Accident: ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ದಂಪತಿ ಸೇರಿದಂತೆ ಮಗು ಸ್ಥಳದಲ್ಲೇ ದುರ್ಮರಣ

ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ ಹಾಗೂ ಮಗು ದಿನೇಶ್ ದುರ್ಮರಣ ಹೊಂದಿದ್ದಾರೆ. ಹನಿ ಎಂಬ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Accident: ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ದಂಪತಿ ಸೇರಿದಂತೆ ಮಗು ಸ್ಥಳದಲ್ಲೇ ದುರ್ಮರಣ
ಸಾವನ್ನಪ್ಪಿದ ದಂಪತಿ ಮತ್ತು ಮಗು, ಡಿಕ್ಕಿ ಹೊಡೆದ ಲಾರಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 24, 2022 | 10:52 AM

ಬಳ್ಳಾರಿ: ಲಾರಿ ಡಿಕ್ಕಿಯಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕೌಲ್​ಬಜಾರ್ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ. ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ ಹಾಗೂ ಮಗು ದಿನೇಶ್ ದುರ್ಮರಣ ಹೊಂದಿದ್ದಾರೆ. ಹನಿ ಎಂಬ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಜಾತ್ರೆಯ ಬಂದೋಬಸ್ತ್​​​ಗೆ ತೆರಳಿದ್ದ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಸಾವು

ಗದಗ: ಜಾತ್ರೆಯ ಬಂದೋಬಸ್ತ್ ತೆರಳಿದ್ದ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಮಳಿಮಠ (48) ಮೃತ ಎಎಸ್ಐ. ಶ್ರಾವಣ ಮಾಸದ ಕಡೆ ಸೋಮವಾರ ಐತಿಹಾಸಿಕ ಹಾಲಗೊಂಡ ಬಸವೇಶ್ವರ ಜಾತ್ರಾಮಹೋತ್ಸವ ಇತ್ತು. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ತುಕಡಿ ಬಂದೋಬಸ್ತ್​​ಗೆ ತೆರಳಿತ್ತು. ಸುದ್ದಿ ತಿಳಿದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಪ್ರೀತಿ ನಾಟಕವಾಡಿ ಬೆದರಿಸಿ ಅತ್ಯಾಚಾರ?

ಹುಬ್ಬಳ್ಳಿ: ಪ್ರೀತಿಯ ನಾಟಕವಾಡಿ ಅಪ್ರಾಪ್ತಯನ್ನ ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಕಾರವಾರದ ಶ್ರೀನಿಧಿ ಅಲಿಯಾಸ್‌ ಓಂಕಾರ ಕೊಲ್ವೇಕರ ಎಂಬಾತನ ಬಂಧನ ಮಾಡಲಾಗಿದೆ. 17 ವರ್ಷದ ಅಪ್ರಾಪ್ತೆ ಜತೆ ಶ್ರೀನಿಧಿ ಪ್ರೀತಿಯ ನಾಟಕವಾಡಿ ಸಲುಗೆ ಬೆಳೆಸಿಕೊಂಡಿದ್ದ. ಪುಸಲಾಯಿಸಿ ಆಕೆ ಜತೆಗೆ ಆಲಿಂಗನದ ಫೋಟೋ ತೆಗೆದುಕೊಂಡಿದ್ದ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಹಗ್ ಮಾಡಿದ ಫೋಟೋ ಎಲ್ಲರಿಗೂ ಕಳುಹಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ಅಲ್ಲದೆ, ಆಕೆಯ ಪಾಲಕರಿಗೂ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಯುವತಿಯ ತಾಯಿ ದೂರು ನೀಡಿದ್ದಾರೆ. ಹುಬ್ಬಳ್ಳಿಯ ಗೋಕುಲ ರೋಡ್‌ ಠಾಣೆ ಇನ್‌ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ನೇತೃತ್ವದ ತಂಡ ಕಾರವಾರದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಮಾವನಿಂದ ಅತ್ಯಾಚಾರ ಯತ್ನ ಲೈಂಗಿಕ ಕಿರುಕುಳ ಆರೋಪ

ಮೈಸೂರು: ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಹುಣಸೂರು ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ ವಿಷಯ ತಿಳಿದರೂ ಪತಿ ಮೌನ ವಹಿಸಿದ್ದು, ಮಾವ ಹಾಗೂ ಪತಿ ವಿರುದ್ಧ ಜಿಲ್ಲೆಯ ಹುಣಸೂರು ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದಾಳೆ. ವರದಕ್ಷಿಣೆ ತರುವಂತೆ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಆರೋಪ ಮಾಡಲಾಗಿದ್ದು, ಮಾವ ಪದೇಪದೆ ಅತ್ಯಾಚಾರಕ್ಕೆ ಯತ್ನಿಸ್ತಿದ್ದಾಗಿ ಮಹಿಳೆ ಆರೋಪ ಮಾಡಲಾಗಿದೆ. ಮಹಿಳೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಿನ್ನೆಲೆ ಕೇಸ್​ ದಾಖಲು ಮಾಡಿದ್ದು, ಸೆಕ್ಷನ್ 498A, 354, 504, 323, 149 ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಪತಿ, ಮಾವ ಸೇರಿ 8 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:37 am, Wed, 24 August 22

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್