ಕರ್ನಾಟಕದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

| Updated By: ಗಂಗಾಧರ​ ಬ. ಸಾಬೋಜಿ

Updated on: Jan 15, 2025 | 7:53 PM

ಬಳ್ಳಾರಿ ಜಿಲ್ಲೆಯ ತೋರಣಗಲ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ. ಬಾಲಕಿಗೆ ತೀವ್ರ ಗಾಯಗಳಾಗಿದ್ದು, ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿ ಇರುವ ಸಿಸಿಟಿವಿ ದೃಶ್ಯಗಳು ವೈರಲ್ ಆಗಿದೆ.

ಕರ್ನಾಟಕದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
ಕರ್ನಾಟಕದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
Follow us on

ಬಳ್ಳಾರಿ, ಜನವರಿ 15: ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನ (girl) ಪುಸುಲಾಯಿಸಿ ಕರೆದೊಯ್ದು ದುಷ್ಕರ್ಮಿಯಿಂದ ಅತ್ಯಾಚಾರ ಎಸಗಿರುವಂತಹ ಘಟನೆ ಜಿಲ್ಲೆಯ ತೋರಣಗಲ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಿದ್ದಾರೆ. ಸದ್ಯ ಆರೋಪಿ ಇರುವ ಸಿಸಿ ಟಿವಿ ವಿಡಿಯೋ ವೈರಲ್ ಆಗಿದೆ.

ಹತ್ತು ವರ್ಷದ ಹಿಂದೆ ಕೆಲಸ ಅರಸಿ ಬಂದು ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿಯ ಮಗುವಿನ ಮೇಲೆ ಅತ್ಯಾಚಾರವೆಸಗಲಾಗಿದೆ. ಲೈಂಗಿಕ ದಾಳಿಯಿಂದ ಮಗುವಿಗೆ ಆಂತರಿಕ ಗಾಯವಾಗಿ, ತೀವ್ರ ರಕ್ತಸ್ರಾವ ಉಂಟಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಬಾಲಕಿಯರ ಮೇಲೆ ಗ್ಯಾಂಗ್​​ ರೇಪ್​

ಕೂಡಲೇ ಮಗುವಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗಿದ್ದು, ಈ ವೇಳೆ ಅತ್ಯಾಚಾರ ನಡೆದಿರುವುದು ಧೃಡಪಟ್ಟಿದೆ. ಮಗುವಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ.

ಮಹಿಳೆಯರಿಂದ ಪ್ರತಿಭಟನೆ 

ಇನ್ನು ಪ್ರಕರಣ ಖಂಡಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಅಖಿಲ‌ ಭಾರತ‌ ಮಹಿಳಾ‌ ಸಾಂಸ್ಕೃತಿಕ ಸಂಘಟನೆಯಿಂದ ಪ್ರತಿಭಟನೆ ಮಾಡಲಾಗಿದೆ. ಆರೋಪಿಗೆ ತಕ್ಕ ಪಾಠ ಕಲಿಸುವಂತೆ ಡಿಸಿಗೆ ಮಹಿಳೆಯರು ಮನವಿ ಮಾಡಿದ್ದು, ಅತ್ಯಾಚಾರ ಪ್ರಕರಣ ತಡೆಗೆ ಸೂಕ್ತ ಕಾನೂನು ರೂಪಿಸುವಂತೆ ಆಗ್ರಹಿಸಿದ್ದಾರೆ.

ಬಿಮ್ಸ್ ಆಸ್ಪತ್ರೆಯ ಕಂಪ್ಯೂಟರ್ ಆಪರೇಟರ್​ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಅಧೀಕ್ಷಕ ಬಂಧನ

ಇನ್ನು ಇತ್ತೀಚೆಗೆ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀಕ್ಷಕ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ: ಮಗಳಿಗೆ ಸಂಕ್ರಾಂತಿ ಹಬ್ಬದ ಬುತ್ತಿ ಕೊಡಲು ಬಂದ ಅತ್ತೆಯನ್ನೇ ಕೊಂದ ಅಳಿಯ, ಕಾರಣವೇನು?

ಮಹಿಳೆಯ ಮೇಲೆ ಎರಡು ವರ್ಷಗಳಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅಧೀಕ್ಷಕ ವಿ.ಕೆ‌. ವೆಂಕಟೇಶ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿತ್ತು. ಸಂತ್ರಸ್ತೆಗೆ ಹೆದರಿಸಿ, ನಾನು ಹೇಳಿದಕ್ಕೆ ಸಹಕರಿಸಬೇಕು ಇಲ್ಲ ಅಂದ್ರೆ ನಿನ್ನ ಕೆಲಸದಿಂದ ತೆಗೆದು ಹಾಕುತ್ತೇನೆ ಅಂತಾ ಬೆದರಿಸಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಜೊತೆಗೆ ಮಹಿಳೆಯ ಜೊತೆಗೆದಿದ್ದ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹೆದರಿಸಿ ಪದೆ ಪದೆ ಲೈಂಗಿಕ ದೌರ್ಜನ್ಯ ಎಸಗಿ ಕಿರುಕುಳ ನೀಡುತ್ತಿದ್ದನಂತೆ. ಹೀಗಾಗಿ ಬೇಸತ್ತ ಮಹಿಳೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಿದ್ದರು. ಇನ್ನು ಪ್ರಕರಣ ಕೈಗೆತ್ತಿಕೊಂಡ ಪೋಲಿಸರು ಅಧಿಕ್ಷಕ ವಿ.ಕೆ.ವೆಂಕಟೇಶ ನನ್ನ ಅರೆಸ್ಟ್ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:51 pm, Wed, 15 January 25