ಬಳ್ಳಾರಿ, ನವೆಂಬರ್ 30: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಬಳ್ಳಾರಿಯ ಪ್ರತಿಷ್ಠಿತ ವಿಮ್ಸ್ ಆಸ್ಪತ್ರೆಯ (vims hospital) ನಿರ್ದೇಶಕ ಗಂಗಾಧರ್ ಗೌಡ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ವಿಮ್ಸ್ನ ಟ್ರಾಮಾ ಕೇರ್ ಸೆಂಟರ್ನಲ್ಲಿ ಸಿಸ್ಟಮ್ ಇಂಜಿನಿಯರ್ ಆಗಿದ್ದ ನೇತ್ರಾವತಿ ಎನ್ನುವರಿಂದ ಬಳ್ಳಾರಿಯ ಮಹಿಳಾ ಠಾಣೆಯಲ್ಲಿ ದೂರು ನೀಡಲಾಗಿದೆ. ನೇತ್ರಾವತಿ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ನೇಮಕಾತಿ ಆದೇಶ ಪ್ರತಿ ಪಡೆಯಲು ಹೋದಾಗ ಕೈ ಚಾಚಿ ಅಪ್ಪಿಕೊಳ್ಳಲು ಬಂದಿದ್ದರು. ಸಹಕಾರ ಮಾಡದಿದ್ದಕ್ಕೆ ಕೆಲಸದಿಂದ ತೆಗೆಯಲಾಗಿದೆ ಎಂದು ನೆತ್ರಾವತಿ ಆರೋಪಿಸಿದ್ದಾರೆ. ವಿಮ್ಸ್ ಸಿಬ್ಬಂದಿಗಳಾಗಿರುವ ಪಾರ್ವತಿ ಹಾಗೂ ಶಿವು ನಾಯ್ಕ ಎನ್ನುವರಿಂದ ಗಂಗಾಧರ್ ಗೌಡ ಅವರ ಬಳಿ ಹೋಗುವಂತೆ ಕಿರುಕುಳ ಎಂದು ಆರೋಪಿಸಲಾಗಿದೆ.
ಹಾಸನ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನಿಗೆ ಗ್ರಾಮಸ್ಥರೆಲ್ಲರೂ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗ್ರಾಮದಲ್ಲಿ ನಡೆದಿತ್ತು.
ಇದನ್ನೂ ಓದಿ: ಹಾಸನ: ಮದುವೆಗೆ ಒಪ್ಪದ ಹಿನ್ನೆಲೆ ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ
ಮುಖ್ಯ ಶಿಕ್ಷಕ ಮಂಜುನಾಥ್, ಏಳನೇ ತರಗತಿ ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ತೋರಿದ್ದರಂತೆ. ಹೀಗಾಗಿ ವಿದ್ಯಾರ್ಥಿನಿಯರು ಪೋಷಕರ ಬಳಿ ಅಳಲು ತೋಡಿಕೊಂಡಿದ್ದರು. ಕೂಡಲೇ ಪೋಷಕರು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಿಗೆ ದೂರು ನೀಡಿದ್ದು, ಅವರು ಈ ಕುರಿತು ಬಿಇಒ ಬಳಿ ಹೇಳಿದ್ದರು.
ಬೆಂಗಳೂರು: ಬೈಕ್ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿರುವಂತಹ ಘಟನೆ ನೈಸ್ ರಸ್ತೆಯ ವಜ್ರಮುನೇಶ್ವರ ಅಂಡರ್ ಪಾಸ್ ಬಳಿ ನಡೆದಿದೆ. ನಿರ್ಮಲಾ(45) ಬೈಯಣ್ಣ (55) ಮೃತ ದಂಪತಿ. ಅತಿವೇಗವಾಗಿ ವಾಹನ ಚಲಾಯಿಸಿ ಬೈಕ್ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:59 pm, Thu, 30 November 23