AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಬಾಣಂತಿಯರ ಸಾವಿನ ಬಗ್ಗೆ ಸರ್ಕಾರ ಗಂಭೀರವಾಗಿದೆ, ರಾಜೀನಾಮೆಗೂ ಸಿದ್ಧ: ಗುಂಡೂರಾವ್

ಬಳ್ಳಾರಿಯಲ್ಲಿ ಐವರು ಬಾಣಂತಿಯರು ಮೃತಪಟ್ಟ ಘಟನೆಯನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಔಷಧ ತಯಾರಿಕಾ ಕಂಪನಿಯ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ ಮತ್ತು ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಳ್ಳಾರಿ ಬಾಣಂತಿಯರ ಸಾವಿನ ಬಗ್ಗೆ ಸರ್ಕಾರ ಗಂಭೀರವಾಗಿದೆ, ರಾಜೀನಾಮೆಗೂ ಸಿದ್ಧ: ಗುಂಡೂರಾವ್
ದಿನೇಶ್ ಗುಂಡೂರಾವ್
Sunil MH
| Edited By: |

Updated on:Dec 06, 2024 | 11:22 AM

Share

ಬೆಂಗಳೂರು, ಡಿಸೆಂಬರ್ 6: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರದಲ್ಲಿ ಪ್ರತಿಪಕ್ಷಗಳ ಸಹಕಾರವೂ ನಮಗೆ ಅಗತ್ಯ. ಇದು ಜೀವಕ್ಕೆ ಸಂಬಂಧಿಸಿದ ವಿಚಾರ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ರಾಜೀನಾಮೆಯಿಂದ ಸರಿಯಾಗುತ್ತದೆ ಎಂಬುದೇ ಆದರೆ ಅದಕ್ಕೂ ಸಿದ್ಧ. ಇದರಲ್ಲಿ ನನ್ನ ಪ್ರತಿಷ್ಠೆ ಏನಿಲ್ಲ. ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಸಿದ್ಧ ಎಂದರು.

ಬಳ್ಳಾರಿಯಲ್ಲಿ 9 ಜನರಿಗೆ ಸಮಸ್ಯೆ ಆಗಿತ್ತು. ನಾಲ್ವರು ತೀರಿಕೊಂಡಿದ್ದಾರೆ. ಐದನೇಯವರು ಚಿಕಿತ್ಸೆ ಪಡೆಯುತ್ತಿದ್ದರು. ಅವರೂ ತೀರಿಕೊಂಡಿದ್ದಾರೆ. ಅದೇ ಬ್ಯಾಚ್​ನ ರಿಂಗರ್ ಲ್ಯಾಕ್ಟೇಟ್ ದ್ರಾವಣ‌ ಕೊಡಲಾಗಿತ್ತು. ಈಗಾಗಲೇ ಕಂಪೆನಿ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆಯೂ ಇತ್ತು ಎನ್ನಲಾಗಿದೆ. ಆದರೆ, ಚೇತರಿಸಿಕೊಳ್ಳುತ್ತಿದ್ದರು ಎಂದು ವೈದ್ಯರು ಹೇಳಿದ್ದರು. ಆದರೆ ಗುರುವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವೈದ್ಯರು ತಿಳಿಸಿದ್ದರು ಎಂದು ಸಚಿವರು ಹೇಳಿದರು.

ಬಿಜೆಪಿಯವರು ಖಂಡಿತವಾಗಿಯೂ ಲೋಕಾಯುಕ್ತಕ್ಕೆ ದೂರು ನೀಡಲಿ. ನನ್ನ ರಾಜೀನಾಮೆಯಿಂದ ಸರಿಯಾಗಲಿದೆ ಎಂದಾದರೆ ಅದಕ್ಕೂ ಸಿದ್ಧ. ಆದರೆ, ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿದೆ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು ಎಂದರು.

ಈ ವರ್ಷ 327 ಸಾವು

ಈ ವರ್ಷ ರಾಜ್ಯದಲ್ಲಿ ಈವರೆಗೆ 327 ಮೆಟರ್ನಲ್ ಸಾವಾಗಿದೆ. ಎಲ್ಲವನ್ನೂ ಪರಿಶೀಲಿಸಿ ಎಂದು ಸೂಚನೆ ನೀಡಿದ್ದೇವೆ. ಇಂಥ ಪ್ರಕರಣಗಳಲ್ಲಿ ಸಹನೆ ಇರಬಾರದು, ಕಠಿಣ ಕಾನೂನು ಕ್ರಮ ಆಗಬೇಕು. ಫಾರ್ಮಾಸ್ಯುಟಿಕಲ್ ಕಂಪನಿಗಳನ್ನು ರಕ್ಷಿಸುವ ಕಾನೂನುಗಳಾಗಿ ಹೋಗಿವೆ. ತಪ್ಪು ಮಾಡಿದರೆ ಶಿಕ್ಷೆ ಕೊಡುವಲ್ಲಿ ನಮ್ಮ ಕಾನೂನುಗಳು ವಿಫಲವಾಗಿವೆ ಎಂದು ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದರು.

ಸಾವಿನ ಸಂಖ್ಯೆ ಐದಕ್ಕೆ ಏರಿಕೆ

ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯ ನಂತರ ನೀಡಲಾದ ಐವಿ ದ್ರಾವಣದಿಂದಾಗಿ ನಾಲ್ವರು ಬಾಣಂತಿಯರು ಮೃತಪಟ್ಟಿದ್ದರು. ಗುರುವಾರ ಮತ್ತೊಬ್ಬರು ಬಾಣಂತಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಬಿಮ್ಸ್​ನಲ್ಲಿ 5 ಬಾಣಂತಿಯರ ಸಾವು ಪ್ರಕರಣ: ಸ್ಫೋಟಕ ಅಂಶ ಬಯಲು, ಪರಿಹಾರ ಘೋಷಿಸಿದ ಸರ್ಕಾರ

ಏತನ್ಮಧ್ಯೆ, ಔಷಧ ತಯಾರಿಸಿದ ಕಂಪನಿ ಮೇಲೆ ಕ್ರಮ ಕೈಗೊಳ್ಳುತ್ತಿದ್ದೇವೆ. ಮೃತ ಬಾಣಂತಿಯರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ್ದೇವೆ. ಇನ್ಮುಂದೆ ಇಂತಹ ಘಟನೆಗಳು ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಗುಂಡೂರಾವ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:21 am, Fri, 6 December 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ