AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಭರ್ಜರಿ ಬೇಟೆ: ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ಸೈಟು, ಆಭರಣ ರಾಶಿ! ಬೊಲೆರೋ ಗಾಡಿಯಲ್ಲೂ ರಹಸ್ಯ ಕಡತಗಳು!

ಬಳ್ಳಾರಿಯ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಅವರ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, 14 ಸೈಟ್, 44 ಎಕರೆ ಜಮೀನು, 600 ಗ್ರಾಂ ಚಿನ್ನ ಹಾಗೂ 8.5 ಲಕ್ಷ ನಗದು ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಶಿವಣ್ಣ ಅಕ್ರಮ ಆಸ್ತಿ ಕಂಡು ಲೋಕಾಯುಕ್ತ ಅಧಿಕಾರಿಗಳೇ ದಂಗಾಗಿ ಹೋಗಿದ್ದಾರೆ!

ಲೋಕಾಯುಕ್ತ ಭರ್ಜರಿ ಬೇಟೆ: ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ಸೈಟು, ಆಭರಣ ರಾಶಿ! ಬೊಲೆರೋ ಗಾಡಿಯಲ್ಲೂ ರಹಸ್ಯ ಕಡತಗಳು!
ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಮನೆಯಲ್ಲಿ ಸಿಕ್ಕ ನಗದು, ಬಂಗಾರ, ಬೆಳ್ಳಿ ಆಭರಣಗಳುImage Credit source: tv9
ವಿನಾಯಕ ಬಡಿಗೇರ್​
| Edited By: |

Updated on:Apr 08, 2026 | 9:17 AM

Share

ಬಳ್ಳಾರಿ, ಏಪ್ರಿಲ್ 8: ಗಣಿನಾಡು ಬಳ್ಳಾರಿಯಲ್ಲಿ (Ballari) ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ (Lokayukta Raid)  ಮುಂದುವರಿದಿದೆ. ಏಪ್ರಿಲ್ 7ರ ಮಂಗಳವಾರ ಬೆಳ್ಳಂಬೆಳಿಗ್ಗೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಅಕ್ರಮದ ಜಾಲವನ್ನು ಬಯಲಿಗೆಳೆದಿದ್ದಾರೆ.

ಶಿವಣ್ಣ ಕಳೆದ ಹತ್ತು ವರ್ಷಗಳಿಂದ ಒಂದೇ ಕಡೆಯಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಹತ್ತಕ್ಕೂ ಹೆಚ್ಚು ಭ್ರಷ್ಟಾಚಾರದ ದೂರುಗಳು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದವು. ಬಳ್ಳಾರಿ ನಗರದ ಹೊಸಪೇಟೆ ರಸ್ತೆಯಲ್ಲಿರುವ ಅವರ ನಿವಾಸ, ಕಚೇರಿ ಮತ್ತು ಅವರು ಬಳಸುವ ಸರ್ಕಾರಿ ಬೊಲೆರೋ ವಾಹನವನ್ನೂ ಅಧಿಕಾರಿಗಳು ಬಿಡದೆ ತಪಾಸಣೆ ನಡೆಸಿದ್ದಾರೆ. ಸುಮಾರು 12 ಗಂಟೆಗಳ ಸುದೀರ್ಘ ಪರಿಶೀಲನೆಯ ನಂತರ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

ಪತ್ತೆಯಾದ ಅಕ್ರಮ ಆಸ್ತಿಗಳ ವಿವರ

ಲೋಕಾಯುಕ್ತ ದಾಳಿಯ ವೇಳೆ ಅಧಿಕಾರಿಯ ಮನೆಯಲ್ಲಿ ಸಿಕ್ಕಿರುವ ಆಸ್ತಿಗಳ ಪಟ್ಟಿ ಬೆಚ್ಚಿಬೀಳಿಸುವಂತಿದೆ;

  • ಜಮೀನು: ವಿವಿಧೆಡೆ ಒಟ್ಟು 44 ಎಕರೆ ಕೃಷಿ ಭೂಮಿ.
  • ನಿವೇಶನಗಳು: ಬಳ್ಳಾರಿ ನಗರದಲ್ಲಿ 14 ಸೈಟ್‍ಗಳು.
  • ಮನೆಗಳು: ಬಳ್ಳಾರಿ ನಗರದಲ್ಲೇ 3 ಸುಸಜ್ಜಿತ ಮನೆಗಳು.
  • ನಗದು: ಮನೆಯಲ್ಲಿ 8.5 ಲಕ್ಷ ರೂ. ನಗದು ಮತ್ತು ಬ್ಯಾಂಕ್ ಖಾತೆಯಲ್ಲಿ 20 ಲಕ್ಷ ರೂ. ಹಣ.
  • ಚಿನ್ನಾಭರಣ: ಸುಮಾರು 600 ಗ್ರಾಂ ಬಂಗಾರ.
  • ವಾಹನಗಳು: ಮೂರು ದ್ವಿಚಕ್ರ ವಾಹನಗಳು.

ಇದನ್ನೂ ಓದಿ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಅಧಿಕಾರಿಗಳು

ಇದಲ್ಲದೆ, ಇನ್ನೂ ಹಲವು ಬೇನಾಮಿ ಆಸ್ತಿಗಳ ಬಗ್ಗೆ ದಾಖಲೆಗಳು ಸಿಕ್ಕಿದ್ದು, ಲೋಕಾಯುಕ್ತ ತಂಡವು ಹೆಚ್ಚಿನ ತನಿಖೆ ಮುಂದುವರಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:22 am, Wed, 8 April 26

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ