AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಜಲಾಶಯದಿಂದ 1.10 ಲಕ್ಷ ಕ್ಯೂಸೆಕ್ ನೀರು ರಿಲೀಸ್: ಮತ್ತೊಮ್ಮೆ ಜಲಾವೃತವಾದ ಹಂಪಿ ಸ್ಮಾರಕಗಳು

ಕೆ.ಆರ್‌.ಎಸ್. ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟ ಹಿನ್ನೆಲೆ ನದಿ ಪಾತ್ರದಲ್ಲಿರುವ ಹಲವು ದೇವಾಲಯಗಳು ಮುಳುಗಡೆಯಾಗಿವೆ.

ತುಂಗಭದ್ರಾ ಜಲಾಶಯದಿಂದ 1.10 ಲಕ್ಷ ಕ್ಯೂಸೆಕ್ ನೀರು ರಿಲೀಸ್: ಮತ್ತೊಮ್ಮೆ ಜಲಾವೃತವಾದ ಹಂಪಿ ಸ್ಮಾರಕಗಳು
ತುಂಗಭದ್ರಾ ಡ್ಯಾಂನಿಂದ ಹೆಚ್ಚಿನ ನೀರು ಬಿಡುಗಡೆ ಹಿನ್ನೆಲೆ ದೇವಾಲಯಗಳು ಮುಳುಗಡೆಯಾಗಿರುವುದು.
TV9 Web
| Edited By: |

Updated on:Aug 08, 2022 | 9:31 AM

Share

ವಿಜಯನಗರ: ತುಂಗಭದ್ರಾ (Tungabhadra dam) ಜಲಾಶಯದಿಂದ ಮತ್ತೆ ನೀರು ಹೊರಕ್ಕೆ ಬಿಟ್ಟಿದ್ದು, ಜಲಾಶಯದಿಂದ 1 ಲಕ್ಷ 10ಸಾವಿರ ಕ್ಯೂಸೆಕ್ ನೀರನ್ನು ಟಿಬಿ ಬೋರ್ಡ್ ನದಿಗೆ ಹರಿಸಿದೆ. ಒಳ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ, ನದಿಗೆ ನೀರು ಹರಿಸಲಾಗುತ್ತಿದೆ. 20 ಗೇಟ್​ಗಳನ್ನು 2.50. ಅಡಿ ಎತ್ತರಿಸಿ, 10 ಗೇಟ್​ಗಳನ್ನು 1.50 ಅಡಿ ಎತ್ತರಿಸಿ ನದಿಗೆ ನೀರು ಬಿಡಲಾಗಿದ್ದ, ಮತ್ತೊಮ್ಮೆ ಹಂಪಿಯ ಹಲವು ಸ್ಮಾರಕಗಳು ಜಲಾವೃತವಾಗಿವೆ. ಪುರಂದರ ದಾಸರ ಮಂಟಪ, ಸಾಲು ಮಂಟಪ, ಧಾರ್ಮಿಕ ವಿಧಿವಿಧಾನಗಳ ಮಂಟಪ ಜಲಾವೃತವಾಗಿವೆ. ಕಂಪ್ಲಿ‌ ಮತ್ತು ಗಂಗಾನದಿ ಮಧ್ಯೆ ಇರೋ ಸೇತುವೆ ಜಲಾವೃತವಾಗಲು‌ ಕ್ಷಣಗಣನೆ ಶುರುವಾಗಿದೆ.

ಕೆ.ಆರ್‌.ಎಸ್. ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ಬಿಡುಗಡೆ

ಮಂಡ್ಯ: ಕೆ.ಆರ್‌.ಎಸ್. ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟ ಹಿನ್ನೆಲೆ ನದಿ ಪಾತ್ರದಲ್ಲಿರುವ ಹಲವು ದೇವಾಲಯಗಳು ಮುಳುಗಡೆಯಾಗಿವೆ. ಶ್ರೀರಂಗಪಟ್ಟಣದ ವೆಲ್ಲಸ್ಲಿ ಸೇತುವೆ ಬಳಿ ಇರುವ ಆಂಜನೇಯಸ್ವಾಮಿ ಹಾಗೂ ಈಶ್ವರನ ದೇವಾಲಯ ಮುಳುಗಡೆಯಾಗಿವೆ. ಮುಂಜಾಗ್ರತಾವಾಗಿ ಶ್ರೀರಂಗಪಟ್ಟಣದ ವೆಲ್ಲಸ್ಲಿ ಸೇತುವೆ ಮೇಲೆ ಬಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಾದ್ರೆ ಸೇತುವೆ ಮುಳುಗಡೆಯಾಗುವ ಆತಂಕ ಎದುರಾಗಲಿದೆ. ಒಂದು ಲಕ್ಷ ಕ್ಯೂಸೆಕ್ ನೀರು ಬಿಟ್ಟಿರುವ ಕಾರಣ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕೊಡಗಿನಲ್ಲಿ ಮತ್ತಷ್ಟು ಮಳೆಯಾದ್ರೆ ನದಿಗೆ ಮತ್ತಷ್ಟು ನೀರನ್ನು ಬಿಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಕೊಡಗಿನಲ್ಲಿ ಮಳೆ ಅಬ್ಬರ ಇಳಿಮುಖ

ಮಡಿಕೇರಿ: ಕೊಡಗಿನಲ್ಲಿ ಮಳೆ ಅಬ್ಬರ ಇಳಿಮುಖವಾಗಿದೆ. ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಹಿನ್ನೆಲೆ ಕುಶಾಲನಗರ ಸಾಯಿ ಬಡಾವಣೆಗೆ ಕಾವೇರಿ ನದಿ ನೀರು ನುಗ್ಗಿದೆ. ಬಡಾವಣೆ ರಸ್ತೆಗಳ ಮೇಲೆ ನದಿ ನೀರು ನಿಂತ್ತಿದ್ದು, ಮತ್ತೆ ಪ್ರವಾಹ ಪರಿಸ್ಥಿತಿ ಮರುಕಳಿಸುವ ಆತಂಕ ಎದುರಾಗಿದೆ. ರಾಜಕಾಲುವೆ, ಚರಂಡಿ ತುಂಬಿ ಬಡಾವಣೆ ರಸ್ತೆಯಲ್ಲೂ ನೀರು ಆವರಿಸಿದ್ದು, ನಿವಾಸಿಗಳು ನಿನ್ನೆಯೇ ಬಡಾವಣೆ ತೊರೆದಿದ್ದಾರೆ.

ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣ ಏರಿಕೆ

ಮೈಸೂರು: ಕೇರಳದ ವಯನಾಡು, ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು, ಜಿಲ್ಲೆಯ ಹೆಚ್​.ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಸ್ವಲ್ಪ ಏರಿಕೆಯಾಗಿದೆ. ಜಲಾಶಯದ ಇಂದಿನ ಒಳಹರಿವು 24,932 ಕ್ಯೂಸೆಕ್. ಜಲಾಶಯದ ಹೊರಹರಿವು 26,000 ಕ್ಯೂಸೆಕ್ ಇದೆ. 84 ಅಡಿ ಗರಿಷ್ಠ ಸಾಮರ್ಥ್ಯದ ಕಬಿನಿ ಜಲಾಶಯ, ಇಂದಿನ ನೀರಿನ ಮಟ್ಟ 82.94 ಅಡಿಯಾಗಿದೆ.

ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಕಬಿನಿ ಜಲಾಶಯ ಹೊಂದಿದ್ದು, ಜಲಾಶಯದಲ್ಲಿ ಇಂದು 18.82 ಟಿಎಂಸಿ ನೀರು ಹೊಂದಿದೆ. 100 ಎಂ.ಎಂ ಮಳೆ ಪ್ರಮಾಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:45 am, Mon, 8 August 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ