AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ನಿಗದಿಯಾಗಿದ್ದ ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಿಕೆ

ನೀತಿ ಸಂಹಿತೆ ಹಾಗೂ ಅಧಿಕಾರಿಗಳು ಚುನಾವಣಾ ಕೆಲಸದಲ್ಲಿ ಬ್ಯುಸಿ ಹಿನ್ನೆಲೆ ನಾಳೆ ನಿಗದಿಯಾಗಿದ್ದ ಬಳ್ಳಾರಿ ಮೇಯರ್ ಚುನಾವಣೆಯನ್ನು ಮುಂದೂಡಿ ಕಲಬುರಗಿ ಪ್ರಾದೇಶಿಕ ಆಯುಕ್ತ ಆದೇಶ ಹೊರಡಿಸಲಾಗಿದೆ. ಲೋಕಸಭಾ ಚುನಾವಣೆಯ ಬಳಿಕ ನಡೆಸುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌ ಬಹುಮತ ಹೊಂದಿದೆ.

ನಾಳೆ ನಿಗದಿಯಾಗಿದ್ದ ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಿಕೆ
ಬಳ್ಳಾರಿ ಮಹಾನಗರ ಪಾಲಿಕೆ
ವಿನಾಯಕ ಬಡಿಗೇರ್​
| Edited By: |

Updated on: Mar 27, 2024 | 8:45 PM

Share

ಬಳ್ಳಾರಿ, ಮಾರ್ಚ್​​ 27: ನೀತಿ ಸಂಹಿತೆ ಹಾಗೂ ಅಧಿಕಾರಿಗಳು ಚುನಾವಣಾ ಕೆಲಸದಲ್ಲಿ ಬ್ಯುಸಿ ಹಿನ್ನೆಲೆ ನಾಳೆ ನಿಗದಿಯಾಗಿದ್ದ ಬಳ್ಳಾರಿ ಮೇಯರ್ ಚುನಾವಣೆ (Bellary Municipal Corporation) ಯನ್ನು ಮುಂದೂಡಿ ಕಲಬುರಗಿ ಪ್ರಾದೇಶಿಕ ಆಯುಕ್ತ ಆದೇಶ ಹೊರಡಿಸಲಾಗಿದೆ. ಲೋಕಸಭಾ ಚುನಾವಣೆಯ ಬಳಿಕ ನಡೆಸುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಾಲಿ ಮೇಯರ್ ಶ್ವೇತಾ ಅವಧಿ ಅಂತ್ಯ ಹಿನ್ನೆಲೆ ಚುನಾವಣೆ ನಿಗದಿ ಆಗಿತ್ತು. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌ ಬಹುಮತ ಹೊಂದಿದೆ.

ನಾಳೆ ನಡೆಯಬೇಕಿದ್ದ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಪಾಲಿಕೆಯ ಗದ್ದುಗೆ ಏರಲು ಆಕಾಂಕ್ಷಿಗಳು ಬರಪೂರ ಉಡುಗೊರೆಗಳನ್ನು ಹಂಚಿದ್ದರು. ಮುಲ್ಲಂಗಿ ನಂದೀಶ್, ಗಾದೆಪ್ಪ, ಪೇರಂ ವಿವೇಕ್ ಮತ್ತು ಪಕ್ಷೇತರ ಸದಸ್ಯ ಪ್ರಭಂಜನ್, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್‌ ಮತ್ತು ಉಪಮೇಯರ್ ಆಕಾಂಕ್ಷಿಗಳಾಗಿದ್ದಾರೆ. ಮೂವರು ಪಾಲೆಕೆ ಸದಸ್ಯರ ಮನೆ – ಮನೆಗೆ ಹೋಗಿ ಊಡುಗೊರೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಫೈನಲ್, ಅಧಿಕೃತ ಘೋಷಣೆಯೊಂದೆ ಬಾಕಿ

ಮುಲ್ಲಂಗಿ ನಂದೀಶ್ ಪಾಲಿಕೆ ಸದಸ್ಯರಿಗೆ ಬೆಳ್ಳಿ ತಟ್ಟೆ ಮತ್ತು ಕಾಂಗ್ರೆಸ್ ಚಿಹ್ನೆ ಇರುವ ಬಂಗಾರದ ಚಿಕ್ಕ ಆಭರಣವನ್ನು ಉಡುಗೊರೆಯಾಗಿ ನೀಡಿದ್ದರು. ಪಕ್ಷೇತರ ಸದಸ್ಯ ಪ್ರಭಂಜನ್ ರೇಷ್ಮೆ ಪಂಚೆ, ಸೀರೆ ಮತ್ತು ಇನ್ನಿಬ್ಬರುಡ್ರೈಪ್ರೂಟ್ಸ್ ಬಾಕ್ಸ್ ನೀಡಿ ಸನ್ಮಾನ ಮಾಡಿದ್ದಾರೆ.

ಇದನ್ನೂ ಓದಿ: ಬರ್ತಡೇ ದಿನವೇ ಮಾಜಿ ಮೇಯರ್ ಮಗನ ಅಟ್ಟಹಾಸ, ತಲ್ವಾರ ಝಳಪಿಸಿ ಹುಂಬತನ, ಯುವಕ ಬೆಂಗಳೂರಿನಲ್ಲಿ ಸಾವು

ಒಟ್ಟು 39 ಸದ್ಯರ ಪೈಕಿ 21 ಕಾಂಗ್ರೆಸ್, 5 ಪಕ್ಷೇತರರು ಮತ್ತು 13 ಬಿಜೆಪಿ ಸದಸ್ಯರಿದ್ದಾರೆ. ಕೆಲವು ಸದಸ್ಯರು ಬಳ್ಳಾರಿ ಶಾಸಕ ಭರತ್ ರೆಡ್ಡಿ ಬೆಂಬಲಿಗರಾಗಿದ್ದರೇ, ಕೆಲವರು ಸಚಿವ ನಾಗೇಂದ್ರ ಬೆಂಬಲಿಗರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ