AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತ ಸಾವು: ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು? ಇಲ್ಲಿದೆ ವಿವರ

ಬಳ್ಳಾರಿ ಅಕ್ಷರಶಃ ಬೂದಿ ಮುಚ್ಚಿದ ಕೆಂಡದಂತಾಗಿದೆ. ರೆಡ್ಡಿ ವರ್ಸಸ್ ರೆಡ್ಡಿ ನಡುವಿನ ಕಾಳಗಕ್ಕೆ, ಬಳ್ಳಾರಿಯಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಎರಡು ಬಣಗಳ ನಡುವೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಆರಂಭವಾದ ಭೀಕರ ಸಂಘರ್ಷ, ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಸಾವಿಗೆ ಕಾರಣವಾಗಿದೆ. ಹಾಗಾದರೆ ಬಳ್ಳಾರಿಯಲ್ಲೇನಾಯ್ತು? ಈಗ ಹೇಗಿದೆ ಪರಿಸ್ಥಿತಿ? ಮಾಹಿತಿ ಇಲ್ಲಿದೆ.

ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತ ಸಾವು: ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು? ಇಲ್ಲಿದೆ ವಿವರ
ಬಳ್ಳಾರಿಯ ಅವಂಬಾವಿಯಲ್ಲಿ ಬಿಗಿ ಬಂದೋಬಸ್ತ್
ವಿನಾಯಕ ಬಡಿಗೇರ್​
| Edited By: |

Updated on:Jan 02, 2026 | 7:10 AM

Share

ಬಳ್ಳಾರಿ, ಜನವರಿ 2: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ (Congress) ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ (Janardhana Reddy) ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಶಾಸಕಭರತ್‌ ರೆಡ್ಡಿ ಬೆಂಬಲಿಗರ ನಡುವೆ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ.

ಕಾಂಗ್ರೆಸ್ಸಿಗರು ಜನಾರ್ದನ ರೆಡ್ಡಿ ಬೆಂಬಲಿಗರ ವಿರುದ್ಧ ಬೊಟ್ಟು ಮಾಡುತ್ತಿದ್ದಾರೆ. ಇದೆಲ್ಲದರ ನಡುವೆ ಗಲಭೆ ನಿಯಂತ್ರಿಸಲು ಪೊಲೀಸರು ಕೂಡ ಏರ್​ ಫೈಯರ್ ಮಾಡಿದ್ದಾರೆ.

ಅಸಲಿಗೆ ಜನಾರ್ದನ ರೆಡ್ಡಿ ನಿವಾಸದ ಎದುರು ನಡೆದಿದ್ದೇನು?

ಶಾಸಕ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ನಿವಾಸದೆದುರು ಬ್ಯಾನರ್ ಕಟ್ಟುತ್ತಿದ್ದಂತೆ ಗಲಾಟೆಯಾಗಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಟ್ಟಿದ್ದ ಬ್ಯಾನರ್​ ಅನ್ನು ಬಿಜೆಪಿಗರು ಹರಿದು ಆಕ್ರೋಶ ಹೊರಹಾಕಿದ್ದಾರೆ. ವಿಷಯ ಗೊತ್ತಾದ ಕೂಡಲೇ ಸ್ಥಳಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಧಾವಿಸಿದ್ದಾರೆ. ಈ ವೇಳೆ ತಳ್ಳಾಟ ನೂಕಾಟ ಜೋರಾಗಿದೆ. ಗಲಾಟೆ ತೀವ್ರವಾಗುತ್ತಿದ್ದಂತೆ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್​ ರೆಡ್ಡಿ ಖಾಸಗಿ ಗನ್​​ ಮ್ಯಾನ್​​ಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸಂಘರ್ಷ ಜೋರಾಗುತ್ತಿದ್ದಂತೆಯೇ, ಎರಡೂ ಕಡೆಯ ಬೆಂಬಲಿಗರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಈ ವಿಚಾರ ಗೊತ್ತಾದ ಕೂಡಲೇ ಶಾಸಕ ನಾರಾ ಭರತ್ ರೆಡ್ಡಿ ಘಟನಾ ಸ್ಥಳಕ್ಕೆ ತೆರಳಲು ಸಿದ್ಧರಾಗಿದ್ದರು. ಈ ಮಾಹಿತಿ ತಿಳಿದ ಜನಾರ್ದನ ರೆಡ್ಡಿ ಬೆಂಬಲಿಗರು, ಕೈಯಲ್ಲಿ ದೊಣ್ಣೆ ಹಿಡಿದು ನಿಂತಿದ್ದರು.

ಪರಿಸ್ಥಿತಿ ಕೈ ಮೀರಿ ಹೋಗುತ್ತಿರುವುದನ್ನು ಗಮನಿಸಿದ ಪೊಲೀಸರು ಮೊದಲು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಲು ಯತ್ನಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗಲಭೆಯ ನಡುವೆ ಗುಂಡೊಂದು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬವರಿಗೆ ತಗುಲಿದ್ದು, ಗಾಯಗೊಂಡ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಾಸಕ ಭರತ್ ರೆಡ್ಡಿ ಬೆಂಬಲಿಗ, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅಸುನೀಗಿದ್ದಾರೆ.

ನನ್ನ ಹತ್ಯೆಗೆ ಸಂಚು: ಜನಾರ್ದನ ರೆಡ್ಡಿ ಆರೋಪ

ಘಟನೆ ವೇಳೆ ಸಿಡಿದ ಗುಂಡನ್ನು ಶಾಸಕ ಜನಾರ್ದನರೆಡ್ಡಿ ಪ್ರದರ್ಶಿಸಿದ್ದಾರೆ. ಇದು ನನ್ನ ಹತ್ಯೆಗೆ ನಡೆದ ಸಂಚು ಎಂದು ಆರೋಪಿಸಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟ ಶಾಸಕ ಭರತ್ ​​ರೆಡ್ಡಿ, ನನ್ನ ಮುಂದೆ ಇಂಥಾ ಚಿಲ್ಲರೆ ರಾಜಕೀಯ ನಡೆಯಲ್ಲ. ಜನಾರ್ದನರೆಡ್ಡಿ ಹತ್ಯೆಗೆ ಸಂಚು ಮಾಡುವ ಅಗತ್ಯ ನನಗಿಲ್ಲ. ಜನಾರ್ದನ ರೆಡ್ಡಿ ಏನು ದೊಡ್ಡ ಪಾಳೆಗಾರನಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನನ್ನನ್ನು ಮುಗಿಸಲೆಂದೇ ಫೈರಿಂಗ್ ಮಾಡಿದ್ದಾರೆ; ಜನಾರ್ದನ ರೆಡ್ಡಿ ಆರೋಪ

ಘಟನೆ ಬಗ್ಗೆ ಗೃಹಸಚಿವ ಡಾ. ಜಿ ಪರಮೇಶ್ವರ್ ಶಾಸಕ ಭರತ್​ ರೆಡ್ಡಿಯಿಂದ ಮಾಹಿತಿ ಪಡೆದು ಕೊಂಡಿದ್ದಾರೆ. ಇನ್ನು ಪರಿಸ್ಥಿತಿ ಸುಧಾರಿಸದ ಹಿನ್ನೆಲೆ ಘಟನಾ ಸ್ಥಳದ 200 ಮೀ. ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್​ ಆದೇಶ ಹೊರಡಿಸಿದ್ದಾರೆ. ಜನಾರ್ದನ ರೆಡ್ಡಿ ಬಂಧಿಸುವಂತೆ ಅವರ ನಿವಾಸದೆದುರೇ ಶಾಸಕ ಭರತ್ ರೆಡ್ಡಿ ಠಿಕಾಣಿ ಹೂಡಿದ್ದರೆ, ಇತ್ತ ಶ್ರೀರಾಮುಲು ರೆಡ್ಡಿ ನಿವಾಸದಲ್ಲೇ ಉಳಿದುಕೊಂಡಿದ್ದಾರೆ.

ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಎಫ್​ಐಆರ್

ಘಟನೆ ಸಂಬಂಧ ಶಾಸಕ ಜನಾರ್ದನರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಅಲಿಖಾನ್​​​, ದಮ್ಮೂರ ಶೇಖರ್ ಸೇರಿ 11 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 am, Fri, 2 January 26

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ