ಡಿಪೋ ಅಧಿಕಾರಿಗಳ ನಿರ್ಲಕ್ಷ್ಯ: ಬಸ್ ರಿಪೇರಿ ಮಾಡುವ ವೇಳೆ ಕೆಎಸ್​ಆರ್​​ಟಿಸಿ ಮೆಕಾನಿಕ್ ದಾರುಣ ಸಾವು

ಬಸ್ ಕೆಳಗಡೆ ತುಂಡಾಗಿದ್ದ ಬುಷ್ ರಾಡ್ ಸರಿಪಡಿಸೋ ವೇಳೆ ಅವಘಡ ಸಂಭವಿಸಿದೆ. ರಾಡ್ ತುಂಡಾಗಿ ಕಾರ್ಮಿಕನ ಗಂಟಲಿಗೆ ಸಿಲುಕಿ ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ. ಮೃತ ಮಂಜುನಾಥ ಬಾದನಹಟ್ಟಿ ನಿವಾಸಿ.

ಡಿಪೋ ಅಧಿಕಾರಿಗಳ ನಿರ್ಲಕ್ಷ್ಯ: ಬಸ್ ರಿಪೇರಿ ಮಾಡುವ ವೇಳೆ ಕೆಎಸ್​ಆರ್​​ಟಿಸಿ ಮೆಕಾನಿಕ್ ದಾರುಣ ಸಾವು
ಅಧಿಕಾರಿಗಳ ನಿರ್ಲಕ್ಷ್ಯ: ಬಸ್ ರಿಪೇರಿ ಮಾಡುವ ವೇಳೆ ಕೆಎಸ್​ಆರ್​​ಟಿಸಿ ಮೆಕಾನಿಕ್ ದಾರುಣ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 21, 2022 | 3:01 PM

ಬಳ್ಳಾರಿ: ಇಲ್ಲಿನ ಕುರುಗೋಡು KSTRC ಡಿಪೋದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು ಮೆಕಾನಿಕ್ ದಾರುಣವಾಗಿ ಮೃತಪಟ್ಟಿದ್ದಾರೆ. ಇದಕ್ಕೆ ಡಿಪೋ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ಮೆಕಾನಿಕ್ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಡಿಪೋದಲ್ಲಿ ಬಸ್ ರಿಪೇರಿ ಮಾಡುವ ವೇಳೆ ಸಂಭವಿಸಿದ ಅವಘಡದಲ್ಲಿ KSTRC ಮೆಕಾನಿಕ್ ಟಿ ಮಂಜುನಾಥ ದರುಂತ ಅಂತ್ಯ ಕಂಡಿದ್ದಾರೆ.

ಬಸ್ ಕೆಳಗಡೆ ತುಂಡಾಗಿದ್ದ ಬುಷ್ ರಾಡ್ ಸರಿಪಡಿಸೋ ವೇಳೆ ಅವಘಡ ಸಂಭವಿಸಿದೆ. ರಾಡ್ ತುಂಡಾಗಿ ಕಾರ್ಮಿಕನ ಗಂಟಲಿಗೆ ಸಿಲುಕಿ ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ. ಮೃತ ಮಂಜುನಾಥ ಬಾದನಹಟ್ಟಿ ನಿವಾಸಿ. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ರ್ಯಾಂಪ್ ವ್ಯವಸ್ಥೆ ಕಲ್ಪಿಸದೇ ಮೆಕಾನಿಕ್ ಗೆ ರಿಪೇರಿ ಮಾಡಲು ಹೇಳಿದ್ದರಿಂದ ಈ ದುರಂತ ಸಂಭವಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೀಕೆಂಡ್​ ಶಾಪಿಂಗ್: ಬ್ರಿಗೇಡ್ ರಸ್ತೆಯಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿಂದ ಜಿಗಿದು ಯುವಕ-ಯುವತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಶನಿವಾರ ವೀಕೆಂಡ್ ವೇಳೆ​ ಶಾಪಿಂಗ್ ಗೆ ಬಂದಿದ್ದ ಯುವಕ-ಯುವತಿ ಸಾರ್ವಜನಿಕರೆದುರೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬ್ರಿಗೇಡ್ ರಸ್ತೆಯ ಶಾಂಪಿಂಗ್ ಕಾಂಪ್ಲೆಕ್ಸ್ ನಿಂದ ಜಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಯುವತಿಯ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಆಕೆಯನ್ನು ಸ್ಥಳೀಯ ಕಬ್ಬನ್ ಪಾರ್ಕ್ ಪೊಲೀಸರು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕೋಡಿ: ಕುಡಿದ ಅಮಲಿನಲ್ಲಿ ಬಾವಿಗೆ ಬಿದ್ದು ಇಹಲೋಕ ತ್ಯಜಿಸಿದ ಯುವಕ

ಚಿಕ್ಕೋಡಿ: ಕುಡಿದ ಅಮಲಿನಲ್ಲಿ ಬಾವಿಗೆ ಬಿದ್ದು ಯುವಕನೊಬ್ಬ ಇಹಲೋಕ ತ್ಯಜಿಸಿದ್ದಾರೆ. ಸಾಗರ ಹೆರವಾಡೆ (23) ಮೃತಪಟ್ಟವ. ಈತ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದ ನಿವಾಸಿ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಗ್ರಾಮದ ಹೊರವಲಯದ ಬಾವಿಯಲ್ಲಿ ಬಿದ್ದು ಸಾವಿಗೀಡಾಗಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಈತ ಕೃಷ್ಣಾ ಕಿತ್ತೂರ ಗ್ರಾಮದಲ್ಲಿ ಜರುಗುತ್ತಿದ್ದ ಲಕ್ಷ್ಮೀ ಜಾತ್ರೆಗೆ ಆಗಮಿಸಿದ್ದ. ಕುಡಿದ ಅಮಲಿನಲ್ಲಿ ಈತ ಬಾವಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಈತನ ಜೇಬಿನಲ್ಲಿ ತಂಬಾಕು, ಮಾವಾ ಸಿಕ್ಕಿದೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಡಿವೈಡರ್ ಗೆ ಡಿಕ್ಕಿ ಹೊಡೆದು ಸಿಮೆಂಟ್ ಲಾರಿ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಿಮೆಂಟ್ ಲಾರಿ ಪಲ್ಟಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಲ್ಲೇನಹಳ್ಳಿ ಬಳಿ ನಡೆದಿದೆ. ಅದೃಷ್ಟವಶಾತ್ ಪ್ರಾಣಪಾಯದಿಂದ ಚಾಲಕ ಪಾರಾಗಿದ್ದಾನೆ. ಸಿಮೆಂಟ್ ಲಾರಿ ಮಧುಗಿರಿಯಿಂದ ಕೊಡಿಗೇನಹಳ್ಳಿ ಕಡೆಗೆ ತೆರಳುತ್ತಿತ್ತು. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Also Read:  Common Superstitions: ನದಿಯಲ್ಲಿ ನಾಣ್ಯ ಹಾಕುವುದು, ಬಾಗಿಲಿಗೆ ನಿಂಬೆಕಾಯಿ- ಮೆಣಸಿನಕಾಯಿ ಕಟ್ಟುವುದು ಏಕೆ ಗೊತ್ತಾ!?

Also Read: Health Tips: ರಾತ್ರಿಯ ವೇಳೆ ಮರೆತು ಕೂಡ ಈ ಹಣ್ಣುಗಳನ್ನು ಸೇವಿಸಬೇಡಿ: ಅವು ಯಾವುವು? ಯಾಕೆ? ತಿಳಿಯೋಣ

Published On - 1:53 pm, Sat, 21 May 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್