ಬೊಮ್ಮಾಯಿ ಭಾಷಣಕ್ಕೆ ಅಡ್ಡಿ: ಸಂಶೋಧನಾ ವಿದ್ಯಾರ್ಥಿಯ ನೋಂದಣಿ ರದ್ದುಗೊಳಿಸ್ತೇವೆ ಎಂದು ವಿಶ್ವವಿದ್ಯಾಲಯದಿಂದ ನೋಟಿಸ್

Basavaraj Bommai Speech: ವಿಶ್ವವಿದ್ಯಾಲಯಕ್ಕೆ ಅನುದಾನ, ವಿದ್ಯಾರ್ಥಿಗಳಿಗೆ ಅನುದಾನ ಕೋರಿ ಸದರಿ ವಿದ್ಯಾರ್ಥಿ ದೊಡ್ಡಬಸಪ್ಪ ಮನವಿ ಮಾಡಿದ್ದ. ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಭಾಷಣಕ್ಕೆ ಅಡ್ಡಿಪಡಿಸಿದ್ದೀರಿ ಎಂದು ವಿದ್ಯಾರ್ಥಿ ದೊಡ್ಡಬಸಪ್ಪ ಮೇಲೆ ಆರೋಪ ಮಾಡಲಾಗಿದೆ. ಏಪ್ರಿಲ್ 16 ರಂದು ಸಿಎಂ ಬಸವರಾಜ ಬೊಮ್ಮಾಯಿ ವಿವಿಯ ಕಾರ್ಯಕ್ರಮದ ಅಂಗವಾಗಿ ಭಾಗಿಯಾಗಿದ್ದ ವೇಳೆ ಈ ಘಟನೆ ನಡೆದಿತ್ತು.

ಬೊಮ್ಮಾಯಿ ಭಾಷಣಕ್ಕೆ ಅಡ್ಡಿ: ಸಂಶೋಧನಾ ವಿದ್ಯಾರ್ಥಿಯ ನೋಂದಣಿ ರದ್ದುಗೊಳಿಸ್ತೇವೆ ಎಂದು ವಿಶ್ವವಿದ್ಯಾಲಯದಿಂದ ನೋಟಿಸ್
ಸಿಎಂ ಬೊಮ್ಮಾಯಿ ಭಾಷಣಕ್ಕೆ ಅಡ್ಡಿ: ಸಂಶೋಧನಾ ವಿದ್ಯಾರ್ಥಿಯ ನೊಂದಣಿ ರದ್ದುಗೊಳಿಸ್ತೇವೆ ಎಂದು ವಿಶ್ವವಿದ್ಯಾಲಯದಿಂದ ನೋಟಿಸ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Apr 19, 2022 | 2:11 PM

ವಿಜಯನಗರ: ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾಷಣಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಸಂಶೋಧನಾ ವಿದ್ಯಾರ್ಥಿಯ ನೊಂದಣಿ ರದ್ದುಗೊಳಿಸುತ್ತೇವೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯವು (Hampi Kannada University) ತನ್ನ ಸಂಶೋಧನಾ ವಿದ್ಯಾರ್ಥಿಗೆ ನೋಟಿಸ್ (research student) ಜಾರಿಗೊಳಿಸಿದೆ. ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ವಿದ್ಯಾರ್ಥಿ ಎ.ಕೆ. ದೊಡ್ಡಬಸಪ್ಪ ಸಿಎಂ‌ ಬೊಮ್ಮಾಯಿ ಭಾಷಣಕ್ಕೆ (CM Basavaraj Bommai speech) ಅಡ್ಡಿಪಡಿಸಿದ ಆರೋಪಕ್ಕೆ ತುತ್ತಾದವರು. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಸದರಿ ವಿದ್ಯಾರ್ಥಿಯ ನೋಂದಣಿ ರದ್ದುಗೊಳಿಸುವ ಸಂಬಂಧ ನೋಟಿಸ್ ಜಾರಿ ಮಾಡಲಾಗಿದೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ವಿದ್ಯಾರ್ಥಿ ದೊಡ್ಡಬಸಪ್ಪ ನೋಂದಣಿ ರದ್ದುಗೊಳಿಸಿ, ವಿಶ್ವವಿದ್ಯಾಲಯದಿಂದ ಅವರನ್ನು ಬಿಡುಗಡೆ ಮಾಡುವಂತೆ ಪತ್ರ ನೀಡಿದೆ. ಕುಲಸಚಿವ ಡಾ. ಸುಬ್ಬಣ್ಣ ರೈ ಅವರಿಂದ ವಿದ್ಯಾರ್ಥಿಗೆ ಪತ್ರ ರವಾನೆಯಾಗಿದೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘಟನೆ ಕಟ್ಟಿಕೊಂಡು ವಾತಾವರಣ ಕಲುಷಿತಗೊಳಿಸುವ ಕೆಲಸ ಮಾಡಿದ್ದೀರಿ. ವಿಶ್ವವಿದ್ಯಾಲಯದ ನುಡಿಹಬ್ಬದಲ್ಲಿ ರಾಜ್ಯಪಾಲರಿಗೆ ಹಲವು ಬೇಡಿಕೆಗಳ ಕುರಿತು ಮನವಿ ಮಾಡಿದ್ದೀರಿ ಎಂದು ವಿದ್ಯಾರ್ಥಿ ದೊಡ್ಡಬಸಪ್ಪಗೆ ನೋಟಿಸ್ ನೀಡಲಾಗಿದೆ.

ವಿಶ್ವವಿದ್ಯಾಲಯಕ್ಕೆ ಅನುದಾನ, ವಿದ್ಯಾರ್ಥಿಗಳಿಗೆ ಅನುದಾನ ಕೋರಿ ಸದರಿ ವಿದ್ಯಾರ್ಥಿ ದೊಡ್ಡಬಸಪ್ಪ ಮನವಿ ಮಾಡಿದ್ದ. ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಭಾಷಣಕ್ಕೆ ಅಡ್ಡಿಪಡಿಸಿದ್ದೀರಿ ಎಂದು ವಿದ್ಯಾರ್ಥಿ ದೊಡ್ಡಬಸಪ್ಪ ಮೇಲೆ ಆರೋಪ ಮಾಡಲಾಗಿದೆ. ಏಪ್ರಿಲ್ 16 ರಂದು ಸಿಎಂ ಬಸವರಾಜ ಬೊಮ್ಮಾಯಿ ವಿವಿಯ ಕಾರ್ಯಕ್ರಮದ ಅಂಗವಾಗಿ ಭಾಗಿಯಾಗಿದ್ದ ವೇಳೆ ಈ ಘಟನೆ ನಡೆದಿತ್ತು. ಈ ವೇಳೆ ಭಾಷಣಕ್ಕೆ ಅಡ್ಡಿಪಡಿಸಲಾಗಿದೆ ಎಂದು ವಿವಿ ಆಡಳಿತ ಮಂಡಳಿ ಆರೋಪ ಮಾಡಿದೆ. ಮೂರು ದಿನದೊಳಗೆ ಸಮಜಾಯಿಷಿ ನೀಡುವಂತೆ ಸೂಚನೆ ನೀಡಲಾಗಿದ್ದು, ಇಲ್ಲವಾದಲ್ಲಿ ವಿಶ್ವವಿದ್ಯಾಲಯದಿಂದ ಬಿಡುಗಡೆ ಮಾಡುವುದಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯ ನೋಟಿಸ್ ನೀಡಿದೆ.

ಇದೂ ಓದಿ: DK Shivakumar: ಡಿ.ಕೆ. ಶಿವಕುಮಾರ್​ಗೆ ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಇದೂ ಓದಿ: ಸಿಎಂ ಆದ ಬಳಿಕ ಮೊದಲ ಬಾರಿಗೆ ಶೃಂಗೇರಿಗೆ ಭೇಟಿ ಕೊಟ್ಟ ಸಿಎಂ ಬೊಮ್ಮಾಯಿ; ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಿಸುವುದಾಗಿ ಭರವಸೆ

ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ