ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ವಿಮ್ಸ್‌ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲು

ಬಳ್ಳಾರಿಯ ಪ್ರತಿಷ್ಠಿತ ವಿಮ್ಸ್ ಆಸ್ಪತ್ರೆಯ ನಿರ್ದೇಶಕ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ವಿಮ್ಸ್​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಸಿಸ್ಟಮ್ ಇಂಜಿನಿಯರ್ ಆಗಿದ್ದ ಮಹಿಳೆಯಿಂದ ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ನಿರ್ದೇಶಕ ಗಂಗಾಧರ್ ಗೌಡ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ವಿಮ್ಸ್‌ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲು
ಬಳ್ಳಾರಿ ವಿಮ್ಸ್ ಆಸ್ಪತ್ರೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 30, 2023 | 8:00 PM

ಬಳ್ಳಾರಿ, ನವೆಂಬರ್​​ 30: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಬಳ್ಳಾರಿಯ ಪ್ರತಿಷ್ಠಿತ ವಿಮ್ಸ್ ಆಸ್ಪತ್ರೆಯ (vims hospital) ನಿರ್ದೇಶಕ ಗಂಗಾಧರ್ ಗೌಡ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ವಿಮ್ಸ್​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಸಿಸ್ಟಮ್ ಇಂಜಿನಿಯರ್ ಆಗಿದ್ದ ನೇತ್ರಾವತಿ ಎನ್ನುವರಿಂದ ಬಳ್ಳಾರಿಯ ಮಹಿಳಾ ಠಾಣೆಯಲ್ಲಿ ದೂರು ನೀಡಲಾಗಿದೆ. ನೇತ್ರಾವತಿ ದೂರಿನ‌ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ನೇಮಕಾತಿ ಆದೇಶ ಪ್ರತಿ ಪಡೆಯಲು ಹೋದಾಗ ಕೈ ಚಾಚಿ ಅಪ್ಪಿಕೊಳ್ಳಲು ಬಂದಿದ್ದರು. ಸಹಕಾರ ಮಾಡದಿದ್ದಕ್ಕೆ ಕೆಲಸದಿಂದ ತೆಗೆಯಲಾಗಿದೆ ಎಂದು ನೆತ್ರಾವತಿ ಆರೋಪಿಸಿದ್ದಾರೆ. ವಿಮ್ಸ್ ಸಿಬ್ಬಂದಿಗಳಾಗಿರುವ  ಪಾರ್ವತಿ ಹಾಗೂ ಶಿವು ನಾಯ್ಕ ಎನ್ನುವರಿಂದ ಗಂಗಾಧರ್ ಗೌಡ ಅವರ ಬಳಿ ಹೋಗುವಂತೆ ಕಿರುಕುಳ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ

ಹಾಸನ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನಿಗೆ ಗ್ರಾಮಸ್ಥರೆಲ್ಲರೂ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗ್ರಾಮದಲ್ಲಿ ನಡೆದಿತ್ತು.

ಇದನ್ನೂ ಓದಿ: ಹಾಸನ: ಮದುವೆಗೆ ಒಪ್ಪದ ಹಿನ್ನೆಲೆ ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ

ಮುಖ್ಯ ಶಿಕ್ಷಕ ಮಂಜುನಾಥ್‌, ಏಳನೇ ತರಗತಿ ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ತೋರಿದ್ದರಂತೆ. ಹೀಗಾಗಿ ವಿದ್ಯಾರ್ಥಿನಿಯರು ಪೋಷಕರ ಬಳಿ ಅಳಲು ತೋಡಿಕೊಂಡಿದ್ದರು. ಕೂಡಲೇ ಪೋಷಕರು ಶಾಲೆಯ ಎಸ್‌ಡಿ‌ಎಂಸಿ ಅಧ್ಯಕ್ಷರಿಗೆ ದೂರು ನೀಡಿದ್ದು, ಅವರು ಈ ಕುರಿತು ಬಿಇಒ ಬಳಿ ಹೇಳಿದ್ದರು.

ಬೈಕ್​ಗೆ ಗೂಡ್ಸ್ ವಾಹನ ಡಿಕ್ಕಿ: ದಂಪತಿ ಸಾವು

ಬೆಂಗಳೂರು: ಬೈಕ್​ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿರುವಂತಹ ಘಟನೆ ನೈಸ್ ರಸ್ತೆಯ ವಜ್ರಮುನೇಶ್ವರ ಅಂಡರ್ ಪಾಸ್ ಬಳಿ ನಡೆದಿದೆ. ನಿರ್ಮಲಾ(45) ಬೈಯಣ್ಣ (55) ಮೃತ ದಂಪತಿ. ಅತಿವೇಗವಾಗಿ ವಾಹನ ಚಲಾಯಿಸಿ ಬೈಕ್​ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:59 pm, Thu, 30 November 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್