ಬಳ್ಳಾರಿ: ಮಧ್ಯರಾತ್ರಿ ಎಟಿಎಂ ಕಳವು ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಪೊಲೀಸ್, ರೋಚಕ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ

ಬಳ್ಳಾರಿ ಪೊಲೀಸರ ಸಿನಿಮೀಯ ಕಾರ್ಯಾಚರಣೆಯಲ್ಲಿ ಆಂಧ್ರ ಪ್ರದೇಶ ಮೂಲದ ಎಟಿಎಂ ದರೋಡೆಕೋರನೊಬ್ಬನನ್ನು ಸೆರೆ ಹಿಡಿಯಲಾಗಿದೆ. ಮಧ್ಯರಾತ್ರಿ ನಡೆದ ಮೈ ಜುಂ ಎನ್ನಿಸುವ ಕಾರ್ಯಾಚರಣೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ, ಪೋಲಿಸರ ಕಾರ್ಯಕ್ಕೆ ವಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪೊಲೀಸ್ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ.

ಬಳ್ಳಾರಿ: ಮಧ್ಯರಾತ್ರಿ ಎಟಿಎಂ ಕಳವು ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಪೊಲೀಸ್, ರೋಚಕ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ
ಪೊಲೀಸ್ ಕಾರ್ಯಾಚರಣೆಯ ದೃಶ್ಯದ ಸ್ಕ್ರೀನ್​​ಗ್ರ್ಯಾಬ್
Updated By: Ganapathi Sharma

Updated on: Aug 13, 2025 | 12:30 PM

ಬಳ್ಳಾರಿ, ಆಗಸ್ಟ್ 13: ಮಧ್ಯರಾತ್ರಿ ಎಟಿಎಂಗೆ ನುಗ್ಗಿ ಕಳವು ಮಾಡಲು ಮುಂದಾದವನನ್ನು ರಾತ್ರಿ ಬೀಟ್ ಪೊಲೀಸರು ಹೆಡೆಮುರಿ ಕಟ್ಟಿದ ಅಪರೂಪದ ಸನ್ನಿವೇಶಕ್ಕೆ ಬಳ್ಳಾರಿ (Bellary) ಸಾಕ್ಷಿಯಾಗಿದೆ. ಬಳ್ಳಾರಿಯ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನ ಮಾಡಲೆತ್ನಿಸಿದಾತನನ್ನು ಪೊಲೀಸರು (Bellary Police) ಬಂಧಿಸಿದ್ದು, ಆರೋಪಿಯನ್ನು ಆಂಧ್ರ ಪ್ರದೇಶದ ಅನಂತಪುರದ ವೆಂಕಟೇಶ ಎಂದು ಗುರುತಿಸಲಾಗಿದೆ. ಪೊಲೀಸ್ ಕಾರ್ಯಾಚರಣೆಯ ರೋಚಕ ದೃಶ್ಯ ಸಿಸಿಟಿವಿ (CCTV Video) ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಳ್ಳಾರಿಯ ಕಾಳಮ್ಮ ಸರ್ಕಲ್​ನಲ್ಲಿ ರಾತ್ರಿ ನಡೆದಿದ್ದೇನು?

ಆರೋಪಿ ವೆಂಕಟೇಶ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳವು ಮಾಡಲು ಯತ್ನಿಸಿದ್ದಾನೆ. ಎಟಿಎಂ ಬಾಕ್ಸ್ ಹೊತ್ತೊಯ್ಯಲು ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ದೊರೆತಿದೆ. ಎಎಸ್ಐ ಮಲ್ಲಿಕಾರ್ಜುನ ಕಾರ್ಯಾಚರಣೆಗೆ ಧಾವಿಸಿದ್ದು, ಬೀಟ್​​ನ ಇತರ ಪೊಲೀಸರಿಗೂ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸುತ್ತಿದ್ದಂತೆಯೇ ಖದೀಮ ಎಟಿಎಂ ಒಳಗೆ ಇರುವುದು ಕಾಣಿಸಿದೆ. ತಕ್ಷಣವೇ ಎಟಿಎಂ ಒಳ ಧಾವಿಸಿದ ಎಎಸ್ಐ ಮಲ್ಲಿಕಾರ್ಜುನ ಖದೀಮನ ಬಂಧಿಸಲು ಯತ್ನಿಸಿದ್ದಾರೆ. ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಇಬ್ಬರ ಮಧ್ಯೆ ತೀವ್ರ ಜಟಾಪಟಿಯಾಗಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಂ ಎನಿಸುವಂತಿದೆ.

ಪೊಲೀಸ್ ಕಾರ್ಯಾಚರಣೆಯ ಸಿಸಿಟಿವಿ ವಿಡಿಯೋ

ಸ್ವಲ್ಪ ಯಾಮಾರಿದರೂ ಆರೋಪಿಯು ಪೊಲೀಸ್ ಮೇಲೆ ಭಯಾನಕ ದಾಳಿ ಮಾಡುತ್ತಿದ್ದ. ಆದರೆ, ಅಷ್ಟರಲ್ಲಿ ರಾತ್ರಿ ಬೀಟ್​ನ ಮತ್ತೊಬ್ಬ ಕಾನ್ಸ್​​ಟೇಬಲ್ ನಿಂಗಪ್ಪ ಎಎಸ್​ಐ ಸಹಾಯಕ್ಕೆ ಧಾವಿಸಿದ್ದಾರೆ. ನಂತರ ಆರೋಪಿ ವೆಂಕಟೇಶನಿಗೆ ಸರೀ ತದುಕಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ
ದಿವ್ಯಾಂಗ ಮಹಿಳೆಯನ್ನು ಬೈಕ್​​ನಲ್ಲಿ ಬೆನ್ನಟ್ಟಿ ಸಾಮೂಹಿಕ ಅತ್ಯಾಚಾರ
ಹಾಸನ: ಅಪ್ಪನ ಸಾವಿನಿಂದ ಬಯಲಾಯ್ತು ಮಗನ ಹತ್ಯೆ ರಹಸ್ಯ!
ದೇಶಬಿಟ್ಟು ಭಾರತಕ್ಕೆ ಬಂದ ಬಾಲಕಿ ಮೇಲೆ 200 ಮಂದಿಯಿಂದ ಅತ್ಯಾಚಾರ
ಉದಯಪುರದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಇದನ್ನೂ ಓದಿ: ಹಾಸನ: ಅಪ್ಪನ ಸಾವಿನಿಂದ ಬಯಲಾಯ್ತು ಮಗನ ಹತ್ಯೆ ರಹಸ್ಯ! ಉತ್ಖನನ ನಡೆಸಿದಾಗ ಸಿಕ್ತು ಅಸ್ಥಿಪಂಜರ

ಬಳ್ಳಾರಿಯ ರಾತ್ರಿ ಬೀಟ್ ಪೊಲೀಸರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ ಎಸ್​ಪಿ ಶೋಭಾರಾಣಿ ಪೊಲೀಸರ ಕಾರ್ಯಕ್ಕೆ ಮೆಚ್ಚಿ ಸನ್ಮಾನಿಸಿ, ಅಭಿನಂದಿಸಿದ್ದಾರೆ. ಯಾವ ಸಿನಿಮಾಗೂ ಕಡಿಮೆ ಇಲ್ಲದಂತೆ ಎಟಿಎಂ ದರೋಡೆಕೋರನ ವಿರುದ್ಧ ಸೆಣಸಿ ಆತನನ್ನು ಸೆರೆ ಹಿಡಿದ ಬಳ್ಳಾರಿ ಪೊಲೀಸರ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Wed, 13 August 25