ಕರ್ನಾಟಕದ ಹಲವು ಆಸ್ಪತ್ರೆಗಳಿಗೆ ಪೂರೈಕೆಯಾಗಿದೆ ಬಾಣಂತಿಯರ ಸಾವಿಗೆ ಕಾರಣವಾಗಿದ್ದ ಔಷಧಿ: ಹೆಚ್ಚಿದ ಆತಂಕ

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಐವರು ಬಾಣಂತಿಯರ ಸಾವಿಗೆ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣವೆಂದು ಆರೋಪಿಸಲಾಗಿದೆ. ಕರ್ನಾಟಕ ಆರೋಗ್ಯ ಇಲಾಖೆ ಪಶ್ಚಿಮ ಬಂಗಾಳದ ಔಷಧ ಕಂಪನಿಯ ವಿರುದ್ಧ ಪ್ರಕರಣ ದಾಖಲಿಸಿದೆ. ಒಟ್ಟು 9 ಬ್ಯಾಚ್‌ಗಳ ದ್ರಾವಣಗಳು ಉಪಯೋಗವಲ್ಲ ಎಂದು ಕಂಡುಬಂದಿದ್ದು, ಇತರ ಜಿಲ್ಲಾ ಆಸ್ಪತ್ರೆಗಳಿಗೂ ಇದರ ಪೂರೈಕೆಯಾಗಿತ್ತು. ಈ ಘಟನೆ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಹಲವು ಆಸ್ಪತ್ರೆಗಳಿಗೆ ಪೂರೈಕೆಯಾಗಿದೆ ಬಾಣಂತಿಯರ ಸಾವಿಗೆ ಕಾರಣವಾಗಿದ್ದ ಔಷಧಿ: ಹೆಚ್ಚಿದ ಆತಂಕ
ಬಿಮ್ಸ್​
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:Dec 17, 2024 | 2:22 PM

ಬೆಂಗಳೂರು, ಡಿಸೆಂಬರ್​ 13: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಐವರು ಬಾಣಂತಿಯರು ಮೃತಪಟ್ಟಿರುವ ವಿಚಾರ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಬಾಣಂತಿಯರ ಸಾವು ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಬಾಣಂತಿಯರ ಸಾವಿಗೆ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣವೆಂದು ಬೆಂಗಳೂರಿನ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಸಲ್ಲಿಸಿದ ವರದಿಯಲ್ಲಿ ಉಲ್ಲೇಖವಾಗಿದೆ. 9 ಬ್ಯಾಚ್ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು, ಹಾವೇರಿ, ಗದಗ ಜಿಲ್ಲಾಸ್ಪತ್ರೆಗಳಿಗೆ ಕೂಡ ಪೂರೈಕೆಯಾಗಿತ್ತು.

9 ಬ್ಯಾಚ್ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ತಲಾ ಮೂರು ಬ್ಯಾಚ್​ ಶಿವಮೊಗ್ಗ ಮತ್ತು ಚಿಕ್ಕಮಗಳೂರಿಗೆ ಪೂರೈಕೆಯಾಗಿದ್ದವು. ಬೆಂಗಳೂರು, ಹಾವೇರಿ, ಗದಗಕ್ಕೆ ತಲಾ ಒಂದು ಬ್ಯಾಚ್ ಪೂರೈಕೆಯಾಗಿತ್ತು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿದ್ದ ಕಂಪನಿ ವಿರುದ್ಧ ಕೇಸ್​

ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿದ್ದ ಪಶ್ಚಿಮ ಬಂಗಾಳದ ಫಾರ್ಮಾಸ್ಯುಟಿಕಲ್ಸ್ ಔಷಧ ಕಂಪನಿ ವಿರುದ್ಧ ಆರೋಗ್ಯ ಇಲಾಖೆ ಹೈಕೋರ್ಟ್​ನಲ್ಲಿ ಪ್ರಕರಣ ದಾಖಲಿಸಿದೆ. ಫಾರ್ಮಾಸ್ಯುಟಿಕಲ್ಸ್ ಔಷಧ ಕಂಪನಿ ಒಟ್ಟು 192 ಬ್ಯಾಚ್ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿತ್ತು. ಇದರಲ್ಲಿ 22 ಬ್ಯಾಚ್​ಗಳು ಉಪಯೋಗಕ್ಕೆ ಯೋಗ್ಯವಲ್ಲ (Not standard quality) ಎಂದು ಕರ್ನಾಟಕ ಔಷಧ ನಿಯಂತ್ರಣ ಇಲಾಖೆ ವರದಿ ನೀಡಿದೆ.

ಇದನ್ನೂ ಓದಿ: ಬಿಮ್ಸ್​ನಲ್ಲಿ ಬಾಣಂತಿಯರ ಸಾವು: ತಡಿಹಿಡಿದಿದ್ದ ರಿಂಗರ್ ಲ್ಯಾಕ್ಟೇಟ್ ಮತ್ತೆ ಬಿಡುಗಡೆಯಾಗಿದ್ದು ಹೇಗೆ?

ಆದರೆ, ಫಾರ್ಮಾಸ್ಯುಟಿಕಲ್ಸ್ ಔಷಧ ಕಂಪನಿ ತಾನು ಪೂರೈಸಿದ್ದ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಯೋಗ್ಯ ಎಂದು ಹೈಕೋರ್ಟ್​ ಕೇಂದ್ರ ಔಷಧ ನಿಯಂತ್ರಣ ಇಲಾಖೆ ನೀಡಿದ್ದ ವರದಿಯನ್ನು ಸಲ್ಲಿಸಿತ್ತು. ಆದರೆ, ಕೇಂದ್ರ ಔಷಧ ನಿಯಂತ್ರಣ ಇಲಾಖೆ ವರದಿ 13 ಬ್ಯಾಚ್​ಗಳು ಮಾತ್ರ ಬಳಸಲು ಯೋಗ್ಯ ಎಂದು ವರದಿ ನೀಡಿತ್ತು. ಇನ್ನುಳಿದ 9 ಬ್ಯಾಚ್​ ಔಷಧಿಗಳು ಯೋಗ್ಯವಲ್ಲ ಎಂದು ಕೇಂದ್ರ ಔಷಧ ನಿಯಂತ್ರಣ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.

ಕೇಂದ್ರ ಔಷಧ ನಿಯಂತ್ರಣ ಇಲಾಖೆ ವರದಿ ಆಧರಿಸಿ ಕರ್ನಾಟಕ ಔಷಧ ನಿಯಂತ್ರಣ ಇಲಾಖೆ 9 ಬ್ಯಾಚ್​​ಗಳ ಮೇಲೆ ಪ್ರತ್ಯೇಕ ಪ್ರಕರಣ ದಾಖಲಿಸಿ ಕಾನೂನು ಹೋರಾಟಕ್ಕೆ ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:00 pm, Fri, 13 December 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ