ವಿಜಯನಗರದಲ್ಲಿ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ, ಬೆಂಗಳೂರಿನಲ್ಲಿ ಖಾಸಗಿ ಫೈನಾನ್ಸ್​​ನ 7 ಕಾರ್​ಗಳಿಗೆ ಬೆಂಕಿ

ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದ 7 ಕಾರುಗಳಿಗೆ ಬೆಂಕಿ ಹತ್ತಿಕೊಂಡ ಘಟನೆ ಬೆಂಗಳೂರಿನ ಹೆಚ್‌ಬಿಆರ್ ಲೇಔಟ್‌ನಲ್ಲಿ ನಡೆದಿದೆ. ಅಯೋಧ್ಯಾ ಮೈದಾನದಲ್ಲಿ ನಿಲ್ಲಿಸಿದ್ದ ಕಾರುಗಳು ಬೆಂಕಿಗಾಹುತಿ ಆಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ವಿಜಯನಗರದಲ್ಲಿ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ, ಬೆಂಗಳೂರಿನಲ್ಲಿ ಖಾಸಗಿ ಫೈನಾನ್ಸ್​​ನ 7 ಕಾರ್​ಗಳಿಗೆ ಬೆಂಕಿ
7 ಕಾರ್​ಗಳಿಗೆ ಬೆಂಕಿ
Follow us
TV9 Web
| Updated By: ganapathi bhat

Updated on:Mar 11, 2022 | 1:35 PM

ವಿಜಯನಗರ: ವ್ಯಕ್ತಿಯೊಬ್ಬ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕೋರ್ಟ್‌ನಲ್ಲಿ ನಡೆದಿದೆ. ವಕೀಲ ಸ್ವರೂಪಾನಂದ ನಾಯಕ್ ಮೇಲೆ ಹಲ್ಲೆ ಮಾಡಲಾಗಿದೆ. ಮೋತಿಕಲ್ ತಾಂಡಾದ ಹನುಮಾನಾಯಕ್‌ ಎಂಬಾತನಿಂದ ಹಲ್ಲೆ ಯತ್ನ ನಡೆದಿದೆ. ವಕೀಲ ಸ್ವರೂಪಾನಂದ ನಾಯಕ್‌ಗೆ ಸಣ್ಣಪುಟ್ಟ ಗಾಯವಾಗಿದೆ. ಹಲ್ಲೆ ಘಟನೆ ಖಂಡಿಸಿ ವಕೀಲರಿಂದ ಪ್ರತಿಭಟನೆ ನಡೆಸಲಾಗಿದೆ.

ಕೂಡ್ಲಿಗಿ ಜೆಎಂಎಫ್​ಸಿ ನ್ಯಾಯಾಲಯದ ಆವರಣದಲ್ಲಿ ನ್ಯಾಯವಾದಿ ಸ್ವರೂಪಾನಂದ ನಾಯ್ಕ್ ಎಂಬವರಿಗೆ ಚಾಕು ಇರಿಯಲು ಯತ್ನಿಸಲಾಗಿದೆ. ನ್ಯಾಯಾಲಯದ ಆವರಣದಲ್ಲಿ ವಕೀಲರ ಮೇಲೆ ಹಲ್ಲೆ ಹಿನ್ನಲೆ ಆರೋಪಿ ಹನುಮಾನಾಯ್ಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಚಾಕು ಇರಿಯಲು ಯತ್ನಿಸಿದ ಆರೋಪಿ ವಿರುದ್ದ ಕಲಂ 452, 504, 506(2), 307 ರೀತ್ಯ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ಬಗ್ಗೆ ಕೂಡ್ಲಿಗಿ ಡಿವೈಎಸ್​​ಪಿ ನೇತೃತ್ವದಲ್ಲಿ ತನಿಖೆಗೆ ಎಸ್​ಪಿ ಆದೇಶ ನೀಡಿದ್ದಾರೆ. ವಿಜಯನಗರ ಜಿಲ್ಲೆ ಎಸ್​ಪಿ ಡಾ.ಕೆ ಅರುಣಕುಮಾರ್ ಆದೇಶ ನೀಡಿದ್ದಾರೆ.

ಗದಗ: ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪತಿ ಬಂಧನ

ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪತಿ ಬಂಧಿಸಲಾಗಿದೆ. ಇಜಾಜ್ ಶಿರೂರ ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಗದಗ ನಗರದ ಲಯನ್ ಸ್ಕೂಲ್ ಗ್ರೌಂಡ್ ಬಳಿ ಮಚ್ಚಿನಿಂದ ಅಟ್ಟಾಡಿಸಿ ದಾಳಿ ಮಾಡಿದ್ದ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಹೆಡೆಮುರಿ ಕಟ್ಟಿದ್ದಾರೆ. ಗದಗ ಮಹಿಳಾ ಪೊಲೀಸ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಪತಿ ಅಪೂರ್ವ ಎಂಬಾಕೆಯ ಮೇಲೆ ಮಚ್ಚಿನಿಂದ 23 ಬಾರಿ ಹಲ್ಲೆ ಮಾಡಿದ್ದ. ಡಿವೈಎಸ್ಪಿ ಶಿವಾನಂದ ನೇತೃತ್ವದಲ್ಲಿ ವಿಶೇಷ ತಂಡ ರಚನೆ‌ ಮಾಡಿ ಆರೋಪಿ ಬಂಧನ ಮಾಡಲಾಗಿದೆ. ಕೊಲೆ ಮಾಡುವ ಉದ್ದೇಶದಿಂದ ಭೀಕರವಾಗಿ ಹಲ್ಲೆ ಮಾಡಿದ್ದ. ಪ್ಲಾನ್ ಮಾಡಿ ಎರಡು ದಿನ ಕಾದು ಪತ್ನಿಯ ಚಲನವಲನ ನೋಡಿ ಅಟ್ಯಾಕ್ ಮಾಡಿದ್ದ. ವಿಚ್ಚೇದನಕ್ಕೆ ಅರ್ಜಿ ಹಾಕಿದಕ್ಕೆ ಕೊಲೆ ಮಾಡಲು ಯತ್ನಿಸಿದ್ದ ಎಂದು ಗದಗ ಎಸ್​ಪಿ ಶಿವಪ್ರಕಾಶ್ ದೇವರಾಜು ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದ 7 ಕಾರುಗಳಿಗೆ ಬೆಂಕಿ

ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದ 7 ಕಾರುಗಳಿಗೆ ಬೆಂಕಿ ಹತ್ತಿಕೊಂಡ ಘಟನೆ ಬೆಂಗಳೂರಿನ ಹೆಚ್‌ಬಿಆರ್ ಲೇಔಟ್‌ನಲ್ಲಿ ನಡೆದಿದೆ. ಅಯೋಧ್ಯಾ ಮೈದಾನದಲ್ಲಿ ನಿಲ್ಲಿಸಿದ್ದ ಕಾರುಗಳು ಬೆಂಕಿಗಾಹುತಿ ಆಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: Crime News: ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಯತ್ನ, ಪುಟ್ಟ ಮಗಳಿಗೂ ಕಿರುಕುಳ; ಆರೋಪಿ ಬಾಬು ಅರೆಸ್ಟ್

ಇದನ್ನೂ ಓದಿ: ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ; ಒಬ್ಬ ಆರೋಪಿ ಪೊಲೀಸರಿಗೆ ಶರಣು

Published On - 1:18 pm, Fri, 11 March 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್