ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು​: ಲೋಕಾಯುಕ್ತಕ್ಕೆ ಬಿಜೆಪಿ ದೂರು

ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರಿದಿದೆ. ತಜ್ಞರ ಸಮಿತಿ IV ಗ್ಲುಕೋಸ್ ಅನ್ನು ಕಾರಣವೆಂದು ವರದಿ ಮಾಡಿದ್ದರೂ, ಸಾವುಗಳು ನಿಲ್ಲುತ್ತಿಲ್ಲ. ಈ ಸಂಬಂಧ ಬಿಜೆಪಿ ನಿಯೋಗವು ಲೋಕಾಯುಕ್ತರಿಗೆ ದೂರು ನೀಡಿದೆ. ಸರ್ಕಾರದ ನಿರ್ಲಕ್ಷ್ಯ ಮತ್ತು ಸತ್ಯ ಮುಚ್ಚಿಡುವ ಪ್ರಯತ್ನಗಳನ್ನು ದೂರಿನಲ್ಲಿ ಖಂಡಿಸಲಾಗಿದೆ. ಬಾಣಂತಿಯರ ಸಾವಿನ ಮೂಲ ಕಾರಣಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು​: ಲೋಕಾಯುಕ್ತಕ್ಕೆ ಬಿಜೆಪಿ ದೂರು
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು​: ಲೋಕಾಯುಕ್ತಕ್ಕೆ ಬಿಜೆಪಿ ದೂರು
Follow us
Malatesh Jaggin
| Updated By: ಗಂಗಾಧರ​ ಬ. ಸಾಬೋಜಿ

Updated on: Dec 06, 2024 | 3:18 PM

ಬೆಂಗಳೂರು, ಡಿಸೆಂಬರ್​ 06: ಬಳ್ಳಾರಿಯ ಬಿಮ್ಸ್​ ಆಸ್ಪತ್ರೆಯಲ್ಲಿ (Bims Hospital) ಬಾಣಂತಿಯರ ಸಾವು ಮುಂದುವರೆದಿದೆ. ಸಿಜೇರಿಯನ್ ಬಳಿಕ ಒಬ್ಬರ ಮೇಲೆ ಒಬ್ಬರು ಸಾವನ್ನಪ್ತಿದ್ದಾರೆ. ನಿನ್ನೆ ಮತ್ತಿಬ್ಬರು ಬಾಣಂತಿಯರು ಮೃತಪಟ್ಟಿದ್ದಾರೆ. ಈಗಾಗಲೇ ಪ್ರಕರಣವನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೀಗ ಈ ವಿಚಾರವಾಗಿ ಬಿಜೆಪಿ ನಿಯೋಗ ಇಂದು ಲೋಕಾಯುಕ್ತಕ್ಕೆ ದೂರು ನೀಡಿದೆ.

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಸಿಕೆ ರಾಮಮೂರ್ತಿ ಮತ್ತು ಎಂಎಲ್​​ಸಿ ರವಿಕುಮಾರ್​ ಒಳಗೊಂಡ ನಿಯೋಗ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ  ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿದೆ.

ದೂರಿನಲ್ಲೇನಿದೆ? 

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಇತ್ತೀಚೆಗೆ ತಜ್ಞರ ಸಮಿತಿಯೊಂದನ್ನು ರಚನೆ ಮಾಡಿ ಬಾಣಂತಿಯರ ಸಾವಿಗೆ ಕಾರಣ ಪತ್ತೆ ಹಚ್ಚುವಂತೆ ತಿಳಿಸಿತ್ತು. ಅದರಂತೆ ತಜ್ಞರ ಸಮಿತಿಯೂ ಬಾಣಂತಿಯರ ಸಾವಿಗೆ IV ಗ್ಲುಕೋಸ್ ಕಾರಣ ಎಂಬ ವರದಿ ಬಹಿರಂಗಗೊಂಡಿತ್ತು. ಇಷ್ಟಾದರೂ ಕೂಡ ಬಾಣಂತಿಯರ ಸಾವು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ.

ಇದನ್ನೂ ಓದಿ: ಬಿಮ್ಸ್​ನಲ್ಲಿ 5 ಬಾಣಂತಿಯರ ಸಾವು ಪ್ರಕರಣ: ಸ್ಫೋಟಕ ಅಂಶ ಬಯಲು, ಪರಿಹಾರ ಘೋಷಿಸಿದ ಸರ್ಕಾರ

ಈ ಪ್ರಕರಣವು ಕಾಂಗ್ರೆಸ್ ಸರ್ಕಾರದ, ವಿಶೇಷವಾಗಿ ಆರೋಗ್ಯ ಸಚಿವಾಲಯದ, ಆರೋಗ್ಯ ರಕ್ಷಣೆಯ ಮೂಲಭೂತ ಮಾನದಂಡಗಳನ್ನು ಖಾತ್ರಿಪಡಿಸುವಲ್ಲಿ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ. ಘೋರ ನಿರ್ಲಕ್ಷ್ಯ, ಸತ್ಯವನ್ನು ಮರೆಮಾಚಲು ಮುಂದಾಗಿರುವುದು ಖಂಡನೀಯ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚೆಗೆ ನವೆಂಬರ್​ 24 ರಂದು ಕೂಡ್ಲಿಗಿಯ ಮಹಿಳೆಯೊಬ್ಬರು ಗರ್ಭಿಣಿ ಆಗಿದ್ದರು. ಹೀಗಾಗಿ ಬಳ್ಳಾರಿಯ ವಿಮ್ಸ್‌ಗೆ ದಾಖಲಾಗಿದ್ದಾರೆ. ದಾಖಲಾದ ಎರಡೇ ದಿನದಲ್ಲಿ ಅವರು ನಿಧನರಾದರು. ಈ ಹೃದಯ ವಿದ್ರಾವಕ ಘಟನೆಯು ಸಂಪೂರ್ಣ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಕಡಿಮೆ-ಗುಣಮಟ್ಟದ IV ದ್ರವಗಳ ಅಡ್ಯೂನಿಸ್ಟ್ರೇಶನ್ ರೋಗಿಗಳ ಸುರಕ್ಷತೆಯ ಸಂಪೂರ್ಣ ನಿರ್ಲಕ್ಷ್ಯವನ್ನು ಸೂಚಿಸುತ್ತದೆ ಮತ್ತು ಪ್ರಸ್ತುತ ಆರೋಗ್ಯ ಸಚಿವರ ನಾಯಕತ್ವದಲ್ಲಿ ವ್ಯವಸ್ಥಿತ ಭ್ರಷ್ಟಾಚಾರ ಮತ್ತು ದುರುಪಯೋಗವನ್ನು ಬಹಿರಂಗಪಡಿಸುತ್ತದೆ.

ಇದನ್ನೂ ಓದಿ: ಬಳ್ಳಾರಿ ಬಾಣಂತಿಯರ ಸಾವಿನ ಬಗ್ಗೆ ಸರ್ಕಾರ ಗಂಭೀರವಾಗಿದೆ, ರಾಜೀನಾಮೆಗೂ ಸಿದ್ಧ: ಗುಂಡೂರಾವ್

ಬಾಣಂತಿಯರ ಸಾವಿಗೆ ಮೂಲ ಕಾರಣಗಳನ್ನು ತಿಳಿಸುವ ಬದಲು, ಆಸ್ಪತ್ರೆಯ ಆಡಳಿತಗಾರರು, ಅಧಿಕಾರಿಗಳು ಮತ್ತು ಕಾಂಗ್ರೆಸ್​ ನಾಯಕರು ಸತ್ಯವನ್ನು ಹತ್ತಿಕ್ಕಲು ಒಟ್ಟಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಕರಣವನ್ನು ರತ್ನಗಂಬಳಿಯ ಕೆಳಗೆ ತಳ್ಳುವ ಈ ಪಿತೂರಿಯು ಕರ್ನಾಟಕದ ಜನರಿಗೆ ಅಪಮಾನ ಮತ್ತು ಅಧಿಕಾರದ ಅಸ್ಪಷ್ಟ ದುರುಪಯೋಗವಾಗಿದೆ ಎಂದು ಬಿಜೆಪಿ ದೂರಿನಲ್ಲಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್