ಬಳ್ಳಾರಿ: ಮಹಾನಗರ ಪಾಲಿಕೆ ಮೇಯರ್- ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ
ನವೆಂಬರ್ 18ರಂದು ಬಳ್ಳಾರಿ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತರು ಫೋಷಿಸಿದ್ದಾರೆ. 6 ತಿಂಗಳಿಂದ ಬಳ್ಳಾರಿ ಜಿಲ್ಲೆಯ ಮೇಯರ್-ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಸದ್ಯ ಈ ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ.
ಬಳ್ಳಾರಿ: ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ 18ರಂದು ಬಳ್ಳಾರಿ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತರು ಫೋಷಿಸಿದ್ದಾರೆ. 6 ತಿಂಗಳಿಂದ ಬಳ್ಳಾರಿ ಜಿಲ್ಲೆಯ ಮೇಯರ್-ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಸದ್ಯ ಈ ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ.
ಒಟ್ಟು 39 ವಾರ್ಡ್ಗಳಿರುವ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. 39 ವಾರ್ಡ್ಗಳ ಪೈಕಿ 21 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಗೆದ್ದ ನಾಲ್ವರು ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಒಟ್ಟು 25 ಸಂಖ್ಯೆ ಬಲಾ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. 13 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ವಿರೋಧ ಪಕ್ಷ ಸ್ಥಾನಕ್ಕೆ ಸೀಮಿತವಾಗಿದೆ. ಮಹಾನಗರ ಪಾಲಿಕೆಯ ಚುನಾವಣೆಯಾದ 6 ತಿಂಗಳ ನಂತರ ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.
ಇದನ್ನೂ ಓದಿ:
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ: ಅಭ್ಯರ್ಥಿಗಳ ಆಯ್ಕೆಯಾಗಿ 5 ವಾರ; ಆದರೆ ಇನ್ನೂ ಸಿಕ್ಕಿಲ್ಲ ಅಧಿಕಾರ
ಉಪಚುನಾವಣೆಯಲ್ಲಿನ ಸೋಲಿನಿಂದಾಗಿಯೇ ಇಂಧನ ಬೆಲೆ ಕಡಿಮೆ ಮಾಡಿದ್ದು: ಕಾಂಗ್ರೆಸ್ ನಾಯಕ ಪಿ ಚಿದಂಬರಂ