ಬಳ್ಳಾರಿ: ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕೌಲ್ಬಜಾರ್ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ. ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ ಹಾಗೂ ಮಗು ದಿನೇಶ್ ದುರ್ಮರಣ ಹೊಂದಿದ್ದಾರೆ. ಹನಿ ಎಂಬ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
ಜಾತ್ರೆಯ ಬಂದೋಬಸ್ತ್ಗೆ ತೆರಳಿದ್ದ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಸಾವು
ಗದಗ: ಜಾತ್ರೆಯ ಬಂದೋಬಸ್ತ್ ತೆರಳಿದ್ದ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಮಳಿಮಠ (48) ಮೃತ ಎಎಸ್ಐ. ಶ್ರಾವಣ ಮಾಸದ ಕಡೆ ಸೋಮವಾರ ಐತಿಹಾಸಿಕ ಹಾಲಗೊಂಡ ಬಸವೇಶ್ವರ ಜಾತ್ರಾಮಹೋತ್ಸವ ಇತ್ತು. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ತುಕಡಿ ಬಂದೋಬಸ್ತ್ಗೆ ತೆರಳಿತ್ತು. ಸುದ್ದಿ ತಿಳಿದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಪ್ರೀತಿ ನಾಟಕವಾಡಿ ಬೆದರಿಸಿ ಅತ್ಯಾಚಾರ?
ಹುಬ್ಬಳ್ಳಿ: ಪ್ರೀತಿಯ ನಾಟಕವಾಡಿ ಅಪ್ರಾಪ್ತಯನ್ನ ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಕಾರವಾರದ ಶ್ರೀನಿಧಿ ಅಲಿಯಾಸ್ ಓಂಕಾರ ಕೊಲ್ವೇಕರ ಎಂಬಾತನ ಬಂಧನ ಮಾಡಲಾಗಿದೆ. 17 ವರ್ಷದ ಅಪ್ರಾಪ್ತೆ ಜತೆ ಶ್ರೀನಿಧಿ ಪ್ರೀತಿಯ ನಾಟಕವಾಡಿ ಸಲುಗೆ ಬೆಳೆಸಿಕೊಂಡಿದ್ದ. ಪುಸಲಾಯಿಸಿ ಆಕೆ ಜತೆಗೆ ಆಲಿಂಗನದ ಫೋಟೋ ತೆಗೆದುಕೊಂಡಿದ್ದ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಹಗ್ ಮಾಡಿದ ಫೋಟೋ ಎಲ್ಲರಿಗೂ ಕಳುಹಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ಅಲ್ಲದೆ, ಆಕೆಯ ಪಾಲಕರಿಗೂ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಯುವತಿಯ ತಾಯಿ ದೂರು ನೀಡಿದ್ದಾರೆ. ಹುಬ್ಬಳ್ಳಿಯ ಗೋಕುಲ ರೋಡ್ ಠಾಣೆ ಇನ್‌ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ನೇತೃತ್ವದ ತಂಡ ಕಾರವಾರದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಮಾವನಿಂದ ಅತ್ಯಾಚಾರ ಯತ್ನ ಲೈಂಗಿಕ ಕಿರುಕುಳ ಆರೋಪ
ಮೈಸೂರು: ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಹುಣಸೂರು ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ ವಿಷಯ ತಿಳಿದರೂ ಪತಿ ಮೌನ ವಹಿಸಿದ್ದು, ಮಾವ ಹಾಗೂ ಪತಿ ವಿರುದ್ಧ ಜಿಲ್ಲೆಯ ಹುಣಸೂರು ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದಾಳೆ. ವರದಕ್ಷಿಣೆ ತರುವಂತೆ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಆರೋಪ ಮಾಡಲಾಗಿದ್ದು, ಮಾವ ಪದೇಪದೆ ಅತ್ಯಾಚಾರಕ್ಕೆ ಯತ್ನಿಸ್ತಿದ್ದಾಗಿ ಮಹಿಳೆ ಆರೋಪ ಮಾಡಲಾಗಿದೆ. ಮಹಿಳೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಿನ್ನೆಲೆ ಕೇಸ್ ದಾಖಲು ಮಾಡಿದ್ದು, ಸೆಕ್ಷನ್ 498A, 354, 504, 323, 149 ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಪತಿ, ಮಾವ ಸೇರಿ 8 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:37 am, Wed, 24 August 22