AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ballari News: ಬಳ್ಳಾರಿ; ಪರಿಷ್ಕೃತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೊಂದಣಿಗೆ ಆಹ್ವಾನ

ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೊಂದಾಯಿಸಿಕೊಳ್ಳಬಹುದು ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Ballari News: ಬಳ್ಳಾರಿ; ಪರಿಷ್ಕೃತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೊಂದಣಿಗೆ ಆಹ್ವಾನ
ದಾಳಿಂಬೆ ಬೆಳೆ (ಸಾಂದರ್ಭಿಕ ಚಿತ್ರ)
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: Ganapathi Sharma|

Updated on: Jul 20, 2023 | 5:12 PM

Share

ಬಳ್ಳಾರಿ, ಜುಲೈ 20: ಬಳ್ಳಾರಿ ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ (weather based crop insurance scheme) ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೊಂದಾಯಿಸಿಕೊಳ್ಳಬಹುದು ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಪ್ರಕೃತಿ ವಿಕೋಪಗಳು / ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ (ಗ್ರಾಮಪಂಚಾಯಿತಿ) ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರವನ್ನು ನೀಡುವುದರ ಮೂಲಕ ರೈತರಿಗೆ ನೆರವಾಗುವುದು ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆವಿಮೆ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ವಿಮಾ ಯೋಜನೆಯಡಿ ಒಳಪಡುವ ಬೆಳೆಗಳು ಹಸಿ ಮೆಣಸಿನಕಾಯಿ ಮತ್ತು ದಾಳಿಂಬೆ ಬೆಳೆಗಳಾಗಿವೆ.

ಹಸಿ ಮೆಣಸಿನಕಾಯಿ

ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ಹಸಿ ಮೆಣಸಿನಕಾಯಿ ಸಂಬಂಧಿತ ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟೇರ್​​ಗೆ ವಿಮಾ ಮೊತ್ತ ರೂ. 71 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ. 3550 ಆಗಿರುತ್ತದೆ.

ದಾಳಿಂಬೆ:

ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ದಾಳಿಂಬೆಗೆ ಸಂಬಂಧಿತ ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟೇರ್​​ಗೆ ವಿಮಾ ಮೊತ್ತ 1 ಲಕ್ಷ 27 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.6350 ಆಗಿರುತ್ತದೆ.

ರೈತರು ಅಗತ್ಯ ದಾಖಲೆಗಳೊಂದಿಗೆ ಎರಡು ಬೆಳೆಗಳ ವಿಮೆಗೆ ನೊಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿರುತ್ತದೆ.

ಇದನ್ನೂ ಓದಿ: ರಾಮುಲು ಆಸಕ್ತಿ ವಹಿಸಿ ರಾಯಲ್ ವೃತ್ತದಲ್ಲಿ ಆರಂಭಿಸಿದ್ದ ಲೆಬೆನಾನ್ ಕ್ಲಾಕ್ ಟವರ್ ನಿರ್ಮಾಣಕ್ಕೆ ಕಾಂಗ್ರೆಸ್​​ ಸರ್ಕಾರದಿಂದ ಬ್ರೇಕ್

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಪಂ) ದೂ: 08392-278177 ಹಾಗೂ ಮೊ.9480257282, ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಪಂ) ದೂ:08395-260389 ಹಾಗೂ ಮೊ.9740934208, ಕಂಪ್ಲಿ ಮತ್ತು ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಪಂ) ದೂ:08396 -222066 ಹಾಗೂ ಮೊ.9448910277 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ