AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂನಲ್ಲಿ ಹಣ ದರೋಡೆ ಪ್ರಕರಣ: ಬಳ್ಳಾರಿ ಪೊಲೀಸರಿಂದ ಮೂವರ ಬಂಧನ

ಎರಡು ಸೀಕ್ರೆಟ್ ಕೋಡ್‍ಗಳನ್ನ ಬಳಸಿ ಎಟಿಎಂನಲ್ಲಿ ಹಣ ದೋಚಲಾಗಿದೆ ಎನ್ನುವುದನ್ನು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಮೂವರು ಆರೋಪಿಗಳಿಂದ 8 ಲಕ್ಷದ 26 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಎಟಿಎಂನಲ್ಲಿ ಹಣ ದರೋಡೆ ಪ್ರಕರಣ: ಬಳ್ಳಾರಿ ಪೊಲೀಸರಿಂದ ಮೂವರ ಬಂಧನ
ಎಟಿಎಂ ಮಷಿನ್ ನಿರ್ವಾಹಕ ಎಂಜಿನಿಯರ್ ಸೇರಿದಂತೆ ಮೂವರ ಬಂಧನ
preethi shettigar
| Edited By: |

Updated on: Apr 24, 2021 | 1:44 PM

Share

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ನೆಲ್ಲುಡಿ ಕೊಟಾಲ್​ನಲ್ಲಿರುವ ಎಟಿಎಂ ಮಷಿನ್​ನಲ್ಲಿರುವ ಸರಿ ಸುಮಾರು 9.36 ಲಕ್ಷ ರೂಪಾಯಿಗಳ‌ ಮೊತ್ತದ ‌ಹಣವನ್ನ ದರೋಡೆ ಮಾಡಿರುವ ಪ್ರಕರಣ ಭೇದಿಸಿರುವ ಕುರುಗೋಡು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಪ್ರಿಲ್ 4 ರಂದು ನೆಲ್ಲುಡಿ ಕೊಟಾಲ್​ನಲ್ಲಿರುವ ಎಟಿಎಂ ಮಷಿನ್​ನಲ್ಲಿ ಈ ದರೋಡೆ ನಡೆದಿದ್ದು, ಏಪ್ರಿಲ್ 20ರಂದು ಎಟಿಎಂ ಮಷಿನ್​ನಲ್ಲಿ ಹಣ ದರೋಡೆ ಮಾಡಿರುವ ಪ್ರಕರಣದಲ್ಲಿ ಭಾಗಿಯಾಗಿದ್ದ ಎಟಿಎಂ ಮಷಿನ್ ನಿರ್ವಾಹಕ ಎಂಜಿನಿಯರ್ ಸೇರಿದಂತೆ ಮೂವರನ್ನ ಬಂಧಿಸಲಾಗಿದೆ.

ಈ ದರೋಡೆ ನಡೆದು ಕೇವಲ ಇಪ್ಪತ್ತೇ ದಿನಗಳಲ್ಲಿ ಈ ಪ್ರಕರಣವನ್ನು ಭೇದಿಸುವಲ್ಲಿ ಕುರುಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ. ಎಟಿಎಂ ಮಷಿನ್​ಗಳ ನಿರ್ವಾಹಕ ಉಸ್ತುವಾರಿ ವಹಿಸಿದ್ದ ಕಸ್ಟಮ್ ಸರ್ವೀಸ್​ನ ಎಂಜಿನಿಯರ್ ಲೋಕೇಶ ಹಾಗೂ ಕೆ.ವೀರೇಶ ಮತ್ತು ಎಂ.ಡಿ.ಶ್ರೀನಿವಾಸ ಎಂಬುವವರನ್ನ ಕುರುಗೋಡು ಪೊಲೀಸರು ಬಂಧಿಸಿದ್ದಾರೆ.

ಎರಡು ಸೀಕ್ರೆಟ್ ಕೋಡ್‍ಗಳನ್ನ ಬಳಸಿ ಎಟಿಎಂನಲ್ಲಿ ಹಣ ದೋಚಲಾಗಿದೆ ಎನ್ನುವುದನ್ನು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಮೂವರು ಆರೋಪಿಗಳಿಂದ 8 ಲಕ್ಷದ 26 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ:

ATMನಲ್ಲಿ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದ ಮಧುಕರ ರೆಡ್ಡಿ ಹಿಡಿಯಲು ಪೊಲೀಸರು ಪಟ್ಟ ಕಷ್ಟ ಎಷ್ಟು ಗೊತ್ತಾ?

CCB ಪೊಲೀಸರ ಭರ್ಜರಿ ಬೇಟೆ; ಕುಖ್ಯಾತ ಮನೆಗಳ್ಳರ ಬಂಧನ, ಇವರ ಬಂಧನದ ಕಥೆ ರೋಚಕ..

(Ballari police arrested three thieves who theft in atm)

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?