ಡಿವೈಡರ್​ಗೆ ಕಾರು ಡಿಕ್ಕಿ; ಅಯ್ಯಪ್ಪ ಮಾಲಾಧಾರಿಗಳಿಬ್ಬರ ಸಾವು, ಮೂವರಿಗೆ ಗಂಭೀರ ಗಾಯ

ಗದಗ ಜಿಲ್ಲೆಯಿಂದ ಕೇರಳಕ್ಕೆ ಹೋಗುತ್ತಿದ್ದ ಐಯಪ್ಪಸ್ವಾಮಿ ಮಾಲಾಧಾರಿಗಳ ವಾಹನ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ NH 50 ರಸ್ತೆಯಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಇಬ್ಬರು ಮೃತಪಟ್ಟಿದ್ದು ಮೂವರಿಗೆ ಗಾಯಗಳಾಗಿವೆ.

ಡಿವೈಡರ್​ಗೆ ಕಾರು ಡಿಕ್ಕಿ; ಅಯ್ಯಪ್ಪ ಮಾಲಾಧಾರಿಗಳಿಬ್ಬರ ಸಾವು, ಮೂವರಿಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
Edited By: ಆಯೇಷಾ ಬಾನು

Updated on: Jan 09, 2024 | 10:53 AM

ಬಳ್ಳಾರಿ, ಜ.09: ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು (Ayyappa Devotees) ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ (Accident) ಚೆನ್ನುಪಾಟೀಲ(26), ಯುವರಾಜ(28) ಸ್ಥಳದಲ್ಲೇ ಮೃತಪಟ್ಟಿದ್ದಾರೆ (Death). ಇನ್ನು ಮಂಜು, ವೀರಣ್ಣ, ಚಿದಂಬರಂ ಎನ್ನುವವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗದಗ ಜಿಲ್ಲೆಯಿಂದ ಕೇರಳಕ್ಕೆ ಹೋಗುತ್ತಿದ್ದ ಐಯಪ್ಪಸ್ವಾಮಿ ಮಾಲಾಧಾರಿಗಳ ವಾಹನ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ NH 50 ರಸ್ತೆಯಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಇಬ್ಬರು ಮೃತಪಟ್ಟಿದ್ದು ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳು ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಖಾನಾಹೊಸಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡೆತ್ ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣು

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ತ್ಯಾಗರಾಜನಗರದಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕಾಲೇಜಿನಿಂದ ಬಂದ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ ಜಾನ್ಸಿ (17) ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್ ನೋಟ್ ನಲ್ಲಿ, ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ ಯೂ. ನಾನು‌ ಈ ಲೋಕವನ್ನು ಬಿಟ್ಟು ತೆರಳುತ್ತಿದ್ದೆನೆ. ಎಲ್ಲರೂ ಖುಷಿಯಾಗಿರಿ ಎಂದು ಬರೆದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಗೋವಾ ಹೋಟೆಲ್​ನಲ್ಲಿ ಮಗು ಹತ್ಯೆ ಮಾಡಿ ಸೂಟ್ ಕೇಸ್​ನಲ್ಲಿ ಶವ ರವಾನಿಸುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ ಅರೆಸ್ಟ್

ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ, ಸವಾರ ಬಲಿ

ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಮಿಣಜಗಿ ಬಳಿ ಘಟನೆ ನಡೆದಿದ್ದು, ಮಿಣಜಗಿ ಗ್ರಾಮದ ಶ್ರೀಧರ ಮಾದರ ಮೃತಪಟ್ಟ ಬೈಕ್ ಸವಾರ. ನಿನ್ನೆ ಕೆಲ್ಸ ಮುಗಿಸಿ ಮನೆಗೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ತಾಳಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us