಪ್ರವಾಸೋದ್ಯಮ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಲ್ಲಾಳರಾಯನದುರ್ಗಕ್ಕೆ ಆಗಮಿಸುವ ಪ್ರವಾಸಿಗರಿಗೆ ವಿಶ್ರಾಂತಿಸಲು ಕೊಠಡಿ ವ್ಯವಸ್ಥೆ ಮತ್ತು ಶೌಚಾಲಯದ ವ್ಯವಸ್ಥೆಯೂ ಕಲ್ಪಿಸಿಲ್ಲ. ಆದರೆ ಪ್ರವಾಸಿಗರಿಂದ ತಲಾ 305 ರೂ.ನಂತೆ ವಸೂಲಿ ಮಾಡುತ್ತಿರುವ ಸಿಬ್ಬಂದಿ ರಶೀದಿ ನೀಡದೆ ಹಣ ಲಪಟಾಯಿಸುತ್ತಿದ್ದಾರೆ. ಹೀಗೆ 3 ವರ್ಷದಲ್ಲಿ 1.5 ಕೋಟಿಗೂ ಹೆಚ್ಚು ಹಣ ಸಂಗ್ರಹ ಆರೋಪ ಮಾಡಲಾಗುತ್ತಿದೆ. ಈ ವಿಚಾರವಾಗಿ ಸ್ಥಳಕ್ಕೆ ಆಗಮಿಸಿಸದ ಅದಿಕಾರಿಗಳನ್ನು ಕೂಡ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಫಿನಾಡಿನ ಪ್ರಸಿದ್ದ ಪ್ರವಾಸಿ ತಾಣಗಳಲ್ಲಿ ಬಲ್ಲಾಳರಾಯನದುರ್ಗ ಒಂದಾಗಿದೆ. ಆದರೆ ಇಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿದೆ ಕೇವಲ ಪ್ರವಾಸಿಗರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಅರೋಪ ಇದೀಗ ಕೇಳಿಬಂದಿದೆ. ಇದೇ ಕಾರಣಕ್ಕೆ ಬಲ್ಲಾಳರಾಯನದುರ್ಗಕ್ಕೆ ಪ್ರವಾಸಿಗರು ಪ್ರವೇಶಿಸದಂತೆ ಗ್ರಾಮಸ್ಥರು ತಡೆ ಹಾಕಿದ್ದಾರೆ.

ಹೇಳಿಕೊಳ್ಳಲು ಬಲ್ಲಾಳರಾಯನದುರ್ಗದಲ್ಲಿ ಪ್ರವಾಸಿಕರಿಗೆ ಅವಶ್ಯಕವಾದ ಶೌಚಾಲಯ ವ್ಯವಸ್ಥೆ, ವಿಶ್ರಾಂತಿ ಕೊಠಡಿಗಳಿಲ್ಲ. ಪರಿಸ್ಥಿತಿ ಹೀಗಿದ್ದರೂ ತಾಣ ವೀಕ್ಷಿಸಲು ಆಗಮಿಸುತ್ತಿರುವ ಪ್ರವಾಸಿಗರಿಂದ ಮಾತ್ರ ಸಿಬ್ಬಂದಿಗಳು ತೆಲೆಯೊಂದಕ್ಕೆ 305 ರೂಪಾಯಿ ಚಾರ್ಜ್ ಮಾಡುತ್ತಾರೆ. ಹೀಗಾಗಿ ಅರಣ್ಯ-ಪ್ರವಾಸೋದ್ಯಮ ಇಲಾಖೆಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಸ್ಥಳೀಯರು, ಪ್ರವಾಸಿಗರಿಗೆ ರಶೀದಿ ನೀಡದೇ ಹಣ ಲಪಟಾಯಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ. ತಾಣಕ್ಕೆ ಪ್ರವಾಸಿಗರು ಪ್ರವೇಶಿಸದಂತೆ ತಡೆದ ವಿಚಾರ ತಿಳಿದು ಸ್ಥಳಕ್ಕೆ ಭೇಟಿಕೊಟ್ಟ ಅಧಿಕಾರಿಗಳನ್ನು ಕೂಡ ಜನರು ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು.

ಬಲ್ಲಾಳರಾಯನ ದುರ್ಗಾವನ್ನು 12ನೇ ಶತಮಾನದ ಹೊಯ್ಸಳ ಸಾಮ್ರಾಜ್ಯದ 1ನೇ ವೀರ ಬಲ್ಲಾಳ ನ ಪತ್ನಿ ನಿರ್ಮಿಸಿದರು. ಇದು 1509 ಮೀಟರ್ ಎತ್ತರದಲ್ಲಿದ್ದು, ಪುರಾತನ ಕಾಲಬೈರವೇಶ್ವರ ದೇವಸ್ಥಾನವನ್ನ ನೋಡಬಹುದಾಗಿದೆ. ದಂತಕಥೆಯ ಪ್ರಕಾರ ಬಲ್ಲಾಳ 1 ಹಾಗೂ ಆತನ ಪತ್ನಿ ಪ್ರತಿದಿನ ಈ ದೇವಾಲಯಕ್ಕೆ ಭೇಟಿ ನೀಡುತ್ತಿದ್ದರು ಎನ್ನಲಾಗುತ್ತಿದೆ. ಬಲ್ಲಾಳರಾಯನ ದುರ್ಗಾ ಕೋಟೆಯನ್ನು ಕರ್ನಾಟ ದ್ರಾವಿಡ ಶೈಲಿಯಲ್ಲಿ ನಿರ್ಮಿಸಲಾಗಿದೆ. ಈ ಶೈಲಿಯು ಹೊಯ್ಸಳರ ಕಾಲದಲ್ಲಿ ಬಹಳ ಪ್ರಸಿದ್ಧಿ ಹೊಂದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Sun, 2 October 22

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್