ಇಂದಿನಿಂದ ಐದು ದಿನ ಸಂಪೂರ್ಣ ಲಾಕ್ಡೌನ್; ಕೊರೊನಾ ತಡೆಯಲು ಬಳ್ಳಾರಿ ಜಿಲ್ಲಾಡಳಿತದಿಂದ ಮಹತ್ವದ ನಿರ್ಧಾರ
ಜಿಲ್ಲೆಯಲ್ಲಿ 16 ಸಾವಿರಕ್ಕೂ ಹೆಚ್ಚು ಸೋಂಕಿತರು ಹೋಮ್ ಐಸೋಲೇಶನ್ನಲ್ಲಿದ್ದು, ಅವರನ್ನು ಕೊವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡಲಾಗುವುದು. ಹಾಸ್ಟೆಲ್, ಸಮುದಾಯ ಭವನ, ಕಲ್ಯಾಣ ಮಂಟಪಗಳಲ್ಲಿ ಕೊವಿಡ್ ಕೇರ್ ಸೆಂಟರ್ ಆರಂಭಿಸಲು ಜಿಲ್ಲಾಡಳಿತ ಮುಂದಾಗಿದೆ. ಆ ಮೂಲಕ ಕೊರೊನಾ ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ ಎಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.
ಬಳ್ಳಾರಿ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಎಷ್ಟೇ ಪ್ರಯತ್ನ ಮಾಡಿದರೂ ಬಳ್ಳಾರಿ ಜಿಲ್ಲೆಯಲ್ಲಿ ಸೋಂಕು ಮಾತ್ರ ಕಡಿಮೆಯಾಗುತ್ತಿಲ್ಲ. ರಾಜ್ಯದ ಕೆಲವೇ ಕೆಲವು ಕೊರೊನಾ ರೆಡ್ ಆಲರ್ಟ್ ಜಿಲ್ಲೆಗಳಲ್ಲಿ ಬಳ್ಳಾರಿ ಕೂಡ ಒಂದು. ಕೊರೊನಾ ಪ್ರಕರಣ ಶೇಕಡಾ 47 ರಷ್ಟಿರುವ ಈ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸದ್ಯ ಲಾಕ್ಡೌನ್ ಮೊರೆ ಹೋಗಲಾಗಿದೆ. ಇಂದಿನಿಂದ5ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಮಾಡಿ ಬಳ್ಳಾರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತಪ್ಪಿಸಲು ಸರ್ಕಾರ ಬೆಳಿಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ ಲಾಕ್ಡೌನ್ ಘೋಷಣೆ ಮಾಡಿತ್ತು. ಆದರೆ ಈ ಲಾಕ್ಡೌನ್ನಿಂದ ಜಿಲ್ಲೆಯಲ್ಲಿ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ಬಳ್ಳಾರಿ, ವಿಜಯನಗರ ಉಭಯ ಜಿಲ್ಲೆಗಳಲ್ಲಿ ಈಗ ಕಠಿಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
ಇಂದು ಬೆಳಿಗ್ಗೆ 10 ರಿಂದ ಐದು ದಿನಗಳ ಕಾಲ ಉಭಯ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೂ ಕೂಡ ಅವಕಾಶ ಇರುವುದಿಲ್ಲ. ಹಾಲು, ಔಷಧಿ ಅಂಗಡಿ, ಹಾಪ್ ಕಾಮ್ಸ್ ಮೂಲಕ ತರಕಾರಿ ಹಣ್ಣು ಮಾರಾಟ ಇಷ್ಟು ಬಿಟ್ಟರೆ ಜಿಲ್ಲೆಯಲ್ಲಿ ಎಲ್ಲವೂ ಬಂದ್ ಆಗಲಿವೆ. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸಾಕಷ್ಟು ಕೈಗಾರಿಕೆ ಕಂಪನಿಗಳಿದ್ದು, ಕಂಪನಿಗಳ ಯಾವುದೇ ವಾಹನಗಳು ಕೂಡ ಸಂಚಾರ ಮಾಡುವಂತಿಲ್ಲ. ಕಂಪನಿಯಲ್ಲಿಯೇ ಸಿಬ್ಬಂದಿಗಳು ವಾಸ್ತವ್ಯ ಹೂಡಬೇಕು. ಇನ್ನೂ ಅಂತರ್ ಜಿಲ್ಲೆಗೆ ಮೆಡಿಕಲ್ ಎಮೆರ್ಜೆನ್ಸಿ ಇದ್ದವರಿಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದಂತೆ ಯಾವುದೇ ವಾಹನಗಳಿಗೂ ಪ್ರವೇಶ ಇಲ್ಲ. ಜೊತೆಗೆ ಅಂತರ್ ರಾಜ್ಯದ ಗೂಡ್ಸ್ ವಾಹನಗಳ ಹೊರತು ಪಡಿಸಿ ಯಾವುದೇ ವಾಹನ, ಜನರ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಹೇಳಿದ್ದಾರೆ.
ಜಿಲ್ಲೆಯಲ್ಲಿ 16 ಸಾವಿರಕ್ಕೂ ಹೆಚ್ಚು ಸೋಂಕಿತರು ಹೋಮ್ ಐಸೋಲೇಶನ್ನಲ್ಲಿದ್ದು, ಅವರನ್ನು ಕೊವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡಲಾಗುವುದು. ಹಾಸ್ಟೆಲ್, ಸಮುದಾಯ ಭವನ, ಕಲ್ಯಾಣ ಮಂಟಪಗಳಲ್ಲಿ ಕೊವಿಡ್ ಕೇರ್ ಸೆಂಟರ್ ಆರಂಭಿಸಲು ಜಿಲ್ಲಾಡಳಿತ ಮುಂದಾಗಿದೆ. ಆ ಮೂಲಕ ಕೊರೊನಾ ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ ಎಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಈಗ ಕೊರೊನಾ ಹಾಟ್ ಸ್ಪಾಟ್ ಜಿಲ್ಲೆಯಾಗಿ ಹೊರ ಹೊಮ್ಮಿದೆ. ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಕೊರೊನಾ ಚೈನ್ ಲಿಂಕ್ ತುಂಡರಿಸಲು ಈಗ ಜಿಲ್ಲಾಡಳಿತ ಸಂಪೂರ್ಣ ಲಾಕ್ಡೌನ್ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೆ ಪರಿಸ್ಥಿತಿ ಹೀಗೆ ಮುಂದುವರಿದರೆ ಮತ್ತೆ ಲಾಕ್ಡೌನ್ ವಿಸ್ತರಣೆ ಮಾಡುವ ನಿರ್ಧಾರವನ್ನ ಜಿಲ್ಲಾಡಳಿತ ಮಾಡಿದೆ.
ಇದನ್ನೂ ಓದಿ: