Vijayanagara Rains: ವಿಜಯನಗರ ಜಿಲ್ಲೆಗೆ ತಕ್ಷಣ ಅಧಿಕಾರಿಗಳನ್ನು ನೇಮಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

Basavaraj Bommai: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಯಲ್ಲಿ ಮಳೆ ಸುರಿದಲ್ಲಿ ಮಾಹಿತಿಯನ್ನು ಕಲೆಹಾಕುವಲ್ಲಿ ಅಧಿಕಾರಿಗಳ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ತುರ್ತಾಗಿ ಅಗತ್ಯವಿರುವ ಇಲಾಖೆಗಳ ಅಧಿಕಾರಿಗಳನ್ನು ಒದಗಿಸುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

Vijayanagara Rains: ವಿಜಯನಗರ ಜಿಲ್ಲೆಗೆ ತಕ್ಷಣ ಅಧಿಕಾರಿಗಳನ್ನು ನೇಮಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
ನೂತನ ವಿಜಯನಗರ ಜಿಲ್ಲೆಗೆ ತಕ್ಷಣ ಅಧಿಕಾರಿಗಳಿಗೆ ಒದಗಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 21, 2022 | 9:01 PM

ಹೊಸಪೇಟೆ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಯಲ್ಲಿ ಮಳೆ ಸುರಿದಲ್ಲಿ (Vijayanagara Rains) ಮಾಹಿತಿಯನ್ನು ಕಲೆಹಾಕುವಲ್ಲಿ ಅಧಿಕಾರಿಗಳ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ತುರ್ತಾಗಿ ಅಗತ್ಯವಿರುವ ಇಲಾಖೆಗಳ ಅಧಿಕಾರಿಗಳನ್ನು ಒದಗಿಸುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು (CM Basavaraj Bommai) ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳು,ಸಚಿವರೊಂದಿಗೆ ಮುಖ್ಯಮಂತ್ರಿಗಳು ಶನಿವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದಸಿಂಗ್ ಅವರ ಮನವಿಗೆ ಸ್ಪಂದಿಸಿದ ಸಿಎಂ ಅವರು ನೂತನ ಜಿಲ್ಲೆಗೆ ಸಂಬಂಧಿಸಿದ ಕೂಡಲೇ ಎಲ್ಲ ಪೋಸ್ಟಿಂಗ್ ಕ್ಲಿಯರ್ ಮಾಡಿಕೊಡುವಂತೆ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

ಸಚಿವ ಆನಂದಸಿಂಗ್ ಅವರು ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಸದ್ಯ ಯಾವುದೇ ರೀತಿಯ ಸಮಸ್ಯೆಗಳು ಇದುವರೆಗೆ ಉದ್ಭವಿಸಿಲ್ಲ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಯಲ್ಲಿ ಮಳೆಹೆಚ್ಚಾಗಿ ಹಾನಿಯಾದರೇ ಸಮೀಕ್ಷೆ ನಡೆಸುವಲ್ಲಿ ಹಾಗೂ ಮಾಹಿತಿ ಕಲೆಹಾಕುವಲ್ಲಿ ತೋಟಗಾರಿಕೆ, ಅಗ್ನಿಶಾಮಕದಳ, ಸಮಾಜಕಲ್ಯಾಣ ಇಲಾಖೆಗಳ ಅಧಿಕಾರಿಗಳ ಕೊರತೆ ಇದ್ದು,ಕೂಡಲೇ ಒದಗಿಸುವಂತೆ ಅವರು ಮನವಿ ಮಾಡಿದರು.

ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಕೂಡಲೇ ಅಗತ್ಯ ಮುಂಜಗ್ರತಾಕ್ರಮಗಳನ್ನು ಕೈಗೊಳ್ಳಬೇಕು. ಒಂದೊಂದು ಜಿಲ್ಲೆಯಲ್ಲಿ ಒಂದೊಂದು ರೀತಿಯ ಸಮಸ್ಯೆ ಇದ್ದು,ಅದನ್ನು ಗುರುತಿಸಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.

ಪ್ರತಿ ವರ್ಷ ಅತಿವೃಷ್ಟಿ ಉಂಟಾಗುವ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಸಮಸ್ಯೆಗಳಾಗುವುದಕ್ಕಿಂತ ಮುಂಚೆಯೇ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾಧಿಕಾರಿಗಳು ಕೂಡಲೇ ಫೀಲ್ಡ್‍ಗೆ ತೆರಳಿ ಪರಿಶೀಲನೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.

ಕೆಳಹಂತದ ಅಧಿಕಾರಿಗಳು ನೀಡಿದ ಮಾಹಿತಿಯನ್ನೇ ವಿಸಿಯಲ್ಲಿ ಓದಿ ಹೇಳಿದರೇ ಮುಗಿಯಿತು; ಇದುವೇ ನಮ್ಮ ಜವಾಬ್ದಾರಿ ಎನ್ನುವ ಮನೋಭಾವದಿಂದ ಹೊರಬನ್ನಿ. ಹಾನಿಗೊಳಗಾದ ಪ್ರದೇಶಗಳಿಗೆ ಅಗತ್ಯಇರುವ ಇಲಾಖೆಗಳ ಅಧಿಕಾರಿಗಳ ಜೊತೆಗೂಡಿ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು ಎಂದರು.

ಹೆಚ್ಚಿನ ಮಳೆಹಾನಿಯಾಗಿರುವ ಜಿಲ್ಲೆಗಳಲ್ಲಿ ಅಧಿಕಾರಿಗಳಿಗೆ ಯಾವುದೇ ಕಾರಣಕ್ಕೂ ರಜೆ ನೀಡದಂತೆ ಸೂಚನೆ ನೀಡಿದ ಸಿಎಂ ಬೊಮ್ಮಾಯಿ ಅವರು ತಾವು ಕೂಡ ರಜೆ ಮಾಡದೇ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸೂಚನೆಗಳನ್ನು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿದರು. ನಿಯಾಮನುಸಾರ ಪರಿಹಾರಗಳನ್ನು ಒದಗಿಸುವಂತೆಯೂ ಅವರು ಸೂಚನೆ ನೀಡಿದರು. ವಿಜಯನಗರ ಜಿಲ್ಲೆಯಲ್ಲಿ ಕಳೆದ ಏಪ್ರಿಲ್‍ನಿಂದ ಇಲ್ಲಿಯವರೆಗೆ 4 ಜನರು ಸಾವನ್ನಪ್ಪಿದ್ದು, 9 ಪ್ರಾಣಿಗಳು ಮತ್ತು 37 ಕುರಿಗಳು ಸಾವನ್ನಪ್ಪಿವೆ. 503 ಮನೆಗಳಿಗೆ ಹಾಗೂ 1 ಗುಡಿಸಿಲಿಗೆ ಹಾನಿಯಾಗಿದೆ.

ಕೃಷಿ ಮತ್ತು ತೋಟಗಾರಿಕೆ ಬೆಳೆ ಸೇರಿ 979 ಹೆಕ್ಟೇರ್ ಬೆಳೆಹಾನಿಯಾಗಿದೆ. 309 ವಿದ್ಯುತ್ ಕಂಬಗಳು ಹಾಗೂ 35 ಟ್ರಾನ್ಸಫಾರ್ಮರ್‍ಗಳು ಹಾನಿಯಾಗಿವೆ. 277 ಅಂಗನವಾಡಿ ಕೇಂದ್ರಗಳು ಹಾಗೂ 322 ಶಾಲಾ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಜಿಪಂ ಸಿಇಒ ಭೋಯರ್ ಹರ್ಷಲ್ ನಾರಾಯಣರಾವ್ ಇದ್ದರು.

ಮಳೆಯಿಂದ ಬಳ್ಳಾರಿ ಜಿಲ್ಲೆಯಲ್ಲಿ 2.39 ಕೋಟಿ ರೂಪಾಯಿ ಹಾನಿ – 3 ದಿನದೊಳಗೆ ಪರಿಹಾರ ವಿತರಿಸಲು ಡಿಸಿ ಸೂಚನೆ!

ಬಳ್ಳಾರಿ ಜಿಲ್ಲೆಯಲ್ಲಿ ಏಪ್ರಿಲ್ ಮೊದಲ ವಾರದಿಂದ ಇಲ್ಲಿಯವರೆಗೆ ಸುರಿದ ಮಳೆಯಿಂದಾಗಿ 2.39 ಕೋಟಿ ರೂ.ಗಳಷ್ಟು ಹಾನಿಯಾಗಿದೆ. ಬೆಳೆಹಾನಿ, ವಸತಿ ಹಾನಿ ಮತ್ತು ಜನ-ಜಾನುವಾರುಗಳ ಹಾನಿಯಾಗಿದ್ದಕ್ಕೆ ಪರಿಹಾರ ವಿತರಿಸಲಾಗಿದೆ. ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಹಾನಿಯಾದ ಬೆಳೆ,ವಸತಿ ಮತ್ತು ಜಾನುವಾರುಗಳಿಗೆ ನಿಯಮಾನುಸಾರ ಪರಿಹಾರವನ್ನು 3 ದಿನದೊಳಗೆ ವಿತರಿಸುವಂತೆ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಮುಖ್ಯಮಂತ್ರಿಗಳ ಸಭೆಯ ನಂತರ ನಡೆದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಇಬ್ಬರು ಸಾವನ್ನಪ್ಪಿದ್ದು ಅವರಿಗೆ ನಿಯಮಾನುಸಾರ ತಲಾ 5ಲಕ್ಷ ರೂ.ಗಳ ಪರಿಹಾರ ವಿತರಿಸಲಾಗಿದೆ. 2 ದೊಡ್ಡ ಮತ್ತು 12 ಸಣ್ಣ ಜಾನುವಾರುಗಳು ಸಾವನ್ನಪ್ಪಿವೆ. 161 ಮನೆಗಳಿಗೆ ಹಾನಿಯಾಗಿದೆ. 244.1 ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆಹಾನಿಯಾಗಿದೆ. 371 ವಿದ್ಯುತ್ ಕಂಬಗಳು ಹಾನಿಯಾಗಿದ್ದು, ಇದರ ಜೊತೆಗೆ 31 ವಿದ್ಯುತ್ ಟ್ರಾನ್ಸ್‍ಫಾರ್ಮರ್‍ಗಳು ಕೆಟ್ಟಿದ್ದು,ಒಟ್ಟು 2.39 ಕೋಟಿ ರೂ.ಗಳ ಹಾನಿ ಜಿಲ್ಲೆಯಲ್ಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಪಂ ಸಿಇಒ ಜೆ.ಲಿಂಗಮೂರ್ತಿ, ಎಸ್ಪಿ ಸೈದುಲು ಅಡಾವತ್, ಎಡಿಸಿ ಪಿ.ಎಸ್.ಮಂಜುನಾಥ,ಸಹಾಯಕ ಆಯುಕ್ತ ಡಾ.ಆಕಾಶ ಶಂಕರ್ ಸೇರಿದಂತೆ ಕೃಷಿ, ಜೆಸ್ಕಾಂ, ತೋಟಗಾರಿಕೆ,ಕಂದಾಯ,ಅಗ್ನಿಶಾಮಕದಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

– ವೀರಪ್ಪ ದಾನಿ

Published On - 9:00 pm, Sat, 21 May 22

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್