ಬಳ್ಳಾರಿ: ದಲ್ಲಾಳಿಗಳ ಕಾಟದಿಂದ ಬೇಸತ್ತು ವಿಷಸೇವಿಸಿ ನಾಲ್ವರು ರೈತರು ಆತ್ಮಹತ್ಯೆಗೆ ಯತ್ನ
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ದಲ್ಲಾಳಿಗಳ ಕಾಟದಿಂದ ಬೇಸತ್ತು ವಿಷಸೇವಿಸಿ ನಾಲ್ವರು ರೈತರು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. 1 ಕೋಟಿ 93 ಲಕ್ಷ ರೂ. ಹಣವನ್ನು ದಲ್ಲಾಳಿಗಳು ಬಾಕಿ ಉಳಿಸಿಕೊಂಡಿದ್ದಾರೆ. ಕಳೆದ 18 ತಿಂಗಳಿಂದ ಹಣ ನೀಡದೆ ಸತಾಯಿಸುತ್ತಿದ್ದಾರೆ. ಹೀಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಬಳ್ಳಾರಿ, ಜೂನ್ 30: ದಲ್ಲಾಳಿಗಳ ಕಾಟದಿಂದ ಬೇಸತ್ತು ನಾಲ್ವರು ರೈತರು (farmers) ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ. ರುದ್ರೇಶ್, ಶೇಖರಪ್ಪ, ಹನುಮಂತ, ಕೋಣೇರಪ್ಪ ಆತ್ಮಹತ್ಯೆಗೆ ಯತ್ನಿಸಿದ ರೈತರು. ಅಸ್ವಸ್ಥಗೊಂಡ ನಾಲ್ವರು ರೈತರನ್ನು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ವರ್ಷ ಅಗ್ರಿಗ್ರೇಡ್ ಕಂಪನಿಯ ವಿರೂಪಾಕ್ಷಪ್ಪ, ಸುದರ್ಶನ, ರಾಯರೆಡ್ಡಿ ಎಂಬ ದಲ್ಲಾಳಿ ಮೂಲಕ ರೈತರು ಮೆಣಸಿನಕಾಯಿ ಮಾರಾಟ ಮಾಡಿದ್ದರು. ಆಶಾರಾಣಿ, ಅಶೋಕಕುಮಾರ್, ಶಿವಮೂರ್ತಿ ಎಂಬುವವರಿಂದ ಮೆಣಸಿನಕಾಯಿ ಖರೀದಿ ಆರೋಪ ಮಾಡಲಾಗಿದೆ. 1 ಕೋಟಿ 93 ಲಕ್ಷ ರೂ. ಹಣವನ್ನು ದಲ್ಲಾಳಿಗಳು ಬಾಕಿ ಉಳಿಸಿಕೊಂಡಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಗ್ಯಾಂಗ್ವಾರ್ಗೆ ನಡೆದಿದ್ಯಾ ತಯಾರಿ? ಕೊಲೆ ಸಂಚು ಆರೋಪದಡಿ ಕೇಸ್ ಬುಕ್
ಕಳೆದ 18 ತಿಂಗಳಿಂದ ಹಣ ನೀಡದೆ ಸತಾಯಿಸುತ್ತಿದ್ದಾರೆ. ಹೀಗಾಗಿ ದಲ್ಲಾಳಿಗಳ ಕಳ್ಳಾಟಕ್ಕೆ ಮನನೊಂದು ವಿಷ ಸೇವಿಸಿದ್ದರು. ಬಾಕಿ ಹಣ ನೀಡದಿದ್ದರೆ ಸಾಮೂಹಿಕವಾಗಿ ವಿಷ ಸೇವಿಸುವುದಾಗಿ ಇದೀಗ ರೈತರು ಎಚ್ಚರಿಕೆ ನೀಡಿದ್ದಾರೆ.
ಮನೆ ಮುಂದೆ ಚಪ್ಪಲಿ ಬಿಡುವ ವಿಚಾರಕ್ಕೆ ಕಿರಿಕ್: ರಸ್ತೆಗೆ ಎಳೆತಂದು ಹಲ್ಲೆ
ನೆಲಮಂಗಲ: ಮನೆ ಮುಂದೆ ಚಪ್ಪಲಿ ಬಿಡುವ ವಿಚಾರಕ್ಕೆ ಕಿರಿಕ್ ಆಗಿದ್ದು, ರಸ್ತೆಗೆ ಎಳೆತಂದು ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ವಾಜರಹಳ್ಳಿಯಲ್ಲಿ ಘಟನೆ ನಡೆದಿದೆ. ರವಿಕುಮಾರ್ ಮನೆ ಬಾಗಿಲಿನ ಮುಂದೆ ನೆರೆಮನೆ ಸಂತೋಷ್ ಚಪ್ಪಲಿ ಬಿಟ್ಟಿದ್ದ. ಇದನ್ನು ರವಿಕುಮಾರ್ ಪ್ರಶ್ನಿಸಿದ್ದ. ಸಿಟ್ಟಿಗೆದ್ದು ಹುಡುಗರನ್ನು ಕರೆಸಿ ರವಿಕುಮಾರ್ಗೆ ಸಂತೋಷ್ ಹಿಗ್ಗಾಮುಗ್ಗ ಥಳಿಸಿದ್ದಾನೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಅಪಹರಣ ಪ್ರಕರಣ; ಕನ್ನಡ ಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ ಎಫ್ಐಆರ್
ರವಿಕುಮಾರ್ನನ್ನು ಮನೆ ಮುಂದಿನ ರಸ್ತೆಗೆ ಎಳೆದುತಂದು ಮನಸೋಇಚ್ಛೆ ಹಲ್ಲೆ ಮಾಡಲಾಗಿದೆ. ನಂತರ 112ಗೆ ಕರೆ ಮಾಡಿ ಸಂತೋಷ್ & ಗ್ಯಾಂಗ್ ಪೊಲೀಸರಿಗೆ ಒಪ್ಪಿಸಲಾಗಿದೆ. ಹಲ್ಲೆಗೊಳಗಾದ ರವಿಕುಮಾರ್ನನ್ನೂ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ಹಲ್ಲೆ ನಡೆಸಿದವರ ಪ್ರಭಾವಕ್ಕೆ ನೆಲಮಂಗಲ ಟೌನ್ ಪೊಲೀಸರು ಒಳಗಾಗಿದ್ದಾರೆ.
ರವಿಕುಮಾರ್ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಹಲ್ಲೆ ನಡೆಸಿದ ಸಂತೋಷ್ & ಗ್ಯಾಂಗ್ ವಿರುದ್ಧ ಕ್ರಮಕೈಗೊಳ್ಳುವಂತೆ ನೆಲಮಂಗಲ ಟೌನ್ ಠಾಣೆ ಪೊಲೀಸರಿಗೆ ರವಿಕುಮಾರ್ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.