ಬಳ್ಳಾರಿ: ಕೊರೊನಾ ಲಸಿಕೆ (Vaccine) ಪಡೆಯದ ಸುಮಾರು 120 ಜನ ಸೋಂಕಿತರು ಬಳ್ಳಾರಿ (Bellary) ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ ಅಂತ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸಾರೆಡ್ಡಿ ಮಾಹಿತಿ ನೀಡಿದ್ದಾರೆ. ಸದ್ಯ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ 10 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 10 ಜನರಲ್ಲಿ 8 ಜನರು ಆಕ್ಸಿಜನ್ (Oxygen) ಮೇಲೆ ಇದ್ದಾರೆ. ಇಬ್ಬರು ವೆಂಟಿಲೇಟರ್ ಮೇಲೆ ಇದ್ದಾರೆ. ವ್ಯಾಕ್ಸಿನೇಷನ್ ಮಾಡಿಸಿಕೊಳ್ಳದ ಇಬ್ಬರು ಕೊವಿಡ್ಗೆ ಬಲಿಯಾಗಿದ್ದಾರೆ ಅಂತ ತಿಳಿಸಿದರು.
ಲಸಿಕೆ ಹಾಕಿಕೊಂಡವರಲ್ಲಿ ಕೊರೊನಾ ಸೋಂಕಿನ ತೀವ್ರತೆ ಹೆಚ್ಚು ಕಾಡುತ್ತಿಲ್ಲ. ಐಸಿಯುವರಿಗೂ ಹೋಗುತ್ತಿಲ್ಲ ಎಂದು ತಿಳಿಸಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸಾರೆಡ್ಡಿ, ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿದರು.
ಇಂಜಿನಿಯರಿಂಗ್ ಕಾಲೇಜಿನ 55 ವಿದ್ಯಾರ್ಥಿಗಳಿಗೆ ಕೊರೊನಾ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ 55 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಪ್ರಾಧ್ಯಾಪಕರು, ಸಿಬ್ಬಂದಿ ಸೇರಿದಂತೆ 65 ಜನರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸಾಮೂಹಿಕವಾಗಿ ಸುಮಾರು 700 ವಿದ್ಯಾರ್ಥಿಗಳಿಗೆ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗಿತ್ತು. ಸೋಂಕು ದೃಢಪಟ್ಟ ವಿದ್ಯಾರ್ಥಿಗಳನ್ನ ಸಾರಂಗಿ ಗ್ರಾಮದ ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದ್ದು, ಕೆಲ ವಿದ್ಯಾರ್ಥಿಗಳಿಗೆ ಹೋಮ್ ಐಸೊಲೇಷನ್ ಆಗುವಂತೆ ಸೂಚನೆ ನೀಡಲಾಗಿದೆ.
ಕೊಪ್ಪಳ ವಿದ್ಯಾರ್ಥಿಗಳಿಗೆ ಕೊರೊನಾ ದೃಢ
ಕೊಪ್ಪಳ ಜಿಲ್ಲೆಯಲ್ಲಿ ನಿನ್ನೆ (ಜ.21) 73 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. 6 ಶಿಕ್ಷಕರು, ಶಾಲಾ ಅಡುಗೆ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಇದೆ. ಕೊರೊನಾ ಹಿನ್ನೆಲೆ 9 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಜನವರಿ 26ರವರೆಗೆ ಕೊಪ್ಪಳ ಜಿಲ್ಲೆಯ 9 ಶಾಲೆಗಳಿಗೆ ರಜೆ ನೀಡಲಾಗಿದೆ.
ಇದನ್ನೂ ಓದಿ
Published On - 9:33 am, Sat, 22 January 22