ಬಳ್ಳಾರಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್

ಬಳ್ಳಾರಿಯ ತೋರಣಗಲ್​ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಂಜುನಾಥ್ ಮೇಲೆ ಗುರುವಾರ ಬೆಳಗ್ಗೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಸ್ಥಳ ಮಹಜರಿನ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಲ್ಲದೆ, ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದ. ಹೀಗಾಗಿ ಪೊಲೀಸರು ಆತನ ಬಲಗಾಲಿಗೆ ಫೈರಿಂಗ್ ಮಾಡಿದ್ದಾರೆ.

ಬಳ್ಳಾರಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್
ಆರೋಪಿ ಮಂಜುನಾಥ್
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: Ganapathi Sharma

Updated on: Jan 16, 2025 | 11:09 AM

ಬಳ್ಳಾರಿ, ಜನವರಿ 16: ಬಳ್ಳಾರಿ ಜಿಲ್ಲೆಯ ತೋರಣಗಲ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಂಜುನಾಥ್ (26) ಮೇಲೆ ಗುರುವಾರ ಬೆಳಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಗುಂಡಿನ ದಾಳಿ ನಡೆಸಬೇಕಾಯಿತು ಎನ್ನಲಾಗಿದೆ.

ಸೋಮವಾರ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆಗೆ ಪೊಲೀಸರು ಮೂರು ತಂಡ ರಚಿಸಿದ್ದರು. ಕೊಪ್ಪಳದ ಹುಲಗಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಪಂಚಾನಾಮೆಗೆ ಹೋದಾಗ ಆತ, ಹೆಡ್ ಕಾನ್ಸ್​​​ಟೇಬಲ್ ರಘುಪತಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಹೀಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ಪಿಎಸ್​ಐ ಡಾಕೇಶ್ ಆರೋಪಿಯ ಬಲಗಾಲಿಗೆ ಮೇಲೆ ಪೈರಿಂಗ್ ಮಾಡಿದ್ದರು. ಸದ್ಯ ಆರೋಪಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಾಯದಿಂದ ಪಾರಾದ ಮಗು

ಅತ್ಯಾಚಾರಕ್ಕೊಳಗಾಗಿರುವ ಬಾಲಕಿ ಸದ್ಯ ಅಪಾಯದಿಂದ ಪಾರಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಜನವರಿ 13ರ ಸೋಮವಾರದಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಆರೋಪಿ ಮಂಜುನಾಥ ಬಾಲಕಿಯನ್ನು ಹೊಂಚು ಹಾಕಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದುದು ಮತ್ತು ಆತನ ಚಲನವಲದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿತ್ತು.

ಬಾಲಕಿಯನ್ನು ಕರೆದುಕೊಂಡು ಹೋಗುವ ಮುನ್ನ ಆರೋಪಿ ಬಾರ್‌ನಲ್ಲಿ ಮದ್ಯಪಾನ ಮಾಡಿದ್ದ. ಕುಡಿದ ಮತ್ತಿನಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದ. ಬಳಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಆರೋಪಿ ಹುಡುಕಾಟಕ್ಕೆ ಬಳ್ಳಾರಿ ಎಸ್​​ಪಿ ಮೂರು ಪೊಲೀಸ್ ತಂಡ ರಚನೆ ಮಾಡಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ವಿಜಯನಗರ ಜಿಲ್ಲೆ ಕಮಲಾಪುರ ಮೂಲದ ಆರೋಪಿ ಮಂಜುನಾಥನನ್ನು ಬುಧವಾರ ಕೊಪ್ಪಳದ ಹುಲಿಗಿಯಲ್ಲಿ ಬಂಧಸಲಾಗಿತ್ತು. ಗುರುವಾರ ಬೆಳಿಗ್ಗೆ ತೋರಣಗಲ್‌ನಲ್ಲಿ ಸ್ಥಳ ಮಹಜರಿಗೆ ಆರೋಪಿಯನ್ನು ಪೊಲೀಸರು ಕರೆ ತಂದಿದ್ದರು. ಈ ವೇಳೆ ಆತ ತಪ್ಪಿಕೊಳ್ಳಲು ಯತ್ನಿಸಿದ್ದ. ಅಲ್ಲದೆ, ಸ್ಥಳದಲ್ಲಿದ್ದ ಇತರ ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಮುಳ್ಳುಗಳ ಮೇಲೆ ಮಲಗುವ ಬಾಬಾ
Video: ಮುಳ್ಳುಗಳ ಮೇಲೆ ಮಲಗುವ ಬಾಬಾ
BBL 2025: ಬೌಲ್ಡ್ ಆಗುವುದನ್ನು ತಪ್ಪಿಸಿ ಅರ್ಧಶತಕ ಸಿಡಿಸಿದ ಸ್ಟೀವ್ ಸ್ಮಿತ್
BBL 2025: ಬೌಲ್ಡ್ ಆಗುವುದನ್ನು ತಪ್ಪಿಸಿ ಅರ್ಧಶತಕ ಸಿಡಿಸಿದ ಸ್ಟೀವ್ ಸ್ಮಿತ್
ಬಿಗ್ ಬಾಸ್​ನಲ್ಲಿ ಧನರಾಜ್ ಮೋಸದಾಟಕ್ಕೆ ಎಲಿಮಿನೇಷನ್ ಶಿಕ್ಷೆ?
ಬಿಗ್ ಬಾಸ್​ನಲ್ಲಿ ಧನರಾಜ್ ಮೋಸದಾಟಕ್ಕೆ ಎಲಿಮಿನೇಷನ್ ಶಿಕ್ಷೆ?
ಐಶ್ವರ್ಯ ವೃದ್ಧಿಯಲ್ಲಿ ಉಪ್ಪಿಗಿದೆ ಬಹಳ ಮಹತ್ವ! ಏನದು? ಇಲ್ಲಿದೆ ನೋಡಿ
ಐಶ್ವರ್ಯ ವೃದ್ಧಿಯಲ್ಲಿ ಉಪ್ಪಿಗಿದೆ ಬಹಳ ಮಹತ್ವ! ಏನದು? ಇಲ್ಲಿದೆ ನೋಡಿ
ದಿನ ಭವಿಷ್ಯ: ಜನವರಿ 16ರಂದು ಹೇಗಿದೆ ದ್ವಾದಶ ರಾಶಿಗಳ ಫಲಾಫಲ? ಇಲ್ಲಿದೆ ನೋಡಿ
ದಿನ ಭವಿಷ್ಯ: ಜನವರಿ 16ರಂದು ಹೇಗಿದೆ ದ್ವಾದಶ ರಾಶಿಗಳ ಫಲಾಫಲ? ಇಲ್ಲಿದೆ ನೋಡಿ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ